AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ: ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ಮಾಡಲಿದ್ದಾರೆ ಪ್ರಧಾನಿ ಮೋದಿ

ದೆಹಲಿ: ಬಹು ನಿರೀಕ್ಷಿತ ಉತ್ತರಪ್ರದೇಶದ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಇದೇ ಆಗಸ್ಟ್ 5ರಂದು ಪ್ರಧಾನಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ವಿಷ್ಣು ದೇಗುಲದ ಮಾದರಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಈ ಮೊದಲು ದೇವಾಲಯಕ್ಕೆ 3 ಗೋಪುರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿತ್ತು ಆದರೆ ಈಗ ಐದು ಗೋಪುರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆ. ದೇವಾಲಯದ ಉದ್ದ, ಅಗಲ, ಎತ್ತರ ಹೆಚ್ಚಿಸಲು ನಿರ್ಧರಿಸಲಾಗಿದೆ. ದೇವಾಲಯಕ್ಕೆ ಮೊದಲು ಬೆಳ್ಳಿ ಇಟ್ಟಿಗೆ ಇಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ನೆರವೇರಿಸುತ್ತಾರೆ. 60 […]

ರಾಮ ಮಂದಿರ: ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ಮಾಡಲಿದ್ದಾರೆ ಪ್ರಧಾನಿ ಮೋದಿ
ಆಯೇಷಾ ಬಾನು
|

Updated on:Jul 20, 2020 | 1:05 PM

Share

ದೆಹಲಿ: ಬಹು ನಿರೀಕ್ಷಿತ ಉತ್ತರಪ್ರದೇಶದ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಇದೇ ಆಗಸ್ಟ್ 5ರಂದು ಪ್ರಧಾನಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ವಿಷ್ಣು ದೇಗುಲದ ಮಾದರಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಈ ಮೊದಲು ದೇವಾಲಯಕ್ಕೆ 3 ಗೋಪುರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿತ್ತು ಆದರೆ ಈಗ ಐದು ಗೋಪುರ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆ. ದೇವಾಲಯದ ಉದ್ದ, ಅಗಲ, ಎತ್ತರ ಹೆಚ್ಚಿಸಲು ನಿರ್ಧರಿಸಲಾಗಿದೆ. ದೇವಾಲಯಕ್ಕೆ ಮೊದಲು ಬೆಳ್ಳಿ ಇಟ್ಟಿಗೆ ಇಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ನೆರವೇರಿಸುತ್ತಾರೆ. 60 ಅಡಿ ಆಳ ಪಾಯ ತೆಗೆದು ಅಡಿಪಾಯ ಹಾಕಲಾಗುತ್ತೆ.

ಆಗಸ್ಟ್ 5 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.15 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಗೆ ಭೇಟಿ ನೀಡಿ ಅಂದೇ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸುವ ಸಾಧ್ಯತೆ ಇದೆ. ಮಧ್ಯಾಹ್ನ 12.15 ಕ್ಕೆ ಮಂದಿರ ನಿರ್ಮಾಣಕ್ಕೆ ಬೆಳ್ಳಿ ಇಟ್ಟಿಗೆ ಇಟ್ಟು ಶಂಕುಸ್ಥಾಪನೆ ಮಾಡಲಾಗುತ್ತೆ. ಆಗಸ್ಟ್ 3ರಿಂದ 3 ದಿನಗಳ ಕಾಲ ಅಯೋಧ್ಯೆಯಲ್ಲಿ ವೈದಿಕ ಪೂಜೆ, ಪುನಸ್ಕಾರ ನಡೆಯುತ್ತೆ. ಆಗಸ್ಟ್ 4 ರಂದು ಅಯೋಧ್ಯೆಯಲ್ಲಿ ರಾಮಾಚಾರ್ಯ ಪೂಜೆ ನಡೆಯಲಿದೆ. ಇನ್ನು ಅಯೋಧ್ಯೆಗೆ ಪ್ರಧಾನಿ ಭೇಟಿ ಬಗ್ಗೆ ಪ್ರಧಾನಿ ಕಚೇರಿಯಿಂದ ಅಧಿಕೃತ ಹೇಳಿಕೆ ಮಾತ್ರ ಬಾಕಿ ಇದೆ. ಯುಪಿ ಸರ್ಕಾರ, ಅಯೋಧ್ಯೆಯ ರಾಮಮಂದಿರ ಟ್ರಸ್ಟ್ ಎಲ್ಲ ಸಿದ್ದತೆ ಮಾಡಿಕೊಳ್ಳುತ್ತಿದೆ.

Published On - 11:23 am, Mon, 20 July 20

ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್