Axiom 4: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು

Updated on: Jun 25, 2025 | 12:04 PM

ಭಾರತದ ಬಾಹ್ಯಾಕಾಶ ಯಾನದಲ್ಲಿ ಒಂದು ದೊಡ್ಡ ಮತ್ತು ಐತಿಹಾಸಿಕ ಕ್ಷಣ ಕೊನೆಗೂ ಬಂದಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳದ್ದಾರೆ. ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್(Axiom-4 mission) ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದೆ.

ಭಾರತದ ಬಾಹ್ಯಾಕಾಶ ಯಾನದಲ್ಲಿ ಒಂದು ದೊಡ್ಡ ಮತ್ತು ಐತಿಹಾಸಿಕ ಕ್ಷಣ ಕೊನೆಗೂ ಬಂದಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದಾರೆ. ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್(Axiom-4 mission) ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದೆ.

ತಾಂತ್ರಿಕ ತೊಂದರೆಗಳ ಕಾರಣಕ್ಕೆ ಹಲವು ಬಾರಿ ಆಕ್ಸಿಯಮ್ 4 ಮಿಷನ್ ಉಡಾವಣೆ ಮುಂದೂಡಲಾಗಿತ್ತು. ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದೆ. ಬುಧವಾರ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಾಸಾ ಮತ್ತು ಸ್ಪೇಸ್ಎಕ್ಸ್ ಮೂಲಗಳು ಖಚಿತಪಡಿಸಿದ್ದವು.

ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್)ನತ್ತ ಪ್ರಯಾಣ ಬೆಳೆಸಲಿದೆ ಎಂದು ನಾಸಾ ಮತ್ತು ಸ್ಪೇಸ್ಎಕ್ಸ್ ಅಧಿಕೃತ ಎಕ್ಸ್ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿವೆ.

1984ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಇತಿಹಾಸ ನಿರ್ಮಿಸಿದ ನಾಲ್ಕು ದಶಕಗಳ ನಂತರ – ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹೋಗುತ್ತಿರುವ ಭಾರತದ ಎರಡನೇ ಗಗನಯಾತ್ರಿಯಾಗಲಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More