PM Modi Swearing in Ceremony: ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮೋದಿ

ಇಂದು (ಜೂನ್ 9 ರಂದು) ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರ ಭಾನುವಾರ ಸಂಜೆ 7:15 ರ ಸುಮಾರಿಗೆ ನಡೆಯಲಿದೆ.

PM Modi Swearing in Ceremony: ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮೋದಿ
ನರೇಂದ್ರ ಮೋದಿ
Follow us
|

Updated on: Jun 09, 2024 | 6:00 AM

ದೆಹಲಿ ಜೂನ್ 09:  ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ. ಶುಕ್ರವಾರ ನಡೆದ ಸಭೆಯಲ್ಲಿ, ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು. ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ (Narendra Modi)  ಸಜ್ಜಾಗಿದ್ದಾರೆ. ಇಂದು (ಜೂನ್ 9 ರಂದು) ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ (Swearing in Ceremony) ಸ್ವೀಕಾರ ಸಮಾರಂಭ ನಡೆಯಲಿದೆ. ಸಮಾರಂಭವನ್ನು ಟಿವಿ ಸುದ್ದಿ ವಾಹಿನಿಗಳು ಮತ್ತು X ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರ ಭಾನುವಾರ ಸಂಜೆ 7:15 ರ ಸುಮಾರಿಗೆ ನಡೆಯಲಿದೆ. ಜೂನ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಮತ್ತು ಕೇಂದ್ರ ಸಚಿವ ಸಂಪುಟದ ರಾಜೀನಾಮೆಯನ್ನು ಸಲ್ಲಿಸಿದರು.

ಸಮಾರಂಭಕ್ಕೆ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ವಿವಿಧ ದೇಶಗಳ ವಿದೇಶಿ ನಾಯಕರು ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಅವರು ಇಂದು ನವದೆಹಲಿಗೆ ಆಗಮಿಸುವ ಯೋಜನೆ ಇದೆ. ಸಮಾರಂಭದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಔಪಚಾರಿಕ ಔತಣ ಕೂಟದಲ್ಲಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಾರ್ಕ್ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿರುವ ಕಾರಣ ದೆಹಲಿಯು ಭಾನುವಾರ ಹೈ ಅಲರ್ಟ್ ಆಗಿದೆ.  ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಸೇರಿದಂತೆ ಪ್ರಮುಖ ಹೋಟೆಲ್‌ಗಳು ಈಗಾಗಲೇ ಬಿಗಿ ಭದ್ರತೆಯಲ್ಲಿವೆ. ಗಣ್ಯರು ತಮ್ಮ ಹೋಟೆಲ್‌ಗಳು ಮತ್ತು ಸ್ಥಳದ ನಡುವೆ ಪ್ರಯಾಣಿಸಲು ಪೊಲೀಸ್ ಅಧಿಕಾರಿಗಳು ಸುರಕ್ಷಿತ ಮಾರ್ಗವನ್ನು ಏರ್ಪಡಿಸಿದ್ದಾರೆ.

ಭಾಗವಹಿಸುವ ಗಣ್ಯರು

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್, ಮಾಲ್ಡೀವಿಯನ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇತರರು ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಸಂಪುಟ ಸವಾಲು: ಕ್ಯಾಬಿನೆಟ್ ಸೇರಲು ಯಾರೆಲ್ಲ ರೇಸ್‌ನಲ್ಲಿದ್ದಾರೆ? ಇಲ್ಲಿದೆ ಪಟ್ಟಿ

ಏತನ್ಮಧ್ಯೆ, ಪ್ರಧಾನಿ ಮೋದಿ ಅವರ ಬೆಂಬಲಿಗರು ಅವರ ಮೂರನೇ ಪ್ರಮಾಣವಚನವನ್ನು ಅಮೆರಿಕದ 22 ನಗರಗಳಲ್ಲಿ ಆಚರಿಸಲು ಸಿದ್ಧತೆಗಳು  ನಡೆದಿವೆ ಎಂಬ ಬಲ್ಲಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ನ್ಯೂಯಾರ್ಕ್, ಜರ್ಸಿ ಸಿಟಿ, ವಾಷಿಂಗ್ಟನ್ ಡಿಸಿ, ಬೋಸ್ಟನ್, ಟ್ಯಾಂಪಾ, ಅಟ್ಲಾಂಟಾ, ಹೂಸ್ಟನ್, ಡಲ್ಲಾಸ್, ಚಿಕಾಗೋ, ಲಾಸ್ ಏಂಜಲೀಸ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಸೇರಿದಂತೆ ನಗರಗಳಲ್ಲಿ ಆಚರಣೆಗಳು ನಡೆಯಲಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್