ಆಪರೇಷನ್ ಸಿಂಧೂರದ ಬಗ್ಗೆ ಮತ್ತೊಮ್ಮೆ ಜೈಶಂಕರ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ಪಾಕಿಸ್ತಾನದಲ್ಲಿ ಅದೇ ಹೆಡ್​ಲೈನ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಮತ್ತೊಮ್ಮೆ ಗುರಿಯಾಗಿಸಿಕೊಂಡಿದ್ದಾರೆ. ಆಪರೇಷನ್ ಸಿಂಧೂರ್ ಬಗ್ಗೆ ಕೇಂದ್ರ ಸರ್ಕಾರ ಆರಂಭದಲ್ಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದರ ಬಗ್ಗೆ ರಾಹುಲ್ ಗಾಂಧಿ ಮತ್ತೊಮ್ಮೆ ಜೈಶಂಕರ್ ಅವರನ್ನು ಪ್ರಶ್ನಿಸಿದ್ದಾರೆ. ದೇಶಕ್ಕೆ ಸತ್ಯ ಗೊತ್ತಾಗಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ವಿನಾಕಾರಣ ರಾಹುಲ್ ಗಾಂಧಿ ಸಚಿವ ಜೈಶಂಕರ್ ಅವರ ಹೇಳಿಕೆಗಳನ್ನು ಪದೇ ಪದೇ ತಪ್ಪಾಗಿ ಬಿಂಬಿಸುತ್ತಿದ್ದಾರೆ. ರಾಹುಲ್ ಗಾಂಧಿ ಕೆಲವು ಶಕ್ತಿಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವಂತೆ ತೋರುತ್ತಿದೆ ಎಂದಿದ್ದಾರೆ.

ಆಪರೇಷನ್ ಸಿಂಧೂರದ ಬಗ್ಗೆ ಮತ್ತೊಮ್ಮೆ ಜೈಶಂಕರ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ಪಾಕಿಸ್ತಾನದಲ್ಲಿ ಅದೇ ಹೆಡ್​ಲೈನ್!
Rahul Gandhi

Updated on: May 19, 2025 | 5:31 PM

ನವದೆಹಲಿ, ಮೇ 19: ಆಪರೇಷನ್ ಸಿಂಧೂರವನ್ನು ಆರಂಭಿಸಿದಾಗಲೇ ಪಾಕಿಸ್ತಾನಕ್ಕೆ ಆ ಬಗ್ಗೆ ಮಾಹಿತಿ ನೀಡಿದ್ದೆವು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಹೇಳಿಕೆ ನೀಡಿದ್ದಕ್ಕೆ ಈ ಹಿಂದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಆಕ್ಷೇಪ ವ್ಯಕ್ತಪಡಿಸಿದ್ದರು. ಆರಂಭದಲ್ಲೇ ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ದೊಡ್ಡ ಅಪರಾಧ ಎಂದಿದ್ದರು. ಹಾಗೇ, ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆಯ ಎಷ್ಟು ಯುದ್ಧವಿಮಾನಗಳು ನಾಶವಾಗಿವೆ ಎಂದು ಪ್ರಶ್ನೆ ಮಾಡಿದ್ದರು. ಆದರೆ, ಸಚಿವ ಜೈಶಂಕರ್ ಅದಕ್ಕೆ ಉತ್ತರಿಸಿರಲಿಲ್ಲ. ಹೀಗಾಗಿ, ಅದೇ ಪ್ರಶ್ನೆಯನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಜೈಶಂಕರ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈ ಹೇಳಿಕೆಯನ್ನೇ ಇಟ್ಟುಕೊಂಡು ಪಾಕಿಸ್ತಾನದ ಮಾಧ್ಯಮದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಇದಕ್ಕೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಟೀಕಾಪ್ರಹಾರ ನಡೆಸಿದ್ದು, ಭಾರತದ ವಿರುದ್ಧ ಪಾಕಿಸ್ತಾನದಲ್ಲಿ ನ್ಯೂಸ್ ಮಾಡಲು ರಾಹುಲ್ ಗಾಂಧಿಯೇ ವಿಷಯಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಮತ್ತೊಮ್ಮೆ ಗುರಿಯಾಗಿಸಿಕೊಂಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ವಿನಾಕಾರಣ ರಾಹುಲ್ ಗಾಂಧಿ ಸಚಿವ ಜೈಶಂಕರ್ ಅವರ ಹೇಳಿಕೆಗಳನ್ನು ಪದೇ ಪದೇ ತಪ್ಪಾಗಿ ಬಿಂಬಿಸುತ್ತಿದ್ದಾರೆ. ರಾಹುಲ್ ಗಾಂಧಿ ಕೆಲವು ಶಕ್ತಿಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವಂತೆ ತೋರುತ್ತಿದೆ ಎಂದಿದ್ದಾರೆ. ಪಾಕಿಸ್ತಾನದ ಮೇಲಿನ ದಾಳಿಯಲ್ಲಿ ಭಾರತದ ಎಷ್ಟು ಯುದ್ಧ ವಿಮಾನಗಳಿಗೆ ಹಾನಿಯಾಗಿದೆ? ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದರು. ಆದರೆ, ಸಚಿವ ಜೈಶಂಕರ್ ಅದಕ್ಕೆ ಉತ್ತರಿಸಲು ನಿರಾಕರಿಸಿದ್ದು, ಎಲ್ಲ ಫೈಟರ್ ಜೆಟ್​ಗಳೂ ಸುರಕ್ಷಿತವಾಗಿ ಭಾರತದೊಳಗೆ ಬಂದಿದ್ದಾರೆ ಎಂದಿದ್ದರು. ಈ ಬಗ್ಗೆ ಮಾಹಿತಿ ನೀಡಿದರೆ ಅದನ್ನು ಪಾಕಿಸ್ತಾನ ದುರುಪಯೋಗಪಡಿಸಿಕೊಳ್ಳಬಹುದು ಎಂದು ಹೇಳಿತ್ತು.

ಇದನ್ನೂ ಓದಿ
ಪಂಜಾಬ್​ನಲ್ಲಿ ಇಬ್ಬರು ಪಾಕಿಸ್ತಾನಿ ಗೂಢಚಾರಿಗಳ ಬಂಧನ
ಜಗತ್ತಿನ ಮುಂದೆ ಪಾಕ್ ಮುಖವಾಡ ಕಳಚಲು ನಮ್ಮ ಸಂಸದರನ್ನು ಕಳಿಸೋದಿಲ್ಲ
ಆಪರೇಷನ್​ ಸಿಂಧೂರ್​ನ ಮತ್ತೊಂದು ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ
ಯೂಟ್ಯೂಬರ್ ಜ್ಯೋತಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಇದನ್ನೂ ಓದಿ: ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರದ ವಿಷಯ ತಿಳಿಸಿದ್ದು ಅಪರಾಧ; ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ತರಾಟೆ

ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರ ಮೇಲಿನ ತಮ್ಮ ದಾಳಿಯನ್ನು ದ್ವಿಗುಣಗೊಳಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಆಪರೇಷನ್ ಸಿಂಧೂರ್‌ನ ಪ್ರಾರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು. ಇದು ದೊಡ್ಡ ಅಪರಾಧ ಎಂದು ಹೇಳಿದ್ದಾರೆ ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಇಂದು ಪುನರುಚ್ಚರಿಸಿದ್ದಾರೆ. ಇದಕ್ಕೆ ಸರ್ಕಾರದಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದನ್ನು “ಸತ್ಯಗಳ ಸಂಪೂರ್ಣ ತಪ್ಪು ನಿರೂಪಣೆ” ಎಂದು ಕರೆದಿದೆ. ಸಚಿವರ ಹೇಳಿಕೆಗಳನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಪ್ಪಾಗಿ ನಿರೂಪಿಸಿರುವುದು ದುರುದ್ದೇಶಪೂರಿತ ಉದ್ದೇಶ ಎಂದು ಬಿಜೆಪಿ ಹೇಳಿದೆ.


ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಮೇಲಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಈ ಹಿಂದಿನ ದಾಳಿಯನ್ನು ವಿದೇಶಾಂಗ ವ್ಯವಹಾರ ಸಚಿವಾಲಯ ಮತ್ತು ಪತ್ರಿಕಾ ಮಾಹಿತಿ ಬ್ಯೂರೋ ತಳ್ಳಿಹಾಕಿದೆ. ಏಕೆಂದರೆ, ಅವರು ಸತ್ಯಗಳನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಹೇಳಿದೆ. ಮೇ 7ರ ಆರಂಭದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಯಲ್ಲಿ 9 ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಪಡಿಸಿತು.

ಇದನ್ನೂ ಓದಿ: ಯಾವಾಗ ಮಾಡ್ತೀರ ಹೇಳಿ; ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರಕ್ಕೆ ರಾಹುಲ್ ಗಾಂಧಿ ಸ್ವಾಗತ

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಆಕ್ಷೇಪಿಸಿದ್ದಾರೆ. “ಇದು ರಾಜತಾಂತ್ರಿಕತೆಯಲ್ಲ, ಇದು ಬೇಹುಗಾರಿಕೆ. ವಿದೇಶಾಂಗ ಸಚಿವರು ಹೇಳಿದ್ದನ್ನು ಎಲ್ಲರೂ ಕೇಳಿದ್ದಾರೆ. ಅದನ್ನು ಮುಚ್ಚಿಡುವ ಕೆಲಸ ನಡೆಯುತ್ತಿದೆ. ಈ ಮೂಲಕ ಭಾರತದ ವಿಷಯಗಳನ್ನು ಪಾಕಿಸ್ತಾನಕ್ಕೆ ತಲುಪಿಸುವ ಕೆಲಸ ನಡೆಯುತ್ತಿದೆ. ಈ ಮಾಹಿತಿಯು ಭಯೋತ್ಪಾದಕ ಮಸೂದ್ ಅಜರ್ ಮತ್ತು ಹಫೀಜ್ ಸಯೀದ್ ಭಯೋತ್ಪಾದಕ ನೆಲೆಗಳ ಮೇಲೆ ಭಾರತದ ವಾಯುದಾಳಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದೆಯೇ? ಎಂದು ಖೇರಾ ಕೇಳಿದ್ದಾರೆ.


ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ಲಾ ಪಾಕಿಸ್ತಾನದ ನ್ಯೂಸ್‌ನ ಸುದ್ದಿ ಬುಲೆಟಿನ್‌ನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ರಾಹುಲ್ ಗಾಂಧಿಯವರ ವಿಲಕ್ಷಣ ಸುಳ್ಳುಗಳು ಪಾಕಿಸ್ತಾನಿ ಮಾಧ್ಯಮಗಳಿಗೆ ಒಳ್ಳೆಯ ಆಹಾರ ನೀಡುತ್ತಿವೆ. ಪಾಕಿಸ್ತಾನ ಮತ್ತು ರಾಹುಲ್ ಗಾಂಧಿ ಇಬ್ಬರೂ ಒಂದೇ ಭಾಷೆಯನ್ನು ಮಾತನಾಡುತ್ತಿರುವುದು ಕೇವಲ ಕಾಕತಾಳೀಯವೇ?” ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:30 pm, Mon, 19 May 25