AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ರದ್ದುಗೊಳಿಸಲು ಕೇಂದ್ರ ಸರ್ಕಾರ ಚಿಂತನೆ?

ಈಗ, ಮೋದಿ ಸರ್ಕಾರವು ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಯಲ್ಲಿ 'ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ' ಎಂದು ಅದನ್ನು ಮರಳಿ ತರಲು ಬಯಸಿದೆ ಎಂದು ಮೂಲವೊಂದು ತಿಳಿಸಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ರದ್ದುಗೊಳಿಸಲು ಕೇಂದ್ರ ಸರ್ಕಾರ ಚಿಂತನೆ?
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 03, 2022 | 6:30 PM

Share

ದೆಹಲಿ: ಕೇಂದ್ರ ಸರ್ಕಾರ 2006 ರಲ್ಲಿ ಯುಪಿಎ (UPA) ಸರ್ಕಾರ ಸ್ಥಾಪಿಸಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು(Ministry of Minority Affairs )ರದ್ದುಗೊಳಿಸುವ ಸಾಧ್ಯತೆಯಿದೆ. ಈ ಸಚಿವಾಲಯವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ವಿಲೀನದ ನಂತರವೂ ಸಚಿವಾಲಯವು ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆಗಳು ಮುಂದುವರಿಯುತ್ತವೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಸಚಿವಾಲಯದ ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದೆ. ಬಿಜೆಪಿ ನೇತೃತ್ವದ ಎನ್​​​​ಡಿಎ ಸರ್ಕಾರವು ಅಲ್ಪ ಸಂಖ್ಯಾತ ವ್ಯವಹಾರಗಳಿಗಾಗಿ ಯಾವುದೇ ಪ್ರತ್ಯೇಕ ಸಚಿವಾಲಯದ ಅಗತ್ಯವಿಲ್ಲ ಎಂಬ ನಿಲುವು ಹೊಂದಿದೆ. ಯುಪಿಎಯ ತುಷ್ಟೀಕರಣ ನೀತಿಯ ಭಾಗವಾಗಿ ಸಚಿವಾಲಯವನ್ನು ರಚಿಸಲಾಗಿದೆ ಎಂದು ಅದು ನಂಬುತ್ತದೆ. ಈಗ, ಮೋದಿ ಸರ್ಕಾರವು ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಯಲ್ಲಿ ‘ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ’ ಎಂದು ಅದನ್ನು ಮರಳಿ ತರಲು ಬಯಸಿದೆ ಎಂದು ಮೂಲವೊಂದು ತಿಳಿಸಿದೆ. ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಸೈಯದ್ ನಸೀರ್ ಹುಸೇನ್ ಈ ಉದ್ದೇಶಿತ ನಡೆ ಸಮಾಜವನ್ನು ಧ್ರುವೀಕರಣಗೊಳಿಸುವ ಬಿಜೆಪಿಯ ಮತ್ತೊಂದು ಪ್ರಯತ್ನ ಎಂದು ಬಣ್ಣಿಸಿದರು.

ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ಉದ್ದೇಶವು ಅಲ್ಪಸಂಖ್ಯಾತರನ್ನು ಅವರ ಉನ್ನತಿಗಾಗಿ ಕೇಂದ್ರೀಕೃತ ಕಾರ್ಯಕ್ರಮಗಳೊಂದಿಗೆ ಮುಖ್ಯವಾಹಿನಿಗೆ ತರುವುದಾಗಿದೆ. ಆದರೆ, ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರುದ್ಧದ ಎಲ್ಲ ಅವಕಾಶಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಜೈನರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಹೆಚ್ಚು ಕೇಂದ್ರೀಕೃತ ವಿಧಾನವನ್ನು ಖಚಿತಪಡಿಸಿಕೊಳ್ಳಲು ಆಗಿನ ಯುಪಿಎ ಸರ್ಕಾರವು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸ್ಥಾಪಿಸಿತ್ತು.

ಈ ಬಗ್ಗೆ ಜಮಾತೆ ಇಸ್ಲಾಮಿ ಹಿಂದ್‌ ಕಾರ್ಯದರ್ಶಿ ಸೈಯದ್‌ ತನ್ವೀರ್‌ ಅಹಮದ್‌ ಮಾತನಾಡಿದ್ದ, ಸಚಿವಾಲಯ ರದ್ದುಪಡಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದು ದೇಶದ ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಹಾನಿ ಮಾಡುತ್ತದೆ. ಬದಲಾಗಿ ಹೆಚ್ಚಿನ ಹಣ ಮಂಜೂರು ಮಾಡಲು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಚಿವಾಲಯವನ್ನು ಬಲಪಡಿಸಲು ಸರ್ಕಾರ ಗಮನಹರಿಸಬೇಕು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ಹೊಂದಿದ್ದಾರೆ. ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಜುಲೈನಲ್ಲಿ ತಮ್ಮ ರಾಜ್ಯಸಭೆಯ ಅವಧಿ ಮುಗಿದ ನಂತರ ರಾಜೀನಾಮೆ ನೀಡಿದರು. ಮೋದಿ ಸರ್ಕಾರದಲ್ಲಿದ್ದ ಏಕೈಕ ಮುಸ್ಲಿಂ ನಾಯಕರಾಗಿದ್ದರು ನಖ್ವಿ.

Published On - 5:19 pm, Mon, 3 October 22

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ