PM Modi in Guruvayur:ಗುರುವಾಯೂರು ಶ್ರೀಕೃಷ್ಣ ದೇವಾಲಯದಲ್ಲಿ ಮೋದಿ ಪ್ರಾರ್ಥನೆ; ಬಿಜೆಪಿ ನಾಯಕ ಸುರೇಶ್ ಗೋಪಿ ಮಗಳ ಮದುವೆಯಲ್ಲಿ ಭಾಗಿ

ಗುರುವಾಯೂರು ದೇವಾಲಯದಲ್ಲಿ ನಡೆದ ಬಿಜೆಪಿ ನಾಯಕ , ನಟ ಸುರೇಶ್ ಗೋಪಿ ಅವರ ಮಗಳು ಭಾಗ್ಯಾ ಸುರೇಶ್ ಅವರ ಮದುವೆಯಲ್ಲಿ ಮೋದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ತಾಳಿ ಕಟ್ಟಿದ ನಂತರ ನವ ದಂಪತಿಗಳು ಪರಸ್ಪರ ಹಾರ ಬದಲಾಯಿಸುವಾಗ ಮೋದಿಯವರೇ ದಂಪತಿ ಕೈಗೆ ಹಾರ ಕೊಟ್ಟಿದ್ದಾರೆ.

PM Modi in Guruvayur:ಗುರುವಾಯೂರು ಶ್ರೀಕೃಷ್ಣ ದೇವಾಲಯದಲ್ಲಿ ಮೋದಿ ಪ್ರಾರ್ಥನೆ; ಬಿಜೆಪಿ ನಾಯಕ ಸುರೇಶ್ ಗೋಪಿ ಮಗಳ ಮದುವೆಯಲ್ಲಿ ಭಾಗಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Jan 17, 2024 | 3:05 PM

ತ್ರಿಶ್ಶೂರ್ (ಕೇರಳ) ಜನವರಿ 17 : ಕೇರಳದ (Kerala) ಗುರುವಾಯೂರಿನಲ್ಲಿರುವ (Guruvayur) ಪ್ರಸಿದ್ಧ ಶ್ರೀಕೃಷ್ಣ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಬುಧವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮೋದಿ ಸಾಂಪ್ರದಾಯಿಕ ಮಲಯಾಳಿ ಶೈಲಿಯಲ್ಲಿ ಬಿಳಿ ಮುಂಡು (ಧೋತಿ), ಶರ್ಟ್ ಮತ್ತು ಶಾಲು ಧರಿಸಿದ್ದರು. ಗುರುವಾಯೂರು ದೇವಾಲಯದಲ್ಲಿ ನಡೆದ ಬಿಜೆಪಿ ನಾಯಕ , ನಟ ಸುರೇಶ್ ಗೋಪಿ (Suresh Gopi) ಅವರ ಮಗಳು ಭಾಗ್ಯಾ ಸುರೇಶ್ ಅವರ ಮದುವೆಯಲ್ಲಿ ಮೋದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ತಾಳಿ ಕಟ್ಟಿದ ನಂತರ ನವ ದಂಪತಿಗಳು ಪರಸ್ಪರ ಹಾರ ಬದಲಾಯಿಸುವಾಗ ಮೋದಿಯವರೇ ದಂಪತಿ ಕೈಗೆ ಹಾರ ಕೊಟ್ಟಿದ್ದಾರೆ.

ಮಮ್ಮುಟ್ಟಿ, ಮೋಹನ್‌ಲಾಲ್ ಮತ್ತು ದಿಲೀಪ್ ಸೇರಿದಂತೆ ಮಲಯಾಳಂ ಚಿತ್ರರಂಗದ ಸೂಪರ್‌ಸ್ಟಾರ್‌ಗಳು ಸಹ ಅಲ್ಲಿ ಹಾಜರಿದ್ದರು. ಪ್ರಧಾನಿ ಅವರನ್ನು ಭೇಟಿಯಾಗಿ ಮಾತನಾಡಿದ್ದಾರೆ ಎಂದ ಭದ್ರತಾ ವ್ಯವಸ್ಥೆ ಕರ್ತವ್ಯದಲ್ಲಿರುವ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸುರೇಶ್ ಗೋಪಿ ಅವರ ಮಗಳ ಮದುವೆಗೂ ಮುನ್ನ ಬೆಳಗ್ಗೆ ದೇವಸ್ಥಾನದಲ್ಲಿ ವಿವಾಹವಾದ ದಂಪತಿಗಳಿಗೆ ಪ್ರಧಾನಿ ಆಶೀರ್ವದಿಸಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಾಲಯಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಬೆಳಗ್ಗೆ 7.35ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ಆಗಮಿಸಿದ ಪ್ರಧಾನಿ ಮೋದಿ ಶ್ರೀಕೃಷ್ಣ ಕಾಲೇಜು ಮೈದಾನದಲ್ಲಿ ಬಂದಿಳಿದಿದ್ದು, ನೂರಾರು ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ಅವರನ್ನು ಸ್ವಾಗತಿಸಲು ಗಂಟೆಗಟ್ಟಲೆ ಜಮಾಯಿಸಿದ್ದರು. ಎಲ್ಲಾ ವಯಸ್ಸಿನ ಜನರು ಹೆಲಿಪ್ಯಾಡ್‌ನಲ್ಲಿ ಬಿಜೆಪಿ ಧ್ವಜಗಳನ್ನು ಬೀಸುತ್ತಾ ಮತ್ತು ಪಕ್ಷದ ಬಣ್ಣಗಳಲ್ಲಿ ಟೋಪಿಗಳು ಮತ್ತು ಕ್ಯಾಪ್ಗಳನ್ನು ಧರಿಸಿ ಪ್ರಧಾನಿಯನ್ನು ಸ್ವಾಗತಿಸಿದರು.

ಹೆಲಿಪ್ಯಾಡ್‌ನಿಂದ ಶ್ರೀವಲ್ಸಮ್ ಗೆಸ್ಟ್ ಹೌಸ್‌ಗೆ ತೆರಳಿದ ಪ್ರಧಾನಿ ಮೋದಿ ಅಲ್ಲಿ ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳುವ ಮುನ್ನ ಕೇರಳದ ಸಾಂಪ್ರದಾಯಿಕ ಉಡುಗೆಯನ್ನು ಬದಲಾಯಿಸಿಕೊಂಡರು.

ನಂತರ ಅವರು ತ್ರಿಶ್ಶೂರ್ ಜಿಲ್ಲೆಯ ತ್ರಿಪ್ರಯಾರ್ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಚ್ಚಿಗೆ ಹಿಂದಿರುಗುವ ಮೊದಲು ಅಲ್ಲಿ ಕೇಂದ್ರ ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೇರಳಕ್ಕೆ ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಮಂಗಳವಾರ ಸಂಜೆ ಕೇರಳಕ್ಕೆ ಆಗಮಿಸಿದ್ದರು.

ಇದನ್ನೂ ಓದಿ:ರಾಮಮಂದಿರ ಉದ್ಘಾಟನೆ ಕಾರ್ಯ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮ: ರಾಹುಲ್ ಗಾಂಧಿ

ತ್ರಿಪ್ರಯಾರ್ ದೇಗುಲಕ್ಕೆ ಭೇಟಿ ನೀಡಿ ಕೊಚ್ಚಿಗೆ ವಾಪಸಾಗುತ್ತಿದ್ದ ಪ್ರಧಾನಿಯವರು ಕಾರಿನ ಬಾಗಿಲು ತೆರೆದು  ಮೆಟ್ಟಿಲುಗಳ ಮೇಲೆ ನಿಂತು ಹೊರಗೆ ನೆರೆದಿದ್ದ ಜನರನ್ನು ಸ್ವಾಗತಿಸಿದರು. ಗಂಟೆಗಟ್ಟಲೆ ಕಾದು ಕುಳಿತಿದ್ದವರು ಪ್ರಧಾನಿಯವರನ್ನು ಕಂಡು ಪುಳಕಿತರಾದರು.

ಕೊಚ್ಚಿ ತಲುಪಿದ ನಂತರ ಪ್ರಧಾನಮಂತ್ರಿಯವರು ಮಧ್ಯಾಹ್ನ 12 ಗಂಟೆಗೆ ವಿಲ್ಲಿಂಗ್ಡನ್ ದ್ವೀಪದಲ್ಲಿ ಕೊಚ್ಚಿ ಅಂತರಾಷ್ಟ್ರೀಯ ಹಡಗು ದುರಸ್ತಿ ಕೇಂದ್ರ, ಡ್ರೈ ಡಾಕ್ ಮತ್ತು IOC ಯ LPG ಆಮದು ಟರ್ಮಿನಲ್ ಅನ್ನು ಉದ್ಘಾಟಿಸಿದ್ದು, ಬಳಿಕ ಮರೇನ್ ಡ್ರೈವ್ ನಲ್ಲಿ ಬಿಜೆಪಿಯ ‘ಶಕ್ತಿಕೇಂದ್ರ ಪ್ರಮುಖ್’ ಸಭೆಯಲ್ಲಿ ಪಾಲ್ಗೊಂಡು ವಾಪಸಾಗಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:26 pm, Wed, 17 January 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್