
ನವದೆಹಲಿ, ಮೇ 12: ನರೇಂದ್ರ ಮೋದಿ ಇವತ್ತು ಪಾಕಿಸ್ತಾನ ಹಾಗೂ ಉಗ್ರಗಾಮಿಗಳ ವಿರುದ್ಧ ಕಟುವಾಗಿ ವಾಗ್ದಾಳಿ ನಡೆಸಿದರು. ಭಾರತ ಆರಂಭಿಸಿದ ಆಪರೇಷನ್ ಸಿಂದೂರ (Operation Sindoor) ಇನ್ನೂ ಅಂತ್ಯವಾಗಿಲ್ಲ. ಭಯೋತ್ಪಾದನೆ ಮತ್ತು ಅದರ ಪ್ರಾಯೋಜಕರಿಗೆ ಅವರದ್ದೇ ಭಾಷೆಯಲ್ಲಿ ಭಾರತ ಉತ್ತರ ನೀಡುತ್ತದೆ ಎಂದು ಪ್ರಧಾನಿಗಳು ಹೇಳಿದರು. ಆಪರೇಷನ್ ಸಿಂದೂರ ಶುರುವಾದ ಬಳಿಕ ಅವರು ಮೊದಲ ಬಾರಿಗೆ ಸಾರ್ವಜನಿಕವಾಗಿ ಭಾಷಣ ಮಾಡಿರುವುದು. ಈ ಭಾಷಣದಲ್ಲಿ ಅವರು, ಪಾಕಿಸ್ತಾನವನ್ನು ತೀವ್ರ ರೀತಿಯಲ್ಲಿ ತರಾಟೆಗೆ ತೆಗೆದುಕೊಂಡರು. ಭಾರತದ ಮಿಲಿಟರಿ ಕಾರ್ಯಾಚರಣೆಗೆ ತತ್ತರಗೊಂಡು ಪಾಕಿಸ್ತಾನ ಶಾಂತಿಗಾಗಿ ವಿಶ್ವ ನಾಯಕರ ಬಳಿಕ ಬಿಕ್ಷೆ ಕೇಳಬೇಕಾಗಿ ಬಂದು ಎಂದು ಲೇವಡಿ ಮಾಡಿದರು.
ಇದನ್ನೂ ಓದಿ: ರಕ್ತ, ನೀರು ಒಟ್ಟಿಗೆ ಹರಿಯಲ್ಲ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ
ಈ ಮೇಲಿನವು ನರೇಂದ್ರ ಮೋದಿ ಅವರ ಭಾಷಣದ ಕೆಲ ಪ್ರಮುಖ ಅಂಶಗಳು. ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಬರಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪ್ರಧಾನಿಗಳು ಪಾಕಿಸ್ತಾನಕ್ಕೆ ದೊಡ್ಡ ಸಂದೇಶ ರವಾನಿಸಿದ್ದಾರೆ. ಮಾತುಕತೆ ಬೇಕೆಂದರೆ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎನ್ನುವ ಖಡಕ್ ಸಂದೇಶ ಅದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ