ಲೋಕಸಭೆಯಲ್ಲಿ ಭೋಜ್​ಪು​ರಿ ಗಾದೆ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟ ನರೇಂದ್ರ ಮೋದಿ

Parliament: ತಾವು ಮಾಡುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ವಿಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸೂಚ್ಯವಾಗಿ ಹೇಳಿದ ಮೋದಿ 'ನಾ ಖೇಲಬ್, ನಾ ಖೇಲೆ ದೇ, ಖೇಲಾ ಕೆ ಬಿಗಾಡೆ' ಎಂಬ ಭೋಜ್​ಪುರಿ ಗಾದೆಯನ್ನು ಉಲ್ಲೇಖಿಸಿದ್ದಾರೆ.

ಲೋಕಸಭೆಯಲ್ಲಿ ಭೋಜ್​ಪು​ರಿ ಗಾದೆ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟ ನರೇಂದ್ರ ಮೋದಿ
ಲೋಕಸಭೆಯಲ್ಲಿ ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 10, 2021 | 8:22 PM

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭೋಜ್​ಪು​ರಿ ಗಾದೆಯೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ತಾವು ಮಾಡುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ವಿಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸೂಚ್ಯವಾಗಿ ಹೇಳಿದ ಮೋದಿ ‘ನಾ ಖೇಲಬ್, ನಾ ಖೇಲೆ ದೇ, ಖೇಲಾ ಕೆ ಬಿಗಾಡೆ’ ಎಂಬ ಭೋಜ್​ಪುರಿ ಗಾದೆಯನ್ನುಉಲ್ಲೇಖಿಸಿದ್ದಾರೆ. ‘ಆಟವಾಡಲ್ಲ, ಆಟವಾಡಲೂ ಬಿಡಲ್ಲ, ಆಟವನ್ನು ಕೆಡಿಸಿ ಬಿಡುವುದು’ ಎಂದು ಈ ಗಾದೆ ಮಾತಿನ ಅರ್ಥ.

ಇದಕ್ಕಿಂತ ಮುನ್ನ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ ಮೋದಿ, ಕಾಂಗ್ರೆಸ್ ಈ ದೇಶದ ಹಳೇ ಪಕ್ಷ. ಅವರು ಸುಮಾರು 6 ದಶಕಗಳ ಕಾಲ ಅಧಿಕಾರದಲ್ಲಿದ್ದರು. ಆದರೆ ಈಗ ಆ ಪಕ್ಷ ಯಾವ ರೀತಿ ಆಗಿದೆ? ಕಾಂಗ್ರೆಸ್ ವಿಭಜಿತ ಪಕ್ಷವಾಗಿದೆ. ಅವರು ಎಷ್ಟು ಗೊಂದಲದಲ್ಲಿದ್ದಾರೆ ಎಂದರೆ ರಾಜ್ಯ ಸಭೆಯಲ್ಲೊಂದು, ಲೋಕಸಭೆಯಲ್ಲೊಂದು ರೀತಿ ನಡೆದುಕೊಳ್ಳುತ್ತಾರೆ ಎಂದಿದ್ದಾರೆ.

ಕಳೆದ 6 ವರ್ಷಗಳಿಂದ ನೋಡುತ್ತಲೇ ಇದ್ದೇನೆ, ವಿಪಕ್ಷದ ಅಜೆಂಡಾಗಳು ಎಷ್ಟು ಬಾರಿ ಬದಲಾದವು. ನಾವು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿದ್ದೆವು. ಆದರೆ ಈಗ ಯಾರೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಶರದ್ ಪವಾರ್ ಅವರ ಮಾತನ್ನು ಉಲ್ಲೇಖಿಸಿದ ಮೋದಿ, ಅವರೀಗ  ಜನರನ್ನು ಮರಳು ಮಾಡುತ್ತಿದ್ದಾರೆ. ಈ ಹಿಂದೆ ಅವರು ಎಪಿಎಂಸಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Narendra Modi In Lok Sabha | ಕೃಷಿ ಸುಧಾರಣೆಗೆ ಸರ್ಕಾರದ ಮಧ್ಯಪ್ರವೇಶ ಅನಿವಾರ್ಯ; ನೂತನ ಕೃಷಿ ಕಾಯ್ದೆಗಳಿಗೆ ನರೇಂದ್ರ ಮೋದಿ ಸಮರ್ಥನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​