Ind-Aus Bilateral Summit ಎರಡನೇ ಭಾರತ-ಆಸ್ಟ್ರೇಲಿಯಾ ವರ್ಚುವಲ್ ಸಮಾವೇಶ ನಾಳೆ

ಇಬ್ಬರೂ ನಾಯಕರು ವ್ಯಾಪಾರ, ನಿರ್ಣಾಯಕ ಖನಿಜ ಸಂಪತ್ತು, ವಲಸೆ ಮತ್ತು ಚಲನಶೀಲತೆ, ಶಿಕ್ಷಣ ಸೇರಿದಂತೆ ವಿವಿಧ ವಲಯಗಳಲ್ಲಿ ನಿಕಟ ಸಹಕಾರ ಹೊಂದಲು ಮತ್ತು ಮುಕ್ತ ಚರ್ಚೆ ನಡೆಸುವ ನಿರೀಕ್ಷೆ ಇದೆ.

Ind-Aus Bilateral Summit ಎರಡನೇ ಭಾರತ-ಆಸ್ಟ್ರೇಲಿಯಾ ವರ್ಚುವಲ್ ಸಮಾವೇಶ ನಾಳೆ
ನರೇಂದ್ರ ಮೋದಿ -ಸ್ಕಾಟ್ ಮಾರಿಸನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 20, 2022 | 8:15 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ (Scott Morrison) ಸೋಮವಾರ ಎರಡನೇ ಭಾರತ-ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆಯನ್ನು(India-Australia virtual summit ) ನಡೆಸಲಿದ್ದಾರೆ. 2020 ಜೂನ್ 4ರಂದು ಉಭಯ ರಾಷ್ಟ್ರಗಳ ನಡುವೆ ಜರುಗಿದ ಚೊಚ್ಚಲ ವರ್ಚುವಲ್ ಶೃಂಗಸಭೆಯಲ್ಲಿ ಎರಡೂ ರಾಷ್ಟ್ರಗಳ ಸಂಬಂಧವನ್ನು ಸಮಗ್ರ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತೀಕರಿಸಲಾಗಿತ್ತು. ಈ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವ ಭಾಗವಾಗಿ 2ನೇ ಶೃಂಗಸಭೆ ನಡೆಯಲಿದೆ . ಮಾ.21ರ ವರ್ಚುವಲ್ ಶೃಂಗಸಭೆಯಲ್ಲಿ ಉಭಯ ನಾಯಕರು, ಚೊಚ್ಚಲ ಶೃಂಗಸಭೆಯ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಅಡಿ ಕೈಗೊಳ್ಳಲಾದ ವಿವಿಧ ಉಪಕ್ರಮಗಳ ಅನುಷ್ಠಾನ ಪ್ರಗತಿ ಕುರಿತು ಪರಾಮರ್ಶೆ ನಡೆಸಲಿದ್ದಾರೆ. ಅಲ್ಲದೆ  ವರ್ಚುವಲ್ ಶೃಂಗಸಭೆಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿವಿಧ ವಲಯಗಳಲ್ಲಿ ಕೈಗೊಳ್ಳಬಹುದಾದ ಹೊಸ ಉಪಕ್ರಮಗಳು ಮತ್ತು ಸಹಕಾರ ಬಲವರ್ಧನೆ ಕುರಿತು ಸಮಾಲೋಚನೆ ನಡೆಯಲಿದೆ. ಇಬ್ಬರೂ ನಾಯಕರು ವ್ಯಾಪಾರ, ನಿರ್ಣಾಯಕ ಖನಿಜ ಸಂಪತ್ತು, ವಲಸೆ ಮತ್ತು ಚಲನಶೀಲತೆ, ಶಿಕ್ಷಣ ಸೇರಿದಂತೆ ವಿವಿಧ ವಲಯಗಳಲ್ಲಿ ನಿಕಟ ಸಹಕಾರ ಹೊಂದಲು ಮತ್ತು ಮುಕ್ತ ಚರ್ಚೆ ನಡೆಸುವ ನಿರೀಕ್ಷೆ ಇದೆ. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಲಿದ್ದಾರೆ. ಈ ಶೃಂಗಸಭೆಯು ಎರಡೂ ದೇಶಗಳು ತಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಹೊಂದಿರುವ ಪ್ರಾಮುಖ್ಯತೆ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳಲ್ಲಿ ಇರುವ ನಿಕಟ ಸಹಕಾರದ ಮೇಲೆ ಬೆಳಕು ಚೆಲ್ಲಲಿದೆ.

ಕೊವಿಡ್ -19 ಸಾಂಕ್ರಾಮಿಕ ಸೋಂಕಿನ ಹೊರತಾಗಿಯೂ ಎರಡೂ ದೇಶಗಳು ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣೆ, ಸೈಬರ್, ನಿರ್ಣಾಯಕ ಮತ್ತು ಕಾರ್ಯತಂತ್ರದ ವಸ್ತುಗಳು, ನೀರು, ಸಂಪನ್ಮೂಲ ನಿರ್ವಹಣೆ, ಸಾರ್ವಜನಿಕ ಆಡಳಿತ ಸೇರಿದಂತೆ ವ್ಯಾಪಕ ಕ್ಷೇತ್ರಗಳಲ್ಲಿ ನಿಕಟ ಸಹಯೋಗ ಮುಂದುವರೆಸುವ ಜತೆಗೆ, ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರ ಸಹಭಾಗಿತ್ವವು ಮುನ್ನಡೆಯ ವೇಗ ಕಾಯ್ದುಕೊಂಡಿದೆ.

2021 ಸೆಪ್ಟೆಂಬರ್ ನಲ್ಲಿ ಕೊವಿಡ್-19 ಸಾಂಕ್ರಾಮಿಕಿ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ಜರುಗಿದ ಕ್ವಾಡ್ ನಾಯಕರ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸ್ಕಾಟ್ ಮಾರಿಸನ್ ಅವರು ಮುಖಾಮುಖಿ ಭೇಟಿಯಾಗಿದ್ದರು. ಆ ಸಂದರ್ಭದಲ್ಲೇ ಗ್ಲಾಸ್ಗೊದಲ್ಲಿ ಜರುಗಿದ ಹವಾಮಾನ ಬದಲಾವಣೆಯ ಸಿಒಪಿ-26 ಶೃಂಗಸಭೆಯ ವೇಳೆ ಉಭಯ ನಾಯಕರು 2021 ನವೆಂಬರ್​​ನಲ್ಲಿ ಜಂಟಿಯಾಗಿ ‘ದ್ವೀಪ ರಾಷ್ಟ್ರಗಳಿಗೆ ಚೇತರಿಕಾದಾಯಕ ಮೂಲಸೌಕರ್ಯ’ ಹೆಸರಿನ ಉಪಕ್ರಮ ಅನಾವರಣಗೊಳಿಸಿದ್ದರು.

ಶುಕ್ರವಾರ ಮಾರಿಸನ್ ಎರಡು ದೇಶಗಳ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧವು ಮುಕ್ತ, ಅಂತರ್ಗತ ಮತ್ತು ಚೇತರಿಸಿಕೊಳ್ಳುವ ಇಂಡೋ-ಪೆಸಿಫಿಕ್‌ನ ಹಂಚಿಕೆಯ ದೃಷ್ಟಿಯನ್ನು ಆಧರಿಸಿದೆ ಎಂದು ಒತ್ತಿ ಹೇಳಿದರು. ಅಧಿಕೃತ ಹೇಳಿಕೆಯಲ್ಲಿ ಅವರು, “ಆಸ್ಟ್ರೇಲಿಯಾ ಮತ್ತು ಭಾರತದ ಬಲವಾದ ದ್ವಿಪಕ್ಷೀಯ ಸಂಬಂಧವು ಪರಸ್ಪರ ತಿಳುವಳಿಕೆ ಮತ್ತು ನಂಬಿಕೆ, ಪ್ರಜಾಪ್ರಭುತ್ವಕ್ಕೆ ಬದ್ಧತೆ ಮತ್ತು ಮುಕ್ತ, ಅಂತರ್ಗತ, ಸ್ಥಿತಿಸ್ಥಾಪಕ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್‌ನ ಹಂಚಿಕೆಯ ದೃಷ್ಟಿಯನ್ನು ಆಧರಿಸಿದೆ ಎಂದಿದ್ದಾರೆ.

“ಪ್ರಧಾನಿ ಮೋದಿ ಮತ್ತು ನಾನು ನಮ್ಮ ವ್ಯಾಪಾರ ಮತ್ತು ಹೂಡಿಕೆ ಸಂಬಂಧವನ್ನು ಗಾಢವಾಗಿಸಲು ಮತ್ತು ನಮ್ಮ ಪರಸ್ಪರ ಆರ್ಥಿಕ ಚೇತರಿಕೆ ಮತ್ತು ಬೆಳವಣಿಗೆಯನ್ನು ಬೆಂಬಲಿಸಲು ಹೊಸ ಆರ್ಥಿಕ ಅವಕಾಶಗಳನ್ನು ಬಳಸಿಕೊಳ್ಳುವ ಬಗ್ಗೆ ಚರ್ಚಿಸುತ್ತೇವೆ. ಈ ಪ್ರಯತ್ನಗಳ ಕೇಂದ್ರವು ರಕ್ಷಣೆ ಮತ್ತು ಭದ್ರತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಮತ್ತು ನಿರ್ಣಾಯಕ ಖನಿಜಗಳು ಮತ್ತು ಶುದ್ಧ ಇಂಧನದಲ್ಲಿ ಸಹಕಾರವನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೆ ಉಕ್ರೇನ್‌ನಲ್ಲಿನ ಪರಿಸ್ಥಿತಿ ಮತ್ತು ಇಂಡೋ-ಪೆಸಿಫಿಕ್ ಮತ್ತು ಮ್ಯಾನ್ಮಾರ್‌ಗೆ ಅದರ ಪರಿಣಾಮಗಳು ಸೇರಿದಂತೆ ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳ ವ್ಯಾಪ್ತಿಯನ್ನು ಎರಡೂ ಕಡೆಯವರು ಚರ್ಚಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಹೇಳಿದರು.

ಇದನ್ನೂ ಓದಿ: ಉಕ್ರೇನ್​ ನಿರಾಶ್ರಿತರ ಮಕ್ಕಳೊಂದಿಗೆ ಆಟವಾಡಿದ ಸ್ಲೋವಾಕ್ ಪೊಲೀಸ್ ಅಧಿಕಾರಿಗಳು: ವಿಡಿಯೋ ವೈರಲ್​

Published On - 8:09 pm, Sun, 20 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್