ಅಗರ್ತಲಾದಲ್ಲಿ ₹4,350 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬುಡಕಟ್ಟು ಸಮುದಾಯದ ಮೊದಲ ಆಯ್ಕೆ ಬಿಜೆಪಿ. ಇತ್ತೀಚೆಗೆ ನಡೆದ ಗುಜರಾತ್ ಚುನಾವಣೆಯಲ್ಲಿ ಬುಡಕಟ್ಟು ಸಮುದಾಯಗಳಿಗೆ ಮೀಸಲಾಗಿದ್ದ 27 ಸ್ಥಾನಗಳಲ್ಲಿ ಬಿಜೆಪಿ 24 ಸ್ಥಾನಗಳನ್ನು ಗೆದ್ದುಕೊಂಡಿದೆ. ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ನಾವು ಪ್ರಾಮುಖ್ಯತೆ ನೀಡಿದ್ದೇವೆ ಎಂದು ಮೋದಿ ಹೇಳಿದರು.

ಅಗರ್ತಲಾದಲ್ಲಿ ₹4,350 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ತ್ರಿಪುರಾದಲ್ಲಿ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 18, 2022 | 6:55 PM

ಅಗರ್ತಲಾ (ತ್ರಿಪುರಾ): ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅಗರ್ತಲಾದಲ್ಲಿ(Agartala) 4,350 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಭಾನುವಾರ ಅಗರ್ತಲಾಗೆ ಆಗಮಿಸಿದ ಪ್ರಧಾನಿ ಮೋದಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಫಲಾನುಭವಿಗಳಿಗೆ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನ ಮಂತ್ರಿ ಕಚೇರಿ ಪ್ರಕಾರ, ಈ ಮನೆಗಳನ್ನು 3,400 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. 2 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಇದನ್ನು ನೀಡಲಾಗುವುದು. ರಸ್ತೆ ಸಂಪರ್ಕವನ್ನು ಸುಧಾರಿಸುವತ್ತ ಗಮನಹರಿಸುವುದರೊಂದಿಗೆ ಪ್ರಧಾನಮಂತ್ರಿಯವರು ಅಗರ್ತಲಾ ಬೈಪಾಸ್ (ಖಯೇರ್‌ಪುರ್-ಅಮ್ತಾಲಿ) NH-08 ಅನ್ನು ವಿಸ್ತರಿಸುವ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಇದು ಅಗರ್ತಲಾ ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೋದಿ PMGSY III (ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ) ಅಡಿಯಲ್ಲಿ 230 ಕಿ.ಮೀ ಗಿಂತ ಹೆಚ್ಚು ಉದ್ದದ 32 ರಸ್ತೆಗಳಿಗೆ ಮತ್ತು 540 ಕಿ.ಮೀ ದೂರದ 112 ರಸ್ತೆಗಳ ಸುಧಾರಣೆಗೆ ಶಂಕುಸ್ಥಾಪನೆ ಮಾಡಿದ್ದು, ನಂದನಗರ ಮತ್ತು ಅಗರ್ತಲಾ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಸ್ಟೇಟ್ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಅನ್ನು ಉದ್ಘಾಟಿಸಿದ್ದಾರೆ.

“2 ಲಕ್ಷಕ್ಕೂ ಹೆಚ್ಚು ಬಡ ಕುಟುಂಬಗಳು ಇಂದು ತಮ್ಮ ಸ್ವಂತ ಮನೆಗಳನ್ನು ಪಡೆಯುತ್ತಿವೆ. ಅವರಲ್ಲಿ ಹೆಚ್ಚಿನವರು ತ್ರಿಪುರದ ತಾಯಂದಿರು ಮತ್ತು ಸಹೋದರಿಯರು”. ರಾಜ್ಯದಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಬುಡಕಟ್ಟು ಸಮುದಾಯದ ಮೊದಲ ಆಯ್ಕೆ ಬಿಜೆಪಿ. ಇತ್ತೀಚೆಗೆ ನಡೆದ ಗುಜರಾತ್ ಚುನಾವಣೆಯಲ್ಲಿ ಬುಡಕಟ್ಟು ಸಮುದಾಯಗಳಿಗೆ ಮೀಸಲಾಗಿದ್ದ 27 ಸ್ಥಾನಗಳಲ್ಲಿ ಬಿಜೆಪಿ 24 ಸ್ಥಾನಗಳನ್ನು ಗೆದ್ದುಕೊಂಡಿದೆ. ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ನಾವು ಪ್ರಾಮುಖ್ಯತೆ ನೀಡಿದ್ದೇವೆ ಎಂದು ಮೋದಿ ಹೇಳಿದರು.

ಜನಜಾತಿಯ ಸಮುದಾಯಗಳ ಜೀವನ ಸುಧಾರಣೆಗೆ ಸರ್ಕಾರ ಸಮರ್ಪಿತವಾಗಿದೆ ಎಂದ ಮೋದಿ ₹21,000 ಕೋಟಿ ಇದ್ದ ಬಜೆಟ್ ಈಗ ₹88,000 ಕೋಟಿ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: PM Modi Meghalaya Visit ಶಿಲ್ಲಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

“ಕಳೆದ ಎಂಟು ವರ್ಷಗಳಲ್ಲಿ, ಈಶಾನ್ಯದಲ್ಲಿ ಅನೇಕ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ಅನೇಕ ಗ್ರಾಮೀಣ ಪ್ರದೇಶಗಳು ಸಹ ರಸ್ತೆಗಳ ಮೂಲಕ ಸಂಪರ್ಕ ಹೊಂದಿವೆ. ನಮ್ಮ ಡಬಲ್ ಇಂಜಿನ್ ಸರ್ಕಾರದ ಗಮನವು ಭೌತಿಕ, ಡಿಜಿಟಲ್ ಮತ್ತು ಸಾಮಾಜಿಕ ಮೂಲಸೌಕರ್ಯವನ್ನು ಸುಧಾರಿಸುವುದರ ಮೇಲೆ ಕೇಂದ್ರೀಕೃತವಾಗಿದೆ.

“ಸ್ವಚ್ಛತೆಯನ್ನು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ್ದಕ್ಕಾಗಿ ನಾನು ತ್ರಿಪುರಾದ ಜನರನ್ನು ಅಭಿನಂದಿಸುತ್ತೇನೆ. ಇದರಿಂದಾಗಿ ತ್ರಿಪುರಾ ಚಿಕ್ಕ ರಾಜ್ಯಗಳ ವಿಭಾಗದಲ್ಲಿ ಸ್ವಚ್ಛ ರಾಜ್ಯವಾಗಿ ಹೊರಹೊಮ್ಮಿದೆ. ಇಂದು ತ್ರಿಪುರಾ ಹೊಸ ಡೆಂಟಲ್ ಕಾಲೇಜನ್ನು ಪಡೆದಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ಮೇಘಾಲಯ ಮತ್ತು ತ್ರಿಪುರಾ ಎರಡೂ ವಿಧಾನಸಭಾ ಚುನಾವಣೆಗಳು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿವೆ.

ಇದಕ್ಕೂ ಮುನ್ನ ಭಾನುವಾರ ಪ್ರಧಾನಿ ಮೋದಿ ಅವರು ಅಗರ್ತಲಾದಲ್ಲಿ ರೋಡ್‌ಶೋ ನಡೆಸಿದರು. ಪ್ರಧಾನಿಯವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ಜನರು ನೆರೆದಿದ್ದು ಹೂವಿನ ಮಳೆಗೆರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Sun, 18 December 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ