ಅಮೆರಿಕ ಅಧ್ಯಕ್ಷ ಬೈಡನ್ ಆಯೋಜಿಸಿರುವ ಜಾಗತಿಕ ಕೊವಿಡ್-19 ಶೃಂಗಸಭೆಯಲ್ಲಿ ಇಂದು ಭಾಗವಹಿಸಲಿದ್ದಾರೆ ಮೋದಿ

ಯುಎಸ್ಎ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಜೂನಿಯರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು ಎರಡನೇ ಜಾಗತಿಕ ಕೊವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಅಮೆರಿಕ ಅಧ್ಯಕ್ಷ ಬೈಡನ್ ಆಯೋಜಿಸಿರುವ ಜಾಗತಿಕ ಕೊವಿಡ್-19 ಶೃಂಗಸಭೆಯಲ್ಲಿ ಇಂದು ಭಾಗವಹಿಸಲಿದ್ದಾರೆ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 12, 2022 | 6:56 AM

ದೆಹಲಿ: ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರು ಆಯೋಜಿಸಿರುವ ಕೊವಿಡ್ -19 (Covid- 19) ಎರಡನೇ ಜಾಗತಿಕ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. 2021ರ ಸೆಪ್ಟೆಂಬರ್‌ ತಿಂಗಳಲ್ಲಿ ನಡೆದ ಮೊದಲ ಜಾಗತಿಕ ಶೃಂಗಸಭೆಯಲ್ಲೂ ಪ್ರಧಾನಿ ಭಾಗವಹಿಸಿದ್ದರು. “ಯುಎಸ್ಎ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಜೂನಿಯರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು ಎರಡನೇ ಜಾಗತಿಕ ಕೊವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. “ಶೃಂಗಸಭೆಯು ಕೊವಿಡ್ ಸಾಂಕ್ರಾಮಿಕದ ನಿರಂತರ ಸವಾಲುಗಳನ್ನು ಪರಿಹರಿಸಲು ಮತ್ತು ಬಲವಾದ ಜಾಗತಿಕ ಆರೋಗ್ಯ ಭದ್ರತಾ ವ್ಯವಸ್ಥೆಯನ್ನು ನಿರ್ಮಿಸಲು ಹೊಸ ಕ್ರಮಗಳನ್ನು ಉತ್ತೇಜಿಸಲು ಉದ್ದೇಶಿಸಿದೆ” ಎಂದು ಅದು ಹೇಳಿದೆ.  ಹೇಳಿಕೆಯ ಪ್ರಕಾರ, ಪ್ರಧಾನ ಮಂತ್ರಿ ಶೃಂಗಸಭೆಯ ಆರಂಭಿಕ ಅಧಿವೇಶನದಲ್ಲಿ ‘ಸಾಂಕ್ರಾಮಿಕ ಆಯಾಸವನ್ನು ತಡೆಗಟ್ಟುವುದು ಮತ್ತು ಸಿದ್ಧತೆಗೆ ಆದ್ಯತೆ’ ಎಂಬ ವಿಷಯದ ಕುರಿತು ಭಾಷಣ ಮಾಡಲಿದ್ದಾರೆ.

“ಸುರಕ್ಷಿತ ಮತ್ತು ಕೈಗೆಟುಕುವ ಲಸಿಕೆಗಳು, ಔಷಧಿಗಳು, ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಕಡಿಮೆ ವೆಚ್ಚದ ಸ್ಥಳೀಯ ತಂತ್ರಜ್ಞಾನಗಳ ಅಭಿವೃದ್ಧಿ, ಜೀನೋಮಿಕ್ ಕಣ್ಗಾವಲು ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಸಾಂಕ್ರಾಮಿಕ ರೋಗವನ್ನು ಎದುರಿಸಲು ನಡೆಯುತ್ತಿರುವ ಜಾಗತಿಕ ಪ್ರಯತ್ನಗಳಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಜಾಗತಿಕ ಆರೋಗ್ಯ ಭದ್ರತಾ ವ್ಯವಸ್ಥೆ ಬಲಪಡಿಸುವ ಮತ್ತು ಸುಧಾರಿಸುವ ಉದ್ದೇಶದಿಂದ ಭಾರತವು ಬಹುಪಕ್ಷೀಯ ವೇದಿಕೆಗಳಲ್ಲಿ ಪೂರ್ವಭಾವಿಯಾಗಿ ತೊಡಗಿಸಿಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಶೃಂಗಸಭೆಯಲ್ಲಿ CARICOM ನ ಅಧ್ಯಕ್ಷರಾಗಿ ಬೆಲೀಜ್‌ ಸರ್ಕಾರದ ಮುಖ್ಯಸ್ಥರು, ಆಫ್ರಿಕನ್ ಯೂನಿಯನ್‌ನ ಅಧ್ಯಕ್ಷರಾಗಿ ಸೆನೆಗಲ್, G20 ಅಧ್ಯಕ್ಷರಾಗಿ ಇಂಡೋನೇಷ್ಯಾ ಮತ್ತು G7 ನ ಅಧ್ಯಕ್ಷರಾಗಿ ಜರ್ಮನಿ ಕ್ರಮವಾಗಿ ಭಾಗವಹಿಸುತ್ತಾರೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕರು ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ
Image
ರಾಷ್ಟ್ರಮಟ್ಟದಲ್ಲಿ ಮೋದಿ ಒಬ್ಬ ಪವಾಡಸದೃಶ ನಾಯಕನಾಗಿದ್ದಾರೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಕೆರಿಬಿಯನ್ ಸಮುದಾಯವು ಕೆರಿಬಿಯನ್ ಪ್ರದೇಶದ 15 ಸದಸ್ಯ ರಾಷ್ಟ್ರಗಳ ಅಂತರ್ ಸರ್ಕಾರಿ ಸಂಸ್ಥೆಯಾಗಿದ್ದು, ಸದಸ್ಯರ ನಡುವೆ ಆರ್ಥಿಕ ಏಕೀಕರಣ ಮತ್ತು ಸಹಕಾರವನ್ನು ಉತ್ತೇಜಿಸುವ ಪ್ರಾಥಮಿಕ ಉದ್ದೇಶವನ್ನು ಹೊಂದಿದೆ.

ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಬುಧವಾರ 2,505 ಹೊಸ ಕೊವಿಡ್ -19 ಪ್ರಕರಣಗಳು ಮತ್ತು 52 ಸಾವುಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 43,112,690 ಆಗಿದ್ದು , ಒಟ್ಟು 522,864 ಸಾವು ವರದಿ ಆಗಿದೆ. ಸಚಿವಾಲಯದ ಅಂಕಿಅಂಶಗಳ ಪ್ರಕಾರ ಒಟ್ಟು 42,557,939 ಮಂದಿ ಚೇತರಿಸಿಕೊಂಡಿದ್ದಾರೆ.

Published On - 6:47 am, Thu, 12 May 22

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ