AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Mann Ki Baat: ಲಾಲಿಹಾಡು ವಿಭಾಗದಲ್ಲಿ ಕರ್ನಾಟಕದ ವ್ಯಕ್ತಿಗೆ ಮನ್​ ಕಿ ಬಾತ್​ನಲ್ಲಿ ಮೊದಲ ಪ್ರಶಸ್ತಿ ಘೋಷಿಸಿದ ಪ್ರಧಾನಿ ಮೋದಿ

ಲಾಲಿಹಾಡು ಸ್ಪರ್ಧೆಯಲ್ಲಿ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವಿಎಂ ಮಂಜುನಾಥ್ ಮೊದಲ ಸ್ಥಾನ ಪಡೆದಿದ್ದಾರೆ. ಮಲಗು ಕಂದಾ ಹಾಡಿನ ಕೆಲ ಸಾಲುಗಳನ್ನು ಮನ್​ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಳಿದರು.

Narendra Modi Mann Ki Baat: ಲಾಲಿಹಾಡು ವಿಭಾಗದಲ್ಲಿ ಕರ್ನಾಟಕದ ವ್ಯಕ್ತಿಗೆ ಮನ್​ ಕಿ ಬಾತ್​ನಲ್ಲಿ ಮೊದಲ ಪ್ರಶಸ್ತಿ ಘೋಷಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on:Feb 26, 2023 | 11:37 AM

Share

ಲಾಲಿಹಾಡು ಸ್ಪರ್ಧೆಯಲ್ಲಿ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವಿಎಂ ಮಂಜುನಾಥ್ ಮೊದಲ ಸ್ಥಾನ ಪಡೆದಿದ್ದಾರೆ. ಮಲಗು ಕಂದಾ ಹಾಡಿನ ಕೆಲ ಸಾಲುಗಳನ್ನು ಮನ್​ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಳಿದರು. ಗೀತೆ ಹಾಗೂ ಲಾಲಿ ಹಾಡಿನಂತೆಯೇ ರಂಗೋಲಿ ಸ್ಪರ್ಧೆಯು ಕೂಡ ನಡೆದಿತ್ತು, ನೇತಾಜಿ ಸುಭಾಷ್​ಚಂದ್ರ ಭೋಸ್ ಪಂಜಾಬ್​ನ ಕಮಲ್​ ಸಿಂಗ್​ಗೆ ಮೊದಲ ಸ್ಥಾನ ಲಭಿಸಿದೆ. ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಆಂಧ್ರ ಪ್ರದೇಶದ ವಿಜಯದುರ್ಗಾ ಪ್ರಥಮ ಸ್ಥಾನ ಪಡೆದಿದ್ದಾರೆ. ಉಸ್ತಾದ್ ಬಿಸ್ಮಿಲ್ಲಾಖಾನ್ ಪುರಸ್ಕಾರವನ್ನು ಪ್ರತಿಭಾಶಾಲಿ ಕಲಾವಿದರಿಗೆ ನೀಡಲಾಯಿತು.

ನಮ್ಮ ದೇಶದಲ್ಲಿ ಕಣ್ಮರೆಯಾಗಿ, ಜನರ ಮನಸ್ಸು ಮತ್ತು ಹೃದಯದಿಂದ ದೂರ ಸರಿದಿರುವ ಇಂತಹ ಅನೇಕ ಶ್ರೇಷ್ಠ ಸಂಪ್ರದಾಯಗಳಿವೆ, ಆದರೆ ಈಗ ಸಾರ್ವಜನಿಕ ಸಹಭಾಗಿತ್ವದ ಶಕ್ತಿಯಿಂದ ಅವುಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೋದಿ ಹೇಳಿದರು.

ದೇಶವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ದೇಶದಲ್ಲಿ ಡಿಜಿಟಲ್ ಇಂಡಿಯಾದ ಶಕ್ತಿಯು ಮೂಲೆ ಮೂಲೆಯನ್ನು ತಲುಪುತ್ತಿದೆ ಎಂದು ಪ್ರಧಾನಿ ಹೇಳಿದರು. ಇ-ಸಂಜೀವನಿ ಎಂಬ ಆಪ್ ಇದೆ. ಈ ಅಪ್ಲಿಕೇಶನ್‌ನಿಂದ, ನೀವು ವೀಡಿಯೊ ಕಾನ್ಫರೆನ್ಸ್ ಮೂಲಕ ವೈದ್ಯಕೀಯ ಸಲಹೆಯನ್ನು ಪಡೆಯಬಹುದು.

ನಿಮ್ಮ ಮನಸ್ಸಿನ ಶಕ್ತಿ ನಿಮಗೆ ತಿಳಿದಿದೆ, ಅದೇ ರೀತಿ, ಸಮಾಜದ ಶಕ್ತಿಯೊಂದಿಗೆ ದೇಶದ ಶಕ್ತಿಯು ಹೇಗೆ ಹೆಚ್ಚಾಗುತ್ತದೆ ಎಂಬುದನ್ನು ನಾವು ಮನ್ ಕಿ ಬಾತ್ ನ ವಿವಿಧ ಸಂಚಿಕೆಗಳಲ್ಲಿ ನೋಡಿದ್ದೇವೆ, ಅರ್ಥಮಾಡಿಕೊಂಡಿದ್ದೇವೆ ಮತ್ತು ಅನುಭವಿಸಿದ್ದೇವೆ ಎಂದು ಹೇಳಿದರು. ಶತಮಾನದತ್ತ ಸಾಗುತ್ತಿರುವ ಈ ಪಯಣದಲ್ಲಿ ನೀವೆಲ್ಲರೂ ಮನ್ ಕಿ ಬಾತ್ ಅನ್ನು ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತವಾದ ವೇದಿಕೆಯನ್ನಾಗಿ ಮಾಡಿದ್ದೀರಿ ಎಂದರು,

ಈ ಮೂಲಕ 10 ಕೋಟಿ ರೋಗಿಗಳು ಮತ್ತು ವೈದ್ಯರೊಂದಿಗೆ ಅದ್ಭುತ ಸಂಬಂಧವನ್ನು ಬೆಸೆಯಬಲ್ಲದು, ಈ ಸಾಧನೆಗಾಗಿ ನಾನು ಎಲ್ಲಾ ವೈದ್ಯರು ಮತ್ತು ರೋಗಿಗಳನ್ನು ಅಭಿನಂದಿಸುತ್ತೇನೆ ಎಂದರು.

ಭಾರತದ ಜನರು ತಂತ್ರಜ್ಞಾನವನ್ನು ಹೇಗೆ ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:25 am, Sun, 26 February 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?