AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದ ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆಗೆ ಪ್ರಧಾನಿ ಮೋದಿ ಅಭಿನಂದನೆ

ಜನರ ಪರಸ್ಪರ ಪ್ರಯೋಜನಕ್ಕಾಗಿ ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಹಳೆಯ, ನಿಕಟ ಮತ್ತು ಸೌಹಾರ್ದ ಸಂಬಂಧಗಳನ್ನು ಬಲಪಡಿಸಲು ಶ್ರೀಲಂಕಾ ಅಧ್ಯಕ್ಷರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಶ್ರೀಲಂಕಾದ ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆಗೆ ಪ್ರಧಾನಿ ಮೋದಿ ಅಭಿನಂದನೆ
ರಾನಿಲ್ ವಿಕ್ರಮಸಿಂಘೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 26, 2022 | 6:35 PM

Share

ದೆಹಲಿ: ಶ್ರೀಲಂಕಾದ (Sri Lanka) ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ (Ranil Wickremesinghe) ಅವರನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಸ್ಥಾಪಿತ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ದ್ವೀಪ ರಾಷ್ಟ್ರದ ಜನರ ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಯ ಅನ್ವೇಷಣೆಗೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿರುವುದಾಗಿ ಭಾರತದ ಹೈಮಿಷನ್ ತಿಳಿಸಿದೆ.  73ರ ಹರೆಯದ  ವಿಕ್ರಮಸಿಂಘೆ ಅವರು ಶಾಸಕರಿಂದ ಆಯ್ಕೆಯಾದ ನಂತರ ಶ್ರೀಲಂಕಾದ ಎಂಟನೇ ಅಧ್ಯಕ್ಷರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಚುನಾಯಿತ ಅಧ್ಯಕ್ಷರಿಗೆ ಅಭಿನಂದನಾ ಪತ್ರವನ್ನು ಕಳುಹಿಸಿದ್ದಾರೆ” ಎಂದು ಕೊಲಂಬೊದಲ್ಲಿರುವ ಭಾರತದ ಹೈಕಮಿಷನ್ ಟ್ವೀಟ್‌ನಲ್ಲಿ ತಿಳಿಸಿದೆ. ಸ್ಥಾಪಿತ ಪ್ರಜಾಸತ್ತಾತ್ಮಕ ವಿಧಾನಗಳು, ಸಂಸ್ಥೆಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಮೂಲಕ ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗಾಗಿ ಶ್ರೀಲಂಕಾದ ಜನರಿಗೆ ಭಾರತವು ಬೆಂಬಲವನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ ಎಂದು ಭಾರತದ ಹೈಕಮಿಷನ್ ಹೇಳಿದೆ.

ಜನರ ಪರಸ್ಪರ ಪ್ರಯೋಜನಕ್ಕಾಗಿ ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಹಳೆಯ, ನಿಕಟ ಮತ್ತು ಸೌಹಾರ್ದ ಸಂಬಂಧಗಳನ್ನು ಬಲಪಡಿಸಲು ಶ್ರೀಲಂಕಾ ಅಧ್ಯಕ್ಷರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೊಲಂಬೊದಲ್ಲಿ ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೇ ಅವರು ಮಂಗಳವಾರ ಹೊಸದಾಗಿ ನೇಮಕಗೊಂಡ ಪ್ರಧಾನಿ ದಿನೇಶ್ ಗುಣವರ್ಧನ ಅವರನ್ನು ಭೇಟಿ ಮಾಡಿ ನಾಯಕತ್ವ, ಸರ್ಕಾರ ಮತ್ತು ಭಾರತದ ಜನರ ಶುಭಾಶಯಗಳನ್ನು ತಿಳಿಸಿದ್ದಾರೆ.

ದೀರ್ಘಾವಧಿಯ ಮತ್ತು ನಿಕಟವಾದ ಭಾರತ-ಶ್ರೀಲಂಕಾ ಸಂಬಂಧಗಳನ್ನು ಎಲ್ಲಾ ಕ್ಷೇತ್ರಗಳಲ್ಲಿ ಬಲಪಡಿಸಲು ವಿವಿಧ ಸಾಮರ್ಥ್ಯಗಳಲ್ಲಿನ ಮಾರ್ಗದರ್ಶನಕ್ಕಾಗಿ ಪ್ರಧಾನ ಮಂತ್ರಿಗೆ ಹೈಕಮಿಷನರ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಶ್ರೀಲಂಕಾಕ್ಕೆ ಭಾರತ ಸರ್ಕಾರದ ಸುಮಾರು 4 ಶತಕೋಟಿ ಅಮೆರಿಕನ್ ಡಾಲರ್ ನೆರವು ನೀಡಿದೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?