AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೂ ಸುನಿತಾ ವಿಲಿಯಮ್ಸ್​ಗೂ ಇರುವ ನಂಟೇನು? ಇಲ್ಲಿದೆ ಮಾಹಿತಿ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ. ಇವರ ಆಗಮನ ಕೇವಲ ಅಮೆರಿಕಕ್ಕೆ ಮಾತ್ರವಲ್ಲ ಭಾರತಕ್ಕೂ ಸಂತಸ ತಂದಿದೆ. ಸುರಕ್ಷಿತ ಬರುವಿಕೆಗಾಗಿ ಎಲ್ಲರೂ ಪ್ರಾರ್ಥಿಸಿದ್ದರು. ಹಾಗಾದರೆ ಭಾರತಕ್ಕೂ ಸುನಿತಾಗ ಇರುವ ಸಂಬಂಧವೇನು ಎಂಬುದರ ಇಲ್ಲಿ ಮಾಹಿತಿ ನೀಡಲಾಗಿದೆ.

ಭಾರತಕ್ಕೂ ಸುನಿತಾ ವಿಲಿಯಮ್ಸ್​ಗೂ ಇರುವ ನಂಟೇನು? ಇಲ್ಲಿದೆ ಮಾಹಿತಿ
ಸುನಿತಾImage Credit source: India Today
Follow us
ನಯನಾ ರಾಜೀವ್
|

Updated on: Mar 19, 2025 | 12:35 PM

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ. ಇವರ ಆಗಮನ ಕೇವಲ ಅಮೆರಿಕಕ್ಕೆ ಮಾತ್ರವಲ್ಲ ಭಾರತಕ್ಕೂ ಸಂತಸ ತಂದಿದೆ. ಸುರಕ್ಷಿತ ಬರುವಿಕೆಗಾಗಿ ಎಲ್ಲರೂ ಪ್ರಾರ್ಥಿಸಿದ್ದರು. ಹಾಗಾದರೆ ಭಾರತಕ್ಕೂ ಸುನಿತಾಗ ಇರುವ ಸಂಬಂಧವೇನು ಎಂಬುದರ ಇಲ್ಲಿ ಮಾಹಿತಿ ನೀಡಲಾಗಿದೆ.

ಇದು ಸುನಿತಾ ಅವರ ಮೂರನೇ ಬಾಹ್ಯಾಕಾಶ ಪ್ರಯಾಣವಾಗಿದ್ದು, ಇದಕ್ಕೂ ಮೊದಲು ಅವರು 2006 ಮತ್ತು 2012 ರಲ್ಲಿ 322 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದಿದ್ದರು. ಸುನಿತಾ ವಿಲಿಯಮ್ಸ್​ ಸೆಪ್ಟೆಂಬರ್ 19, 1965 ರಂದು ಓಹಿಯೋದ ಯೂಕ್ಲಿಡ್‌ನಲ್ಲಿ ಜನಿಸಿದರು.

ಅವರ ತಂದೆ ಡಾ. ದೀಪಕ್ ಪಾಂಡ್ಯ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಜುಲಾಸನ್ ಗ್ರಾಮದ ನಿವಾಸಿ. ಅವರು 1957 ರಲ್ಲಿ ವೈದ್ಯಕೀಯ ಅಧ್ಯಯನಕ್ಕಾಗಿ ಅಮೆರಿಕಕ್ಕೆ ತೆರಳಿದರು ಮತ್ತು ಅಲ್ಲಿ ಉರ್ಸುಲಿನ್ ಬೋನಿ ಅವರನ್ನು ವಿವಾಹವಾದರು. ಕಲ್ಪನಾ ಚಾವ್ಲಾ ನಂತರ, ನಾಸಾ ಮೂಲಕ ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತ ಮೂಲದ ಮಹಿಳೆ ಸುನಿತಾ.

ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಪತ್ರವನ್ನು ಹಂಚಿಕೊಂಡಿದ್ದಾರೆ. ನೀವು ಮೈಲುಗಳಷ್ಟು ದೂರದಲ್ಲಿದ್ದರೂ, ನಮ್ಮ ಹೃದಯಗಳಿಗೆ ತುಂಬಾ ಹತ್ತಿರವಾಗಿದ್ದೀರಿ ಎಂದು ಅವರು ಬರೆದಿದ್ದಾರೆ.

ಮತ್ತಷ್ಟು ಓದಿ: ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್, ವಿಲ್ಮೋರ್: 9 ತಿಂಗಳ ತ್ರಿಶಂಕು ಸ್ಥಿತಿಗೆ ಕೊನೆಗೂ ಮುಕ್ತಿ

ಗಾಂಧಿನಗರದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಜುಲಾಸನ್ ಗ್ರಾಮದಲ್ಲಿ ಸುನಿತಾ ವಿಲಿಯಮ್ಸ್ ಅವರು ಆಳವಾದ ಸಂಪರ್ಕ ಹೊಂದಿದ್ದಾರೆ. ಸುಮಾರು 7,000 ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ವಿವಿಧ ಜಾತಿ ಮತ್ತು ಸಮುದಾಯಗಳ ಜನರು ವಾಸಿಸುತ್ತಿದ್ದಾರೆ. ಸುನಿತಾ ಈ ಗ್ರಾಮಕ್ಕೆ ಎರಡು ಬಾರಿ ಬಂದಿದ್ದರು, ಮೊದಲು 2007 ರಲ್ಲಿ ಮತ್ತು ನಂತರ 2013 ರಲ್ಲಿ, ಅವರ ಯಶಸ್ವಿ ಬಾಹ್ಯಾಕಾಶ ಯಾನದ ನಂತರ, ಸುನಿತಾ ಅವರ ಗ್ರಾಮಕ್ಕೆ ಭೇಟಿ ನೀಡಿದ್ದರು.

ವಿಲಿಯಮ್ಸ್ ಕುಟುಂಬವು ಜೂಲಾಸನ್‌ನಲ್ಲಿ ಆಸ್ತಿಗಳ ಹೊಂದಿದೆ. 1960 ರ ದಶಕದ ಉತ್ತರಾರ್ಧದಲ್ಲಿ ಸುನೀತಾ ಅವರ ಅಜ್ಜ-ಅಜ್ಜಿಯರ ನೆನಪಿಗಾಗಿ ಅಲ್ಲಿ ಒಂದು ಗ್ರಂಥಾಲಯವನ್ನು ಸ್ಥಾಪಿಸಲಾಯಿತು. ಅವರ ತಂದೆಯ ಪೂರ್ವಜರ ಮನೆ ಇನ್ನೂ ಇದೆ, ಆದರೆ ಈಗ ಅದು ಶಿಥಿಲಾವಸ್ಥೆಯಲ್ಲಿದೆ. 2007 ರಲ್ಲಿ, ಅವರು ಸ್ಥಳೀಯ ಶಾಲೆಯ ಅಭಿವೃದ್ಧಿಗಾಗಿ 2.5 ಲಕ್ಷ ರೂ.ಗಳನ್ನು ದೇಣಿಗೆ ನೀಡಿದ್ದರು, ಅಲ್ಲಿ ಅವರ ಹೆಸರು ದಾನಿಗಳಲ್ಲಿ ಪಟ್ಟಿಮಾಡಲಾಗಿದೆ.

ಜೂಲಾಸನ್ ಗ್ರಾಮಸ್ಥರು ಸುನಿತಾ ವಿಲಿಯಮ್ಸ್ ಅವರನ್ನು ಸ್ಫೂರ್ತಿ ಎಂದು ಪರಿಗಣಿಸುತ್ತಾರೆ. ಬಾಹ್ಯಾಕಾಶ ಯಾತ್ರೆಗೆ ಹೋದಾಗಲೆಲ್ಲಾ, ಅವಳ ಸುರಕ್ಷತೆ ಮತ್ತು ಯಶಸ್ಸಿಗಾಗಿ ಪ್ರಾರ್ಥಿಸುತ್ತಾರೆ. ಸುನಿತಾ ವಿಲಿಯಮ್ಸ್ ಶೀಘ್ರ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು