ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ ವಿಚಾರ ಪ್ರಸ್ತಾಪಿಸಿದ ನರೇಂದ್ರ ಮೋದಿ
ರಾಜ್ಯಗಳ ಗೃಹ ಮಂತ್ರಿಗಳ ಚಿಂತನ್ ಶಿವಿರ್ ಉದ್ದೇಶಿಸಿ ವಿಡಿಯೊ ಸಂವಾದದಲ್ಲಿ ಮಾತನಾಡಿದ ಪ್ರಧಾನಿ, ಪೊಲೀಸರಿಗೆ "ಒಂದು ರಾಷ್ಟ್ರ, ಒಂದು ಸಮವಸ್ತ್ರ" ಬರಬಹುದು. ಅದು ಇಂದು ಆಗದೇ ಇರಬಹುದು. ಅದಕ್ಕೆ 5, 50 ಅಥವಾ 100 ವರ್ಷಗಳು ತೆಗೆದುಕೊಳ್ಳಬಹುದು...
ಸುರಾಜ್ಕುಂಡ್ (ಹರ್ಯಾಣ) : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ವಿಚಾರವನ್ನು ಪ್ರಸ್ತಾಪಿಸಿದ್ದು, ಇದು ಕೇವಲ ಸಲಹೆ. ಅದನ್ನು ರಾಜ್ಯಗಳ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ ಎಂದು ಹೇಳಿದರು. ರಾಜ್ಯಗಳ ಗೃಹ ಮಂತ್ರಿಗಳ ಚಿಂತನ್ ಶಿವಿರ್ ಉದ್ದೇಶಿಸಿ ವಿಡಿಯೊ ಸಂವಾದದಲ್ಲಿ ಮಾತನಾಡಿದ ಪ್ರಧಾನಿ, ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ಬರಬಹುದು. ಅದು ಇಂದು ಆಗದೇ ಇರಬಹುದು. ಅದಕ್ಕೆ 5, 50 ಅಥವಾ 100 ವರ್ಷಗಳು ತೆಗೆದುಕೊಳ್ಳಬಹುದು, ಆದರೆ ನಾವು ಯೋಚಿಸೋಣ” ಎಂದು ಹೇಳಿದರು. ದೇಶದಾದ್ಯಂತ ಪೊಲೀಸರ ಗುರುತು ಒಂದೇ ಆಗಿರಬಹುದು ಎಂದು ನಾನು ಭಾವಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು. ಇದಲ್ಲದೆ, ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರವನ್ನು ಅಗತ್ಯ ಎಂದು ಪ್ರಧಾನಿ ಹೇಳಿದ್ದಾರೆ.
ಸಹಕಾರಿ ಒಕ್ಕೂಟ ಎಂಬುದು ಸಂವಿಧಾನದ ಭಾವನೆ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭದ್ರತೆಯ ಉದಯೋನ್ಮುಖ ಸವಾಲುಗಳನ್ನು ಎದುರಿಸಲು ಎಲ್ಲಾ ಏಜೆನ್ಸಿಗಳ ಸಂಘಟಿತ ಕ್ರಮ ಜತೆ ಕಾನೂನುಗಳನ್ನು ಪರಿಶೀಲಿಸಲು ಮತ್ತು ಪ್ರಸ್ತುತ ಸಂದರ್ಭಕ್ಕೆ ಅವುಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಗಳನ್ನು ಪ್ರಧಾನಿ ಒತ್ತಾಯಿಸಿದರು.
ಪೊಲೀಸರ ಬಗ್ಗೆ ಉತ್ತಮ ಗ್ರಹಿಕೆಯನ್ನು ಕಾಯ್ದುಕೊಳ್ಳುವುದು “ಅತ್ಯಂತ ಮುಖ್ಯ” ಮತ್ತು “ಇಲ್ಲಿನ ತಪ್ಪುಗಳನ್ನು” ಪರಿಹರಿಸಬೇಕು ಎಂದು ಮೋದಿ ಹೇಳಿದರು. ದಕ್ಷತೆ, ಉತ್ತಮ ಫಲಿತಾಂಶಗಳು ಮತ್ತು ಸಾಮಾನ್ಯ ಜನರಿಗೆ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ಪರಸ್ಪರ ಸಹಕರಿಸಬೇಕು ಎಂದು ಅವರು ಹೇಳಿದರು.
As long as there is no equal response from police & central agencies on these issues & if all states do not come together to fight these then it would be impossible to face them: Union Home Minister Amit Shah on the second day of Chintan Shivir at Surajkund, Haryana pic.twitter.com/19hAGChx6v
— ANI (@ANI) October 28, 2022
ಪ್ರಧಾನ ಮಂತ್ರಿಗಳ ಕಚೇರಿ (PMO) ಹೇಳಿಕೆಯ ಪ್ರಕಾರ, ಎರಡು ದಿನಗಳ ಚಿಂತನ್ ಶಿವಿರ್ ಆಂತರಿಕ ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನೀತಿ ನಿರೂಪಣೆಗೆ ರಾಷ್ಟ್ರೀಯ ದೃಷ್ಟಿಕೋನವನ್ನು ಒದಗಿಸುವ ಪ್ರಯತ್ನವಾಗಿದೆ.
ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು 16 ರಾಜ್ಯಗಳ ಗೃಹ ಸಚಿವರು ಮತ್ತು ಉಪಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇದು ನಡೆಯುತ್ತಿದೆ. ಈ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ‘ಒಂದು ರಾಷ್ಟ್ರ, ಒಂದು ರಸಗೊಬ್ಬರ’ವನ್ನು ಘೋಷಿಸಿತು, ಅದರ ಅಡಿಯಲ್ಲಿ ಎಲ್ಲಾ ಸಬ್ಸಿಡಿ ರಸಗೊಬ್ಬರಗಳನ್ನು ದೇಶಾದ್ಯಂತ ‘ಭಾರತ್’ ಬ್ರಾಂಡ್ ಅಡಿಯಲ್ಲಿ ಮಾರಾಟ ಮಾಡಲಾಗುವುದು.
Published On - 12:49 pm, Fri, 28 October 22