ಭಾರತದ ಹಳ್ಳಿಗಳ ಕುಂದು ಕೊರತೆ ಪರಿಹಾರದ ಗುರಿ; ಡಿ. 20ರಿಂದ ಸರ್ಕಾರದಿಂದ ಉತ್ತಮ ಆಡಳಿತ ಸಪ್ತಾಹ

ಈ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯಗಳೊಂದಿಗೆ ವಾಟ್ಸಾಪ್ ಗುಂಪುಗಳನ್ನು ರಚಿಸಿದೆ ಮತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಭಾರತದ ಹಳ್ಳಿಗಳ ಕುಂದು ಕೊರತೆ ಪರಿಹಾರದ ಗುರಿ; ಡಿ. 20ರಿಂದ ಸರ್ಕಾರದಿಂದ ಉತ್ತಮ ಆಡಳಿತ ಸಪ್ತಾಹ
ಪ್ರಧಾನಮಂತ್ರಿ ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 18, 2021 | 6:23 PM

ನವದೆಹಲಿ: ಹಳ್ಳಿಗಳಲ್ಲಿ ಉತ್ತಮ ಆಡಳಿತವನ್ನು ನೀಡುವ ಧ್ಯೇಯವಾಕ್ಯದೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಡಿಸೆಂಬರ್ 20ರಿಂದ ರಾಜ್ಯಗಳ ಜೊತೆಗೆ ರಾಷ್ಟ್ರವ್ಯಾಪಿ ‘ಉತ್ತಮ ಆಡಳಿತ ಸಪ್ತಾಹ’ ಅಭಿಯಾನವನ್ನು ಪ್ರಾರಂಭಿಸುತ್ತಿದೆ. ದೇಶದಾದ್ಯಂತ ಬಾಕಿ ಉಳಿದಿರುವ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸುವುದು ಮತ್ತು ವಿಲೇವಾರಿ ಮಾಡುವುದು ಈ ಅಭಿಯಾನದ ಮುಖ್ಯ ಗುರಿಯಾಗಿದೆ. ಎಲ್ಲಾ ರಾಜ್ಯಗಳು ಈ ಅಭಿಯಾನದಲ್ಲಿ ಭಾಗವಹಿಸಲು ಇಚ್ಛೆ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯಗಳೊಂದಿಗೆ ವಾಟ್ಸಾಪ್ ಗುಂಪುಗಳನ್ನು ರಚಿಸಿದೆ ಮತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಉದ್ದೇಶಕ್ಕಾಗಿ ರಚಿಸಲಾದ ಕೇಂದ್ರ ಪೋರ್ಟಲ್ ಮೂಲಕ ಸರ್ಕಾರವು ಈ ಅಭಿಯಾನದ ಮೇಲ್ವಿಚಾರಣೆ ಮಾಡುತ್ತದೆ. ಜಿಲ್ಲಾಧಿಕಾರಿಗಳು ತಹಸಿಲ್‌ಗಳಿಗೆ ಭೇಟಿ ನೀಡಿ ಗ್ರಾಮ ಮಟ್ಟದವರೆಗೆ ಅಭಿಯಾನದ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವ ನಿರೀಕ್ಷೆಯಿದೆ. ಡಿಸೆಂಬರ್ 25ರಂದು ‘ಗುಡ್ ಗವರ್ನೆನ್ಸ್ ಇಂಡೆಕ್ಸ್’ ಕೂಡ ಬಿಡುಗಡೆಯಾಗಲಿದೆ.

ಆರು ದಿನಗಳ ಪ್ರಚಾರಕ್ಕಾಗಿ ಕೇಂದ್ರ ಸರ್ಕಾರವು ಹರಿಯಾಣ, ಒಡಿಶಾ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳು ಅಭಿಯಾನದ ಜೊತೆ ಮುಖ್ಯವಾಗಿ ಗುರುತಿಸಿಕೊಳ್ಳಲಿವೆ. ಕೇಂದ್ರ ಸರ್ಕಾರ ಈ ವರ್ಷದ ಆರಂಭದಲ್ಲಿ, ಕೇಂದ್ರ ಮಟ್ಟದಲ್ಲಿ 3 ಲಕ್ಷಕ್ಕೂ ಹೆಚ್ಚು ಬಾಕಿ ಇರುವ ನಾಗರಿಕರ ಕುಂದುಕೊರತೆಗಳನ್ನು ತೆರವುಗೊಳಿಸಲು ತನ್ನದೇ ಆದ ಅಭಿಯಾನವನ್ನು ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಡಿ. 25ರಂದು ‘ಉತ್ತಮ ಆಡಳಿತ ದಿನ’ ಎಂದು ಆಚರಿಸಲಾಗುವುದು. ‘ಉತ್ತಮ ಆಡಳಿತ ಸಪ್ತಾಹ’ದ ಸಮಾರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರುವರು. ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸೋಮವಾರ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ಯುಪಿ+ಯೋಗಿ=ಉಪಯೋಗಿ; ಗಂಗಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಿ ಯೋಗಿ ಸರ್ಕಾರವನ್ನು ಹೊಗಳಿದ ಪ್ರಧಾನಿ ಮೋದಿ, ವಿರೋಧಿಗಳಿಗೆ ತಿರುಗೇಟು

Ganga Expressway: ಉತ್ತರ ಪ್ರದೇಶ ಅತ್ಯಂತ ಆಧುನಿಕ ರಾಜ್ಯವಾಗಿ ಗುರುತಿಸಲ್ಪಡುವ ದಿನ ದೂರವಿಲ್ಲ; ಗಂಗಾ ಎಕ್ಸ್​​ಪ್ರೆಸ್​ವೇ ಉದ್ಘಾಟಿಸಿ ಪ್ರಧಾನಿ ಮೋದಿ ಮಾತು

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್