AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹಪೀಡಿತ 6 ರಾಜ್ಯಗಳಿಗೆ ಮೋದಿ ಸರ್ಕಾರದಿಂದ 1,066 ಕೋಟಿ ರೂ. ಬಿಡುಗಡೆ

ಈ ವರ್ಷ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಎಸ್‌ಡಿಆರ್‌ಎಫ್/ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ 8,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಬಿಡುಗಡೆ ಮಾಡಿದೆ. ಪ್ರವಾಹ, ಭೂಕುಸಿತ ಮತ್ತು ಮೇಘಸ್ಫೋಟದಂತಹ ಎಲ್ಲಾ ಸಂದರ್ಭಗಳಲ್ಲಿಯೂ ನರೇಂದ್ರ ಮೋದಿ ಸರ್ಕಾರವು ರಾಜ್ಯಗಳ ಬೆಂಬಲಕ್ಕೆ ದೃಢನಿಶ್ಚಯದಿಂದ ನಿಂತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಪಡೆಯುವ 6 ರಾಜ್ಯಗಳೆಂದರೆ ಉತ್ತರಾಖಂಡ, ಅಸ್ಸಾಂ, ಕೇರಳ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂ.

ಪ್ರವಾಹಪೀಡಿತ 6 ರಾಜ್ಯಗಳಿಗೆ ಮೋದಿ ಸರ್ಕಾರದಿಂದ 1,066 ಕೋಟಿ ರೂ. ಬಿಡುಗಡೆ
Flood
ಸುಷ್ಮಾ ಚಕ್ರೆ
|

Updated on: Jul 10, 2025 | 9:40 PM

Share

ನವದೆಹಲಿ, ಜುಲೈ 10: ಈ ವರ್ಷದ ಮಳೆಗಾಲದಲ್ಲಿ ಪ್ರವಾಹ (Flood) ಮತ್ತು ಭೂಕುಸಿತದಿಂದ (Landslide)  ಹಾನಿಗೊಳಗಾದ ಭಾರತದ 6 ರಾಜ್ಯಗಳಿಗೆ ಕೇಂದ್ರ ಸರ್ಕಾರ 1,066 ಕೋಟಿ ರೂ.ಗಳಿಗೂ ಹೆಚ್ಚು ಸಹಾಯವನ್ನು ಅನುಮೋದಿಸಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‌ಡಿಆರ್‌ಎಫ್) ಅಡಿಯಲ್ಲಿ ಕೇಂದ್ರದ ಸರ್ಕಾರದಿಂದ ಈ ಹಣವನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಪಡೆಯುವ 6 ರಾಜ್ಯಗಳೆಂದರೆ ಉತ್ತರಾಖಂಡ, ಅಸ್ಸಾಂ, ಕೇರಳ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂ. ಉತ್ತರಾಖಂಡವು 455.60 ಕೋಟಿ ರೂ.ಗಳ ಅತಿ ಹೆಚ್ಚು ಪಾಲನ್ನು ಪಡೆದಿದೆ. ನಂತರ ಅಸ್ಸಾಂಗೆ 375.60 ಕೋಟಿ ರೂ.ಗಳು, ಕೇರಳಕ್ಕೆ 153.20 ಕೋಟಿ ರೂ.ಗಳು, ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ. ಮತ್ತು ಮಿಜೋರಾಂಗೆ 22.80 ಕೋಟಿ ರೂ.ಗಳನ್ನು ನೀಡಲಾಗುತ್ತದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪ್ರವಾಹ ಮತ್ತು ಭೂಕುಸಿತ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ 1,066.80 ಕೋಟಿ ರೂ.ಗಳನ್ನು ಅನುಮೋದಿಸಿದೆ ಎಂದು ಹೇಳಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (SDRF) ಅಡಿಯಲ್ಲಿ ಕೇಂದ್ರದ ಪಾಲಿನ ರೂಪದಲ್ಲಿ ಈ ಹಣವನ್ನು ಬಿಡುಗಡೆ ಮಾಡಲಾಗುವುದು. ಈ ಹಣಕಾಸಿನ ನೆರವು ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಪ್ರಯೋಜನವನ್ನು ನೀಡುತ್ತದೆ. ಇವು ಇತ್ತೀಚೆಗೆ ಭಾರೀ ಮಳೆ, ಪ್ರವಾಹ, ಭೂಕುಸಿತ ಮತ್ತು ಮೋಡ ಸ್ಫೋಟಗಳಿಂದ ತೀವ್ರ ಸವಾಲುಗಳನ್ನು ಎದುರಿಸಿದ ಪ್ರದೇಶಗಳಾಗಿವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಹಪೀಡಿತರಿಗೆ ಪರಿಹಾರ ನೀಡಲು ನಾನು ಸಚಿವೆಯಲ್ಲ; ವಿವಾದಕ್ಕೀಡಾದ ಸಂಸದೆ ಕಂಗನಾ ರಣಾವತ್

ಆರ್ಥಿಕ ನೆರವಿನ ಜೊತೆಗೆ, ಅಗತ್ಯವಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಸೇನೆ ಮತ್ತು ವಾಯುಪಡೆಯ ನಿಯೋಜನೆ ಸೇರಿದಂತೆ ಎಲ್ಲಾ ಲಾಜಿಸ್ಟಿಕ್ ಸಹಾಯವನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೋದಿ ಸರ್ಕಾರವು ಈ ವರ್ಷ ವಿವಿಧ ರಾಜ್ಯಗಳಿಗೆ ಎಸ್‌ಡಿಆರ್‌ಎಫ್/ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ 8,000 ಕೋಟಿ ರೂ.ಗೂ ಹೆಚ್ಚು ಹಣವನ್ನು ನೀಡಿದೆ. ಈಗಾಗಲೇ 14 ರಾಜ್ಯಗಳಿಗೆ SDRFನಿಂದ 6,166.00 ಕೋಟಿ ರೂ.ಗಳನ್ನು ಮತ್ತು 12 ರಾಜ್ಯಗಳಿಗೆ NDRFನಿಂದ 1,988.91 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ, 5 ರಾಜ್ಯಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 726.20 ಕೋಟಿ ರೂ.ಗಳನ್ನು ಮತ್ತು 2 ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 17.55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ