ರಾಮಮಂದಿರ ಉದ್ಘಾಟನೆಗೆ ಬಂದಿದ್ದ ಕಾಂಗ್ರೆಸ್​ ನಾಯಕರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ: ಪ್ರಧಾನಿ ಮೋದಿ

ಲೋಕಸಭೆ ಚುನಾವಣಾ ಪ್ರಚಾರದ ಅಂಗವಾಗಿ ಶನಿವಾರ ಅಜ್ಮೀರ್​ನಲ್ಲಿ ರೋಡ್ ಶೋ ಮಾಡಿ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಿದ್ದ ಕೆಲ ನಾಯಕರನ್ನು ಪಕ್ಷದಿಂದ ಆರು ವರ್ಷ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Follow us
ಗಂಗಾಧರ​ ಬ. ಸಾಬೋಜಿ
|

Updated on:Apr 06, 2024 | 7:59 PM

ಅಜ್ಮೀರ್​, ಏಪ್ರಿಲ್ 06: ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಬರದಂತೆ ಕಾಂಗ್ರೆಸ್​ ತನ್ನ ನಾಯಕರಿಗೆ ವಿರೋಧಿಸಿತ್ತು. ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಿದ್ದ ಕೆಲ ನಾಯಕರನ್ನು ಪಕ್ಷದಿಂದ ಆರು ವರ್ಷ ಉಚ್ಛಾಟನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ಅಂಗವಾಗಿ ಶನಿವಾರ ಅಜ್ಮೀರ್​ನಲ್ಲಿ ರೋಡ್ ಶೋ ಮಾಡಿ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್​ ಶ್ರೀರಾಮನನ್ನು ದ್ವೇಷಿಸುತ್ತದೆ ಎಂದು ಕಿಡಿಕಾರಿದ್ದಾರೆ.

ರಾಮ ಮಂದಿರ ನಿರ್ಮಾಣದಿಂದ ಎಲ್ಲರಿಗೂ ಸಂತೋಷವಾಗಿದೆಯೇ, ಇಲ್ಲವೇ ನೀವೇ ಹೇಳಿ. ಆದರೆ ಕಾಂಗ್ರೆಸ್ ಮಾತ್ರ ರಾಮನನ್ನು ಎಷ್ಟು ದ್ವೇಷಿಸುತ್ತದೆ ಎಂದರೆ ಅವರು ಪ್ರಾಣಪ್ರತಿಷ್ಠೆಗೆ ಬರುವವರನ್ನು ವಿರೋಧಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಲೀಗ್‌ ಚಿಂತನೆಗಳನ್ನು ಬಿಂಬಿಸುವ ಕಾಂಗ್ರೆಸ್ ಪ್ರಣಾಳಿಕೆ: ಸಹರಾನ್‌ಪುರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಶ್ರೀರಾಮನಿಲ್ಲದ ಈ ದೇಶವನ್ನು ನೀವು ಊಹಿಸಬಲ್ಲಿರಾ? ನಮ್ಮ ದಿನನಿತ್ಯ ಆರಂಭವಾಗುವುದೇ ರಾಮನಿಂದ. ಕೊನೆಗೊಳ್ಳುವುದು ಕೂಡ ರಾಮನಿಂದ. ಆದರೆ ನಿಮಗೆ (ಕಾಂಗ್ರೆಸ್​) ಯಾಕೆ ಆ ರಾಮನ ಮೇಲೆ ಅಷ್ಟು ಕೋಪ? ಇದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮನೆಯಲ್ಲಿ ರಾಮನಿದ್ದಾನೆ. ಇನ್ನೇನು ಕೆಲ ದಿನಗಳಲ್ಲಿ ರಾಮನವಮಿ ಬರುತ್ತದೆ. ಪ್ರತಿಯೊಬ್ಬರು ಅದ್ಧೂರಿಯಾಗಿ ರಾಮನವಮಿ ಆಚರಿಸುತ್ತಾರೆ. ನೀವು ಎಷ್ಟು ಪ್ರತಿಭಟಿಸುತ್ತೀರಿ ನೋಡೋಣ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ‘ದೇಶ ಮೊದಲು’ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ: ಪ್ರಧಾನಿ ಮೋದಿ

ಇನ್ನು ರಾಮ ಮಂದಿರ ನಿರ್ಮಾಣದಿಂದಾಗಿ ಇಡೀ ಅಭಿವೃದ್ಧಿ ಹಿನ್ನಡೆಯಾಗಿದೆ ಎಂದು ಕಾಂಗ್ರೆಸ್​ ಆರೋಪ ವಿಚಾರವಾಗಿ ಮಾತನಾಡಿದ ಅವರು, ಬಡವರು, ಹಿಂದುಳಿದವರು ಮತ್ತು ಯುವಕರ ಕಲ್ಯಾಣದ ಬಗ್ಗೆ ಕಾಂಗ್ರೆಸ್ ಎಂದಿಗೂ ಯೋಚಿಸಿಲ್ಲ. 100 ವರ್ಷಗಳ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಪ್ರಧಾನಿ ಹುದ್ದೆಯು ನಾಗರಿಕರು ನೀಡಿದ ಉತ್ತಮ ಅವಕಾಶವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:51 pm, Sat, 6 April 24

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು