Modi’s Europe visit ಡೆನ್ಮಾರ್ಕ್ ಪ್ರವಾಸ ಮುಗಿಸಿ ಫ್ರಾನ್ಸ್​​ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಕೋಪನ್‌ಹೇಗನ್‌ಗೆ ನರೇಂದ್ರ ಮೋದಿಯವರ ಭೇಟಿ ಮುಕ್ತಾಯಗೊಂಡಿದೆ. ಪ್ರಧಾನಿ ಮೋದಿ ಈಗ ಫ್ರೆಂಚ್ ಅಧ್ಯಕ್ಷ ಇಮ್ಯಾನುವಲ್ ಮಾಕ್ರೋನ್ ಅವರೊಂದಿಗೆ ಮಾತುಕತೆ ನಡೆಸಲು ಪ್ಯಾರಿಸ್‌ಗೆ ತೆರಳಿದ್ದಾರೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ...

Modi's Europe visit ಡೆನ್ಮಾರ್ಕ್ ಪ್ರವಾಸ ಮುಗಿಸಿ ಫ್ರಾನ್ಸ್​​ ತಲುಪಿದ ಪ್ರಧಾನಿ ನರೇಂದ್ರ ಮೋದಿ
ಪ್ಯಾರಿಸ್​​ನಲ್ಲಿ ಬಂದಿಳಿದ ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 04, 2022 | 9:24 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ ಡೆನ್ಮಾರ್ಕ್‌ಗೆ ಭೇಟಿ ನೀಡಿ ಅಲ್ಲಿಂದ  ಫ್ರಾನ್ಸ್‌ಗೆ (France)  ತಲುಪಿದ್ದಾರೆ. ಈ ಸಂದರ್ಭದಲ್ಲಿ ಅವರು ನಾರ್ಡಿಕ್ ದೇಶಗಳ ತಮ್ಮ ಸಹವರ್ತಿಗಳೊಂದಿಗೆ ಸರಣಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದು,  ಎರಡನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ(India-Nordic summit) ಭಾಗವಹಿಸಿದರು. ” ಫಲಪ್ರದವಾದ ಡೆನ್ಮಾರ್ಕ್ ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ  ಪ್ಯಾರಿಸ್‌ಗೆ ಪ್ರಯಾಣ ಬೆಳೆಸಿದ್ದಾರೆ ” ಎಂದು ಪ್ರಧಾನ ಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ. “ಡೆನ್ಮಾರ್ಕ್‌ನೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲಾಗಿದೆ. ನಾರ್ಡಿಕ್ ದೇಶಗಳು ಮತ್ತು ಪ್ರದೇಶದೊಂದಿಗೆ ಸಹಯೋಗವನ್ನು ಗಟ್ಟಿಗೊಳಿಸಲಾಗಿದೆ. ಕೋಪನ್‌ಹೇಗನ್‌ಗೆ ನರೇಂದ್ರ ಮೋದಿಯವರ ಭೇಟಿ ಮುಕ್ತಾಯಗೊಂಡಿದೆ. ಪ್ರಧಾನಿ ಮೋದಿ ಈಗ ಫ್ರೆಂಚ್ ಅಧ್ಯಕ್ಷ ಇಮ್ಯಾನುವಲ್ ಮಾಕ್ರೋನ್ ಅವರೊಂದಿಗೆ ಮಾತುಕತೆ ನಡೆಸಲು ಪ್ಯಾರಿಸ್‌ಗೆ ತೆರಳಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ. ಮೂರು ಯುರೋಪಿಯನ್ ರಾಷ್ಟ್ರಗಳ ಭೇಟಿಯ ಎರಡನೇ ಹಂತದಲ್ಲಿ ಬರ್ಲಿನ್‌ನಿಂದ ಮಂಗಳವಾರ ಇಲ್ಲಿಗೆ ಡೆನ್ಮಾರ್ಕ್ ಗೆ ಆಗಮಿಸಿದ ಮೋದಿ, ಮಂಗಳವಾರ ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ “ಫಲಪ್ರದವಾದ ಮಾತುಕತೆ” ನಡೆಸಿದರು. ಮತ್ತು ಆರ್ಥಿಕ ಸಂಬಂಧಗಳ ಕುರಿತು ಚರ್ಚಿಸಲು ವ್ಯಾಪಾರ ಶೃಂಗಸಭೆಯಲ್ಲಿ ಭಾಗವಹಿಸಿದರು. ಅವರು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಡೆನ್ಮಾರ್ಕ್‌ನ ರಾಜಮನೆತನದವರೊಂದಿಗೆ ಸಂವಾದ ನಡೆಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಡೆನ್ಮಾರ್ಕ್‌ನಲ್ಲಿ ನಡೆದ ಎರಡನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದು ಕೊವಿಡ್ ಸಾಂಕ್ರಾಮಿಕ ನಂತರದ ಆರ್ಥಿಕ ಚೇತರಿಕೆ, ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನ ಮತ್ತು ವಿಕಸನಗೊಳ್ಳುತ್ತಿರುವ ಜಾಗತಿಕ ಭದ್ರತಾ ಸನ್ನಿವೇಶದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಶೃಂಗಸಭೆಯಲ್ಲಿ ಡೆನ್ಮಾರ್ಕ್, ಫಿನ್ಲ್ಯಾಂಡ್, ಐಸ್ಲ್ಯಾಂಡ್, ನಾರ್ವೆ ಮತ್ತು ಸ್ವೀಡನ್ ಪ್ರಧಾನ ಮಂತ್ರಿಗಳು ಭಾಗವಹಿಸಿದ್ದರು. ಮೊದಲ ಭಾರತ-ನಾರ್ಡಿಕ್ ಶೃಂಗಸಭೆಯು 2018 ರಲ್ಲಿ ಸ್ಟಾಕ್‌ಹೋಮ್‌ನಲ್ಲಿ ನಡೆದಿತ್ತು.

2 ನೇ ಭಾರತ-ನಾರ್ಡಿಕ್ ಶೃಂಗಸಭೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ನಾರ್ಡಿಕ್ ದೇಶಗಳು ಮತ್ತು ಭಾರತದ ನಡುವಿನ ಸಹಕಾರವನ್ನು ಗಾಢವಾಗಿ ಮುಂದುವರಿಸಲು ಪ್ರತಿಜ್ಞೆ ಮಾಡಿದರು. ಉಕ್ರೇನ್‌ನಲ್ಲಿನ ಸಂಘರ್ಷ, ಬಹುಪಕ್ಷೀಯ ಸಹಕಾರ, ಹಸಿರು ಪರಿವರ್ತನೆ, ಆರ್ಥಿಕತೆ, ನಾವೀನ್ಯತೆ ಮತ್ತು ಡಿಜಿಟಲೀಕರಣ ಮತ್ತು ಹವಾಮಾನ ಬದಲಾವಣೆ ಸೇರಿದಂತೆ ಅಂತರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ತಮ್ಮ ಚರ್ಚೆಗಳನ್ನು ಕೇಂದ್ರೀಕರಿಸಿದರು. ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಮುಕ್ತ ವ್ಯಾಪಾರದ ಪ್ರಾಮುಖ್ಯತೆಯನ್ನು ಮೋದಿ ಪುನರುಚ್ಚರಿಸಿದ್ದಾರೆ. ಅದೇ ವೇಳೆ . ಬಹುಪಕ್ಷೀಯತೆ ಮತ್ತು ಅಂತರಾಷ್ಟ್ರೀಯ ಸಹಕಾರಕ್ಕೆ ತಮ್ಮ ಬಲವಾದ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ. ಹವಾಮಾನ ಬದಲಾವಣೆ, ಕೋವಿಡ್-19 ಸಾಂಕ್ರಾಮಿಕ ರೋಗ, ಜೀವವೈವಿಧ್ಯದ ನಷ್ಟ ಮತ್ತು ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಆಹಾರ ಮತ್ತು ಶಕ್ತಿಯ ಅಭದ್ರತೆಯಂತಹ ಒತ್ತುವ ಸವಾಲುಗಳಿಗೆ ಅಂತರರಾಷ್ಟ್ರೀಯ ಸಹಕಾರ, ಸಾಮೂಹಿಕ ಪ್ರತಿಕ್ರಿಯೆ ಮತ್ತು ಜಾಗತಿಕ ಒಗ್ಗಟ್ಟಿನ ಅಗತ್ಯವಿದೆ ಎಂದು ನಾಯಕರು ಒಪ್ಪಿಕೊಂಡರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:03 pm, Wed, 4 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್