AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ, ಮೆಟ್ರೊ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ

Narendra Modi ಎಂಐಟಿ ಮೈದಾನದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುವುದಕ್ಕಾಗಿ ಅವರು ಗಾರ್ವೇರ್ ಕಾಲೇಜಿನಿಂದ ಆನಂದನಗರ ಮೆಟ್ರೋ ನಿಲ್ದಾಣದವರೆಗೆ ಮೆಟ್ರೊದಲ್ಲೇ ಪ್ರಯಾಣಿಸಿದರು.  ಶಾಲಾ ಮಕ್ಕಳೊಂದಿಗೆ ಮೆಟ್ರೊ ಸವಾರಿ ಮಾಡುತ್ತಿರುವ ಚಿತ್ರಗಳನ್ನೂ ಮೋದಿ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.

ಪುಣೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ, ಮೆಟ್ರೊ ರೈಲು ಯೋಜನೆಗೆ  ಪ್ರಧಾನಿ ಮೋದಿ ಚಾಲನೆ
ಪುಣೆಯಲ್ಲಿ ಪ್ರಧಾನಿ ಮೋದಿ ಮೆಟ್ರೊ ರೈಲು ಪಯಣ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Mar 06, 2022 | 1:44 PM

Share

ಪುಣೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಮಹಾರಾಷ್ಟ್ರದ ಪುಣೆಯಲ್ಲಿ ಮಹಾನ್ ಮರಾಠ ಯೋಧ ಛತ್ರಪತಿ ಶಿವಾಜಿ ಮಹಾರಾಜರ (Chhatrapati Shivaji Maharaj) 9.5 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದ್ದು, ಮಹಾರಾಷ್ಟ್ರದ ಪುಣೆಯಲ್ಲಿ  32.2 ಕಿಮೀ  ಮೆಟ್ರೊ ರೈಲು ಯೋಜನೆಯಲ್ಲಿ 12 ಕಿಮೀ ಹಿರಿದಾಗಿಸಿದ  ಮೆಟ್ರೊ ಮಾರ್ಗಕ್ಕೆ ಚಾಲನೆ ನೀಡಿದರು. ಎಂಐಟಿ ಮೈದಾನದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುವುದಕ್ಕಾಗಿ ಅವರು ಗಾರ್ವೇರ್ ಕಾಲೇಜಿನಿಂದ ಆನಂದನಗರ ಮೆಟ್ರೋ ನಿಲ್ದಾಣದವರೆಗೆ ಮೆಟ್ರೊದಲ್ಲೇ ಪ್ರಯಾಣಿಸಿದರು.  ಶಾಲಾ ಮಕ್ಕಳೊಂದಿಗೆ ಮೆಟ್ರೊ ಸವಾರಿ ಮಾಡುತ್ತಿರುವ ಚಿತ್ರಗಳನ್ನೂ ಮೋದಿ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.  ಪುಣೆ ನಗರ ಸಂಚಾರಕ್ಕಾಗಿ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿರುವ ಮೆಟ್ರೊ ಯೋಜನೆಗೆ ಡಿಸೆಂಬರ್ 24, 2016 ರಂದು ಮೋದಿಯವರೇ ಅಡಿಗಲ್ಲು ಹಾಕಿದ್ದರು. ಈ ಯೋಜನೆಯನ್ನು ಒಟ್ಟು ₹11,400 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಪುಣೆ ಮೆಟ್ರೊ ಅಲ್ಯೂಮಿನಿಯಂ ಬಾಡಿ ಕೋಚ್‌ಗಳನ್ನು ಹೊಂದಿರುವ ದೇಶದ ಮೊದಲ ಯೋಜನೆಯಾಗಿದೆ. ಇದನ್ನು ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ಸ್ಥಳೀಯವಾಗಿ ತಯಾರಿಸಲಾಗುತ್ತದೆ.

ಪುಣೆ ಮೆಟ್ರೊದ ಶಂಕುಸ್ಥಾಪನೆಗೆ ನೀವು ನನ್ನನ್ನು ಕರೆದಿದ್ದೀರಿ. ಈಗ ಅದನ್ನು ಅರ್ಪಿಸಲು ನನಗೆ ಅವಕಾಶ ನೀಡಿರುವುದು ನನ್ನ ಅದೃಷ್ಟ. ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬಹುದು ಎಂಬ ಸಂದೇಶವೂ ಇದರಲ್ಲಿದೆ ಎಂದು ಎಂಐಟಿ ಮೈದಾನದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ಮೋದಿ ಅವರು ಪುಣೆಯಲ್ಲಿ ಮುಲಾ-ಮುತಾ ನದಿ ಯೋಜನೆಗಳ ಪುನರುಜ್ಜೀವನ ಮತ್ತು ಮಾಲಿನ್ಯ ನಿವಾರಣೆ ಯೋಡನೆಗೆ ಅಡಿಪಾಯ ಹಾಕಿದರು. ₹1080 ಕೋಟಿಗೂ ಹೆಚ್ಚು ವೆಚ್ಚದ ಈ ಯೋಜನೆಯಡಿ ನದಿಯ 9 ಕಿ.ಮೀ ವ್ಯಾಪ್ತಿಯಲ್ಲಿ ಕಾಯಕಲ್ಪ ಮಾಡಲಾಗುವುದು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಶಿವಾಜಿ ಪ್ರತಿಮೆಯು ಯುವ ಪೀಳಿಗೆಯಲ್ಲಿ ದೇಶಭಕ್ತಿಯನ್ನು ಬೆಳೆಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಯುದ್ಧ ಯಾರಿಗೂ ಬೇಕಾಗಿಲ್ಲ ಎಂಬುದನ್ನು ವ್ಲಾದಿಮಿರ್​ ಪುಟಿನ್​ಗೆ ಅರ್ಥ ಮಾಡಿಸಿ; ಪ್ರಧಾನಿ ಮೋದಿಗೆ ಉಕ್ರೇನ್​ ವಿದೇಶಾಂಗ ಸಚಿವರ ಮನವಿ

Published On - 1:27 pm, Sun, 6 March 22

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ