AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಬಿ ನಿರ್ದೇಶಕ ಮತ್ತು ರಾ ಕಾರ್ಯದರ್ಶಿಯ ಅಧಿಕಾರ ಅವಧಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸಿದ ಕೇಂದ್ರ ಸರ್ಕಾರ

ಈ ಇಬ್ಬರು ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಗಣಿಸಿ, ಎರಡೂ ಇಲಾಖೆಗಳನ್ನು ಉತ್ತಮವಾಗಿ ನಡೆಸುವ ದೃಷ್ಟಿಯಿಂದ ಅಧಿಕಾರ ಅವಧಿ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಐಬಿ ನಿರ್ದೇಶಕ ಮತ್ತು ರಾ ಕಾರ್ಯದರ್ಶಿಯ ಅಧಿಕಾರ ಅವಧಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸಿದ ಕೇಂದ್ರ ಸರ್ಕಾರ
ಆರವಿಂದ್​ ಕುಮಾರ್​ ಮತ್ತು ಸಮಂತ್​ ಗೋಯೆಲ್​
Lakshmi Hegde
|

Updated on: May 27, 2021 | 6:30 PM

Share

ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗದ (Research and Analysis Wing (R&AW) ಕಾರ್ಯದರ್ಶಿ ಸಮಂತ್ ಕುಮಾರ್​ ಗೋಯೆಲ್​ ಮತ್ತು ಗುಪ್ತಚರ ದಳದ ನಿರ್ದೇಶಕ ಅರವಿಂದ್​ ಕುಮಾರ್​ ಅವರ ಅಧಿಕಾರಿ ಅವಧಿಯನ್ನು ಇನ್ನೂ ಒಂದು ವರ್ಷಗಳ ಕಾಲ ಹೆಚ್ಚಿಸಿ, ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಇವರಿಬ್ಬರೂ 1984ನೇ ಇಸ್ವಿಯ ಬ್ಯಾಚ್​​ನ ಐಪಿಎಸ್​ ಅಧಿಕಾರಿಗಳಾಗಿದ್ದಾರೆ. ಇವರಲ್ಲಿ ಸಮಂತ್ ಕುಮಾರ್​ ಗೋಯೆಲ್ ಪಂಜಾಬ್​ ಕೇಡರ್​​ನವರಾದರೆ, ಅರವಿಂದ್ ಕುಮಾರ್​ ಅಸ್ಸಾಂ-ಮೇಘಾಲಯ ಕೇಡರ್​ನ ಅಧಿಕಾರಿಯಾಗಿದ್ದಾರೆ. ಇವರಿಬ್ಬರ ಅಧಿಕಾರ ಅವಧಿ 2021ರ ಜೂನ್​ 30ರವರೆಗೆ ಇತ್ತು. ಇದೀಗ 2022ರ ಜೂನ್​ 30ರವರೆಗೆ ಮುಂದುವರಿಯಲಿದೆ.

ಈ ಇಬ್ಬರು ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಗಣಿಸಿ, ಎರಡೂ ಇಲಾಖೆಗಳನ್ನು ಉತ್ತಮವಾಗಿ ನಡೆಸುವ ದೃಷ್ಟಿಯಿಂದ ಅಧಿಕಾರ ಅವಧಿ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇವರಿಬ್ಬರೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: 15 ದಿನಗಳ ಒಳಗೆ ನಿಯಮಪಾಲನೆ ವಿವರ ನೀಡಲು ಆನ್​ಲೈನ್ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ

ಸಂಪುಟ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪವಿಟ್ಟ ಸಚಿವ ಮಾಧುಸ್ವಾಮಿ; ಹೇ, ಸುಮ್ಮನಿರಪ್ಪ ನೀನು ಎಂದ ಸಿಎಂ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ