ಮೋದಿ ಸರ್ಕಾರದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಸೆಪ್ಟೆಂಬರ್​ವರೆಗೆ ವಿಸ್ತರಣೆ

| Updated By: ಸುಷ್ಮಾ ಚಕ್ರೆ

Updated on: Mar 26, 2022 | 8:23 PM

PM Garib Kalyan Anna Yojana: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸೆಪ್ಟೆಂಬರ್ 2022 ರವರೆಗೆ ಅಂದರೆ ಇನ್ನೂ 6 ತಿಂಗಳವರೆಗೆ ವಿಸ್ತರಿಸಿದ್ದಾರೆ.

ಮೋದಿ ಸರ್ಕಾರದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಸೆಪ್ಟೆಂಬರ್​ವರೆಗೆ ವಿಸ್ತರಣೆ
ಸಾಂದರ್ಭಿಕ ಚಿತ್ರ
Follow us on

ನವದೆಹಲಿ: ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)’ಯನ್ನು 2022ರ ಸೆಪ್ಟೆಂಬರ್ ವರೆಗೆ ಅಂದರೆ ಇನ್ನೂ ಆರು ತಿಂಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ. ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಇದರಿಂದ ಭಾರತದ 80 ಕೋಟಿಗೂ ಹೆಚ್ಚು ಜನರು ಇದರ ಲಾಭವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

PMGKAY ಎಂಬುದು COVID-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮಾರ್ಚ್ 2020ರಲ್ಲಿ ಕೇಂದ್ರ ಸರ್ಕಾರವು ಘೋಷಿಸಿದ ಕಲ್ಯಾಣ ಯೋಜನೆಯಾಗಿದೆ. ಅಂದಿನಿಂದ ಈ ಯೋಜನೆಯನ್ನು ಹಲವಾರು ಬಾರಿ ವಿಸ್ತರಿಸಲಾಗಿದೆ. ಎಲ್ಲಾ ಆದ್ಯತೆಯ ಮನೆಗಳಿಗೆ (ಪಡಿತರ ಕಾರ್ಡುದಾರರಿಗೆ) ಮತ್ತು ಅಂತ್ಯೋದಯ ಅನ್ನ ಯೋಜನೆಗೆ ತಲುಪಲು ವಿನ್ಯಾಸಗೊಳಿಸಲಾದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಆಹಾರ ಧಾನ್ಯಗಳನ್ನು ಒದಗಿಸುವ ಮೂಲಕ ಅಗತ್ಯವಿರುವವರ ಆಹಾರದ ಅಗತ್ಯವನ್ನು ಈ ಯೋಜನೆಯ ಮೂಲಕ ಪೂರೈಸಲಾಗುತ್ತದೆ.

ಕೇಂದ್ರ ಕ್ಯಾಬಿನೆಟ್ ಸಭೆಯನ್ನು ಮುಕ್ತಾಯಗೊಳಿಸಿದ ನಂತರ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸೆಪ್ಟೆಂಬರ್ 2022 ರವರೆಗೆ 6 ತಿಂಗಳವರೆಗೆ ವಿಸ್ತರಿಸಿದ್ದಾರೆ. ಈ ಕುರಿತು ವಿವರ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್, ಉಚಿತ ಆಹಾರಧಾನ್ಯ ಕಾರ್ಯಕ್ರಮವಾದ ‘ಪಿಎಂಜಿಕೆವೈ’ಯನ್ನು ಆರು ತಿಂಗಳವರೆಗೆ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದ ಬಡ ಜನರಿಗೆ ಪರಿಹಾರ ನೀಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಕಳೆದ 2 ವರ್ಷಗಳಿಂದ ನಡೆಯುತ್ತಿರುವ PMGKAY ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರವು 3.4 ಲಕ್ಷ ಕೋಟಿ ವೆಚ್ಚದಲ್ಲಿ 1,003 ಲಕ್ಷ ಟನ್ ಆಹಾರಧಾನ್ಯವನ್ನು ಖಜಾನೆಗೆ ವಿತರಿಸುತ್ತದೆ. ಇಲ್ಲಿಯವರೆಗೆ, ಕೇಂದ್ರವು ಸರಿಸುಮಾರು 2.6 ಟ್ರಿಲಿಯನ್ ರೂ.ಗಳನ್ನು ಈ ಯೋಜನೆಗಾಗಿ ಖರ್ಚು ಮಾಡಿದೆ. ಮುಂದಿನ 6 ತಿಂಗಳುಗಳಲ್ಲಿ ಅಂದರೆ ಸೆಪ್ಟೆಂಬರ್ 2022ರವರೆಗೆ ಮತ್ತೆ 80,000 ಕೋಟಿ ರೂ.ಗಳನ್ನು ಈ ಯೋಜನೆಗಾಗಿ ಖರ್ಚು ಮಾಡಲಾಗುವುದು. ಈ ಯೋಜನೆಯಡಿ ಕೇಂದ್ರವು ತಿಂಗಳಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ.

ಇದನ್ನೂ ಓದಿ: PM Modi Address: ಬಿಜೆಪಿ ಪ್ರಚಂಡ ಗೆಲುವಿಗೆ ಮಹಿಳೆಯರೇ ಕಾರಣ: ಪ್ರಧಾನಿ ನರೇಂದ್ರ ಮೋದಿ

Birbhum Violence ಪಶ್ಚಿಮ ಬಂಗಾಳ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇನೆ: ನರೇಂದ್ರ ಮೋದಿ