ದೆಹಲಿ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ: ಆಪ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಅಭಿವೃದ್ಧಿಗೆ ಬಿಜೆಪಿಯ ಪಾತ್ರವನ್ನು ಪ್ರಶಂಸಿಸಿ, ಆಮ್ ಆದ್ಮಿ ಪಕ್ಷದ (ಆಪ್) ಆಡಳಿತವನ್ನು ತೀವ್ರವಾಗಿ ಟೀಕಿಸಿದ್ದಾರೆ. ದೆಹಲಿ ಮೆಟ್ರೋದ ನಾಲ್ಕನೇ ಹಂತದ ಉದ್ಘಾಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಆಪ್ ಸರ್ಕಾರದ ದುರಾಡಳಿತದಿಂದಾಗಿ ದೆಹಲಿ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದೆ ಎಂದು ಆರೋಪಿಸಿದ್ದಾರೆ.

ದೆಹಲಿ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ: ಆಪ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ದೆಹಲಿ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ: ಆಪ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 05, 2025 | 3:09 PM

ನವದೆಹಲಿ, ಜನವರಿ 05: ದೆಹಲಿಯ ಅಭಿವೃದ್ಧಿ ಅತ್ಯಗತ್ಯವಾಗಿದ್ದು, ಅದನ್ನು ಸಾಧಿಸಲು ಬಿಜೆಪಿಗೆ ಮಾತ್ರ ಸಾಧ್ಯ. ಆದರೆ ಅಭಿವೃದ್ಧಿ ಮಾಡದೇ ಆಪ್​ ಪಕ್ಷ ಕಳೆದ 10 ವರ್ಷಗಳನ್ನು ವ್ಯರ್ಥ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ವಾಗ್ದಾಳಿ ಮಾಡಿದ್ದಾರೆ. ದೆಹಲಿ ಮೆಟ್ರೋದ ನಾಲ್ಕನೇ ಹಂತ ಜನಕಪುರಿ ಮತ್ತು ಕೃಷ್ಣಾ ಪಾರ್ಕ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಗೆ ಅವಕಾಶ ನೀಡುವಂತೆ ದೆಹಲಿಯ ಜನರನ್ನು ಕೇಳಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ದೆಹಲಿಯ ಅಭಿವೃದ್ಧಿ ಸವಾಲುಗಳನ್ನು ಎದುರಿಸಲು ಆಪ್​​ ಸರ್ಕಾರಕ್ಕೆ ಅಗತ್ಯವಾದ ದೂರದೃಷ್ಟಿ ಕೊರತೆಯಿದೆ. ಆಪ್​ಗೆ ಯಾವುದೇ ಜವಾಬ್ದಾರಿಯನ್ನು ನೀಡಿದರೆ ಅದು ದೆಹಲಿಯ ಜನರಿಗೆ ಶಿಕ್ಷೆ ನೀಡಿದಂತೆ. ಈ ಸರ್ಕಾರವು ನೀರಿನ ಕೊರತೆ, ಮಾಲಿನ್ಯ, ಪ್ರತಿ ವರ್ಷ ತುರ್ತು ಪರಿಸ್ಥಿತಿಯನ್ನಾಗಿ ಪರಿವರ್ತಿಸಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 4ನೇ ಹಂತದ ಮೆಟ್ರೋ ಮಾರ್ಗ, ದೇಶದಲ್ಲಿ 1000 ಕಿಮೀ ಮೆಟ್ರೋ ಸಂಚಾರ, ದಾಖಲೆ

ಸದ್ಯ ನಾವು 2025ರಲ್ಲಿದ್ದೇವೆ. 21ನೇ ಶತಮಾನದ ಇಪ್ಪತ್ತೈದು ವರ್ಷಗಳು ಕಳೆದಿವೆ. ಅಂದರೆ ಕಾಲು ಶತಮಾನ ಕಳೆದಿವೆ. ಈ ಸಮಯದಲ್ಲಿ, ಬಹುಶಃ ದೆಹಲಿಯಲ್ಲಿ ಎರಡರಿಂದ ಮೂರು ತಲೆಮಾರುಗಳ ಯುವಕರು ಬೆಳೆದಿದ್ದಾರೆ. ಈಗ ಮುಂಬರುವ 25 ವರ್ಷಗಳು ಭಾರತದ ಭವಿಷ್ಯಕ್ಕೆ ಮತ್ತು ದೆಹಲಿಯ ಭವಿಷ್ಯಕ್ಕೆ ಬಹಳ ಮುಖ್ಯವಾಗಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್​

ಈ ವರ್ಷ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಆದರೆ ಅದಕ್ಕೂ ಮುಂಚೆ ಆಪ್ ಸರ್ಕಾರ​ವು ರಾಷ್ಟ್ರ ರಾಜಧಾನಿಯನ್ನು ಒಂದರ ನಂತರ ಒಂದರಂತೆ ಬಿಕ್ಕಟ್ಟಿಗೆ ತಳ್ಳುತ್ತಿದೆ. ತಮ್ಮ ಆಡಳಿತವನ್ನು ಭ್ರಷ್ಟಾಚಾರ ಮತ್ತು ದುರುಪಯೋಗ ಸರ್ಕಾರವೆಂದು ಬಣ್ಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಜನರಿಗೆ ಪ್ರಧಾನಿ ಮೋದಿ ಮನವಿ

ದೆಹಲಿಯ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿಗೆ ಅವಕಾಶ ನೀಡುವಂತೆ ನಾನು ದೆಹಲಿಯ ಜನರಿಗೆ ಮನವಿ ಮಾಡಲು ಬಯಸುತ್ತೇನೆ. ಈಗ, ನಾವು ಆಪ್​ ಸರ್ಕಾರವನ್ನು ಸಹಿಸಿಕೊಳ್ಳುವುದಿಲ್ಲ, ಬದಲಿಗೆ ನಾವು ಬದಲಾವಣೆಯನ್ನು ತರುತ್ತೇವೆ. (‘ಆಪ್ಡಾ ನಹಿ ಸಹೆಂಗೆ, ಬದಲ್ ಕೆ ರಹೆಂಗೆ’) ದೆಹಲಿ ಅಭಿವೃದ್ಧಿಯನ್ನು ಬಯಸಿದರೆ, ದೆಹಲಿಯ ಜನರು ಬಿಜೆಪಿಯನ್ನು ನಂಬುತ್ತಾರೆ ಎಂದರು.

ಇದನ್ನೂ ಓದಿ: ಭಾರತ ವಿಶ್ವಗುರು ಆಗುವ ಮೊದಲು ಈ ಕೆಲಸ ಮಾಡಬೇಕು, ಆಗ ಜಗತ್ತು ವಿಶ್ವಗುರು ಆಗುವುದು: ಡಾ ಮೋಹನ್ ಭಾಗವತ್

ಇನ್ನು ಈ ವೇಳೆ ಕೇಂದ್ರ ಸರ್ಕಾರದ ಕೊಡುಗೆಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಕೇಂದ್ರವು ದೆಹಲಿಗೆ 75,000 ಕೋಟಿ ರೂ. ಮೀಸಲಿಟ್ಟಿದ್ದು, ದೆಹಲಿಯನ್ನು ಭಾರತ ಪರಂಪರೆಯ ಭವ್ಯ ರೂಪವನ್ನು ಪ್ರದರ್ಶಿಸುವ ನಗರವನ್ನಾಗಿ ಮಾಡಲು ಬಯಸುತ್ತೇವೆ. ಬಿಜೆಪಿಯ ಪ್ರಯತ್ನದಿಂದಾಗಿ ಕಳೆದ 10 ವರ್ಷಗಳಲ್ಲಿ ಇಲ್ಲಿನ ಮೆಟ್ರೋ ವ್ಯವಸ್ಥೆ ದ್ವಿಗುಣಗೊಂಡಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು