Narendra Modi: ವಿಶ್ವದ ಜನಪ್ರಿಯ ನಾಯಕರ ಪಟ್ಟಿ; ಪ್ರಧಾನಿ ಮೋದಿಗೆ ಮತ್ತೆ ಅಗ್ರ ಸ್ಥಾನ

ಅಮೆರಿಕ ಮೂಲದ ಸಂಸ್ಥೆಯೊಂದು ಬಿಡುಗಡೆ ಮಾಡಿರುವ ಜಾಗತಿಕ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತೊಮ್ಮೆ ಅಗ್ರ ಸ್ಥಾನ ಪಡೆದಿದ್ದಾರೆ. ಅಮೆರಿಕದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್ (Morning Consult)’ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಶೇ 78ರ ರೇಟಿಂಗ್​ನೊಂದಿಗೆ ಮೋದಿ ಮೊದಲ ಸ್ಥಾನದಲ್ಲಿದ್ದಾರೆ.

Narendra Modi: ವಿಶ್ವದ ಜನಪ್ರಿಯ ನಾಯಕರ ಪಟ್ಟಿ; ಪ್ರಧಾನಿ ಮೋದಿಗೆ ಮತ್ತೆ ಅಗ್ರ ಸ್ಥಾನ
ವಿಶ್ವದ ಜನಪ್ರಿಯ ನಾಯಕ ಮೋದಿImage Credit source: Koimoi
Follow us
TV9 Web
| Updated By: Ganapathi Sharma

Updated on:Feb 04, 2023 | 12:58 PM

ನವದೆಹಲಿ: ಅಮೆರಿಕ ಮೂಲದ ಸಂಸ್ಥೆಯೊಂದು ಬಿಡುಗಡೆ ಮಾಡಿರುವ ಜಾಗತಿಕ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ  (Narendra Modi) ಮತ್ತೊಮ್ಮೆ ಅಗ್ರ ಸ್ಥಾನ ಪಡೆದಿದ್ದಾರೆ. ಅಮೆರಿಕದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್ (Morning Consult)’ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಶೇ 78ರ ರೇಟಿಂಗ್​ನೊಂದಿಗೆ ಮೋದಿ ಮೊದಲ ಸ್ಥಾನದಲ್ಲಿದ್ದಾರೆ. ಇದರೊಂದಿಗೆ ಮೋದಿ ಅವರು ಸತತ ಎರಡನೇ ವರ್ಷ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಿದಂತಾಗಿದೆ. ಜನಪ್ರಿಯತೆಯ ವಿಚಾರದಲ್ಲಿ ಮೋದಿ ಅವರು ಅಮೆರಿಕದ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರನ್ನೂ ಮೀರಿಸಿದ್ದಾರೆ.

ಒಟ್ಟು 22 ನಾಯಕರ ಹೆಸರು ಮುಂದಿಟ್ಟುಕೊಂಡು ‘ಮಾರ್ನಿಂಗ್ ಕನ್ಸಲ್ಟ್’ ಸಮೀಕ್ಷೆ ನಡೆಸಿತ್ತು. ಮೋದಿ ಅವರು ಶೇ 78ರ ರೇಟಿಂಗ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಮೆಕ್ಸಿಕೊದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಶೇ 68ರ ರೇಟಿಂಗ್​ನೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. ಸ್ವಿಸ್ ಅಧ್ಯಕ್ಷ ಅಲೈನ್ ಬರ್ಸೆಟ್ ಶೇ 62ರ ರೇಟಿಂಗ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹಾಗೂ ಕೆನಡಾದ ಜಸ್ಟಿನ್ ಟ್ರುಡೊ ಶೇ 40 ರೇಟಿಂಗ್ ಗಳಿಸಿ ಏಳು ಮತ್ತು 9ನೇ ಸ್ಥಾನ ಗಳಿಸಿದ್ದಾರೆ. ರಿಷಿ ಸುನಕ್ ಶೇ 30ರ ರೇಟಿಂಗ್​ನೊಂದಿಗೆ ಪಟ್ಟಿಯಲ್ಲಿ 13ನೇ ಸ್ಥಾನ ಗಳಿಸಿದ್ದಾರೆ.

ಇದನ್ನೂ ಓದಿ: ಇಂದು ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನರೇಂದ್ರ ಮೋದಿ ಅವರು 2014ರ ಮೇ ತಿಂಗಳಲ್ಲಿ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ನಂತರ 2019ರ ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಭರ್ಜರಿ ಜಯ ಗಳಿಸಿದ್ದು, ಎರಡನೇ ಅವಧಿಗೆ ಮೋದಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಮುಂದಿನ ವರ್ಷ ಬಿಜೆಪಿ ಸರ್ಕಾರದ ಎರಡನೇ ಅವಧಿ ಕೊನೆಗೊಳ್ಳಲಿದೆ. 2014ರಲ್ಲಿ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಪರಿಣಾಮ ಬಿಜೆಪಿ ನೇತೃತ್ವದ ಎನ್​ಡಿಎ ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. 2019ರಲ್ಲಿ ಕೂಡ ಮೋದಿ ವರ್ಚಸ್ಸಿನೊಂದಿಗೇ ಮರಳಿ ಅಧಿಕಾರ ಪಡೆಯುವಲ್ಲಿ ಕೇಸರಿ ಪಕ್ಷ ಯಶಸ್ವಿಯಾಗಿತ್ತು. ಪ್ರಧಾನಿಯಾಗಿ ತಮ್ಮ ಮೊದಲ ಅಧಿಕಾರಾವಧಿಯಲ್ಲಿ ಹಲವು ದೇಶಗಳಿಗೆ ಭೇಟಿ ನೀಡುವ ಮೂಲಕ ಮೋದಿ ಅವರು ವಿದೇಶಗಳ ಜತೆ ಬಾಂಧವ್ಯ ಸುಧಾರಿಸಲು ಕ್ರಮ ಕೈಗೊಂಡಿದ್ದರು. ಮೋದಿ ಅವರ ಅತಿಯಾದ ವಿದೇಶ ಪ್ರವಾಸಗಳು ವಿಪಕ್ಷಗಳ ಆಕ್ಷೇಪಕ್ಕೂ ಗುರಿಯಾಗಿತ್ತು. ಈ ಮಧ್ಯೆ ‘ಮೇಕ್ ಇನ್ ಇಂಡಿಯಾ’, ‘ಡಿಜಿಟಲ್ ಇಂಡಿಯಾ’, ‘ಸ್ವಚ್ಛ ಭಾರತ್ ಅಭಿಯಾನ’ ಸೇರಿದಂತೆ ಮೋದಿ ಅವರ ಮಹತ್ವಾಕಾಂಕ್ಷೆಯ ಹಲವು ಯೋಜನೆಗಳು ದೇಶದಲ್ಲಿ ಭಾರೀ ಸದ್ದು ಮಾಡಿದ್ದವು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದುಲು ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Sat, 4 February 23