AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಗೋಳು ಕೇಳದ ಅಧಿಕಾರಿಗಳಿಗೆ ವಿಶಿಷ್ಟ ಪಾಠ: ನಾಸಿಕ್ ಪಾಲಿಕೆ ಅಧಿಕಾರಿ ಕಚೇರಿಯೊಳಗೆ ನಾಯಿಗಳ ಬಿಟ್ಟ ಯುವಸೇನಾ ಕಾರ್ಯಕರ್ತರು

ನಾಸಿಕ್‌ನಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣದಲ್ಲಿ ಪಾಲಿಕೆ ವಿಫಲವಾದ ಹಿನ್ನೆಲೆಯಲ್ಲಿ, ಯುವಸೇನಾ ಕಾರ್ಯಕರ್ತರು ನಾಸಿಕ್ ಪಂಚಾಯತ್ ಮುಖ್ಯ ಅಧಿಕಾರಿಯ ಕಚೇರಿಯಲ್ಲೇ ಎರಡು ಬೀದಿ ನಾಯಿಗಳನ್ನು ಬಿಟ್ಟು ಪ್ರತಿಭಟಿಸಿದ್ದಾರೆ. ನಾಗರಿಕರ ದೂರುಗಳಿಗೆ ಕ್ಯಾರೆ ಎನ್ನದ ಆಡಳಿತಕ್ಕೆ ಬುದ್ಧಿ ಕಲಿಸಲು ಈ ವಿಶಿಷ್ಟ ಮಾರ್ಗ ಕಂಡುಕೊಂಡಿದ್ದು, ಇದು ಪಾಲಿಕೆಯ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದ ವಿರುದ್ಧದ ಆಕ್ರೋಶವನ್ನು ವ್ಯಕ್ತಪಡಿಸುತ್ತದೆ. ಈ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಜನರ ಗೋಳು ಕೇಳದ ಅಧಿಕಾರಿಗಳಿಗೆ ವಿಶಿಷ್ಟ ಪಾಠ: ನಾಸಿಕ್ ಪಾಲಿಕೆ ಅಧಿಕಾರಿ ಕಚೇರಿಯೊಳಗೆ ನಾಯಿಗಳ ಬಿಟ್ಟ ಯುವಸೇನಾ ಕಾರ್ಯಕರ್ತರು
ನಾಯಿ
ನಯನಾ ರಾಜೀವ್
|

Updated on: Sep 17, 2026 | 1:39 PM

Share

ನಾಸಿಕ್,ಸೆಪ್ಟೆಂಬರ್ 17: ಬೀದಿ ನಾಯಿಗಳ ಹಾವಳಿ ತಡೆಗಟ್ಟುವಲ್ಲಿ ಪಾಲಿಕೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಡ್ ನಗರ ಪಂಚಾಯತ್ ಕಚೇರಿಯಲ್ಲಿ ಶಿವಸೇನೆಯ ಯುವ ಘಟಕವಾದ ‘ಯುವಸೇನಾ’ ಕಾರ್ಯಕರ್ತರು ಅತ್ಯಂತ ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಯುವಸೇನಾ ಜಿಲ್ಲಾ ಮುಖಂಡ ವಿಕ್ರಮ್ ರಾಂಧವೆ ನೇತೃತ್ವದಲ್ಲಿ ಕಚೇರಿಗೆ ನುಗ್ಗಿದ ಕಾರ್ಯಕರ್ತರು, ಪುರಸಭೆಯ ಮುಖ್ಯ ಅಧಿಕಾರಿ ಧೀರಜ್ ಭಮ್ರೆ ಅವರ ಅಧಿಕೃತ ಮೇಜಿನ ಮೇಲೆಯೇ ಎರಡು ಬೀದಿ ನಾಯಿಗಳನ್ನು ತಂದು ಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಣ್ಣ ಚೀಲಗಳಲ್ಲಿ ಎರಡು ಬೀದಿ ನಾಯಿಗಳನ್ನು ಹೊತ್ತು ತಂದ ಕಾರ್ಯಕರ್ತರು, ಅಧಿಕಾರಿಯ ಮೇಜಿನ ಮೇಲೆ ಬಿಟ್ಟರು. ಅಪರಿಚಿತ ವಾತಾವರಣ ಕಂಡು ಆ ನಾಯಿಮರಿಗಳು ಟೇಬಲ್ ಮೇಲೆಯೇ ಆತಂಕದಿಂದ ಓಡಾಡಿದವು. ಕೇವಲ ನಾಯಿಮರಿಗಳನ್ನು ಬಿಟ್ಟಿದ್ದಷ್ಟೇ ಅಲ್ಲದೆ, ಅಧಿಕಾರಿ ಭಮ್ರೆ ಅವರ ಮೇಜಿನ ಮೇಲೆ ನೋಟುಗಳಿಂದ ಮಾಡಿದ ಹಾರವನ್ನು ಹಾಕಿ ಆಡಳಿತದ ಭ್ರಷ್ಟಾಚಾರ ಹಾಗೂ ಬೇಜವಾಬ್ದಾರಿತನವನ್ನು ವ್ಯಂಗ್ಯವಾಡಿದರು.

ನಿಫಡ್ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಮಕ್ಕಳು, ಮಹಿಳೆಯರು ಹಾಗೂ ವಾಹನ ಸವಾರರು ಪ್ರತಿದಿನ ಕಡಿತಕ್ಕೊಳಗಾಗುತ್ತಿದ್ದಾರೆ. ಪ್ರಸ್ತುತ ಗಣೇಶೋತ್ಸವ ನಡೆಯುತ್ತಿದ್ದು, ಮಂಟಪಗಳಿಗೆ ತೆರಳುವ ಭಕ್ತರು ಹಾಗೂ ಸಾರ್ವಜನಿಕರು ನಾಯಿಗಳ ಭಯದಿಂದ ಓಡಾಡುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಮತ್ತಷ್ಟು ಓದಿ:

ನಾಯಿ-ನರಿ, ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ: ಜಿಲ್ಲಾಡಳಿತ, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಟೆಂಡರ್ ದಂಧೆ ಆರೋಪ: ಆಡಳಿತವು ಜನರ ಜೀವ ರಕ್ಷಿಸುವ ಸಂತಾನಹರಣ ಚಿಕಿತ್ಸೆ (ABC) ಮತ್ತು ನಾಯಿ ಹಿಡಿಯುವ ಕಾರ್ಯಕ್ಕೆ ಆದ್ಯತೆ ನೀಡದೆ ಕೇವಲ ಕಮಿಷನ್ ಬರುವ ಟೆಂಡರ್ ಪ್ರಕ್ರಿಯೆಗಳಲ್ಲೇ ಕಾಲಹರಣ ಮಾಡುತ್ತಿದೆ ಎಂದು ರಾಂಧವೆ ಆರೋಪಿಸಿದ್ದು, ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರ ಸಮ್ಮುಖದಲ್ಲೇ ಇಡೀ ಕಚೇರಿಗೆ ಬೀದಿ ನಾಯಿಗಳನ್ನು ನುಗ್ಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಾಣಿ ಕಲ್ಯಾಣ ಮಂಡಳಿಯ ಅನಿಮಲ್ ಬರ್ತ್ ಕಂಟ್ರೋಲ್ (ABC) ನಿಯಮಗಳ ಪ್ರಕಾರ ಬೀದಿ ನಾಯಿಗಳನ್ನು ಕೊಲ್ಲುವಂತಿಲ್ಲ, ಬದಲಾಗಿ ಅವುಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ರೇಬೀಸ್ ಲಸಿಕೆ ಹಾಕಿ ಮತ್ತೆ ಅದೇ ಜಾಗಕ್ಕೆ ಬಿಡಬೇಕಾಗುತ್ತದೆ. ಆದರೆ ಹೆಚ್ಚಿನ ಸ್ಥಳೀಯ ಸಂಸ್ಥೆಗಳು ಅನುದಾನ ಮತ್ತು ಮೂಲಸೌಕರ್ಯದ ಕೊರತೆಯಿಂದ ಈ ನಿಯಮಗಳನ್ನು ಸರಿಯಾಗಿ ಪಾಲಿಸದೆ ಇರುವುದು ಇಂತಹ ಘರ್ಷಣೆಗಳಿಗೆ ಮುಖ್ಯ ಕಾರಣವಾಗಿದೆ.

ವಿಡಿಯೋ

ಹೆಚ್ಚುತ್ತಿರುವ ರೇಬೀಸ್ ಭೀತಿ: ಭಾರತದಲ್ಲಿ ಪ್ರತಿವರ್ಷ ಲಕ್ಷಾಂತರ ನಾಯಿ ಕಡಿತ ಪ್ರಕರಣಗಳು ದಾಖಲಾಗುತ್ತಿದ್ದು, ರೇಬೀಸ್ ಸಾವಿನ ಪ್ರಮಾಣದಲ್ಲೂ ಭಾರತ ಮುಂಚೂಣಿಯಲ್ಲಿದೆ. ಇಂತಹ ಸಮಯದಲ್ಲಿ ನಾಸಿಕ್‌ನ ಈ ಹೈಡ್ರಾಮಾ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’