AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಗುರುವಾರ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​ಗಳ ಗಡಿಯನ್ನು ದಾಟಿದ ಮೊದಲ ವಿಶ್ವ ನಾಯಕ ಮತ್ತು ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 2014 ರಲ್ಲಿ ಇನ್‌ಸ್ಟಾಗ್ರಾಮ್‌ಗೆ ಸೇರಿದ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗಿಂತ ಎರಡು ಪಟ್ಟು ಹೆಚ್ಚು ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಮುಂದಿನ ಐದು ಪ್ರಮುಖ ವಿಶ್ವ ನಾಯಕರ ಒಟ್ಟು ಅನುಯಾಯಿಗಳ ಸಂಖ್ಯೆಯೂ ಪ್ರಧಾನಿ ಮೋದಿಗಿಂತ ಕಡಿಮೆಯಾಗಿದೆ.

ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ
ನರೇಂದ್ರ ಮೋದಿ Image Credit source: Mint
ನಯನಾ ರಾಜೀವ್
|

Updated on: Feb 26, 2026 | 9:28 AM

Share

ನವದೆಹಲಿ, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜನಪ್ರಿಯತೆ ವಿಶ್ವಾದ್ಯಂತ ಪ್ರತಿಧ್ವನಿಸುತ್ತಿದೆ. ಈಗ ಪ್ರಧಾನಿ ಮೋದಿ ಅವರ ಹೆಸರಿಗೆ ಮತ್ತೊಂದು ವಿಶಿಷ್ಟ ದಾಖಲೆ ಸೇರ್ಪಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್​ಸ್ಟಾಗ್ರಾಂನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​​ಗಳನ್ನು ಹೊಂದುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೂಡ ಹಿಂದಿಕ್ಕಿ ಮಂದೆ ಸಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೆಟಾದ ವೇದಿಕೆಯಾದ ಇನ್​ಸ್ಟಾಗ್ರಾಂ ಅಕೌಂಟ್ ತೆರೆದಿದ್ದರು. ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗಿಂತ ಎರಡು ಪಟ್ಟು ಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ಪ್ರಧಾನಿ ಮೋದಿ ನಂತರ, ಡೊನಾಲ್ಡ್ ಟ್ರಂಪ್ 43.2 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಓದಿ: ಅಪ್ಪುಗೆ, ನಗು, ತಮಾಷೆ; ಇಸ್ರೇಲ್​ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ ಫಾಲೋವರ್ಸ್​​ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷರು 14.4 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಟರ್ಕಿಶ್ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ 11.6 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಅಂತಿಮವಾಗಿ, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮೈಲಿ 6.4 ಮಿಲಿಯನ್ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ಈ ದತ್ತಾಂಶವು ಪ್ರಧಾನಿ ಮೋದಿಯವರ ಜಾಗತಿಕ ವ್ಯಾಪ್ತಿ ಮತ್ತು ಪ್ರಪಂಚದಾದ್ಯಂತದ ಯುವಜನರಲ್ಲಿ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಭಾರತದೊಳಗೆ ಸಹ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರ ನಡುವೆ ಫಾಲೋವರ್ಸ್​​ಗಳ ಸಂಖ್ಯೆಯಲ್ಲಿ ಗಮನಾರ್ಹ ವ್ಯತ್ಯಾಸವಿದೆ.

ಭಾರತವನ್ನೇ ಪರಿಗಣಿಸಿದರೆ, ಪ್ರಧಾನಿ ಮೋದಿ ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಎರಡನೇ ವ್ಯಕ್ತಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. 16.1 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಗಿಂತ ಬಹಳ ಹಿಂದಿದ್ದಾರೆ.

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಮಾರು 12.6 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿರುವ ಮೂರನೇ ಸ್ಥಾನದಲ್ಲಿದ್ದಾರೆ.

Narendra Modi (50)

Narendra Modi (50)

​​ ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಎರಡು ದಿನಗಳ ಅಧಿಕೃತ ಭೇಟಿಯಲ್ಲಿದ್ದಾರೆ ಮತ್ತು ಬುಧವಾರ ಅವರಿಗೆ ಇಸ್ರೇಲಿ ಸಂಸತ್ತು ನೆಸ್ಸೆಟ್‌ನ ಅತ್ಯುನ್ನತ ಗೌರವವಾದ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕವನ್ನು ಪ್ರದಾನ ಮಾಡಿದೆ.ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ನಂತರ ಪದಕವನ್ನು ಪ್ರದಾನ ಮಾಡಲಾಯಿತು.

ತಮ್ಮ ಭಾಷಣದ ನಂತರ, ಪ್ರಧಾನಿ ಮೋದಿ ಅವರು ಇಸ್ರೇಲ್ ಸಂಸತ್ತಿನ ಸದಸ್ಯರೊಂದಿಗೆ, ನೆಸ್ಸೆಟ್ ಜೊತೆ ಸಂವಾದ ನಡೆಸಿದರು.ಪ್ರಧಾನಿ ಮೋದಿ ಅವರು ತಮ್ಮ ಭಾಷಣದ ಸಮಯದಲ್ಲಿ ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ. ತಮ್ಮ ಭಾಷಣದಲ್ಲಿ, ಇಸ್ರೇಲ್‌ನ ಪರಿಶ್ರಮ, ಧೈರ್ಯ ಮತ್ತು ಸಾಧನೆಗಳನ್ನು ಭಾರತದಲ್ಲಿ ಬಹಳವಾಗಿ ಮೆಚ್ಚಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು