Mamata Banerjee: ರಾಷ್ಟ್ರಗೀತೆಗೆ ಅಗೌರವ ಪ್ರಕರಣ: ಹೈಕೋರ್ಟ್ನಲ್ಲಿ ಮಮತಾಗಿಲ್ಲ ರಿಲೀಫ್
ರಾಷ್ಟ್ರಗೀತೆಗೆ ಅಗೌರವ ತೋರಿದ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಇರುವ ದೂರನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.
ರಾಷ್ಟ್ರಗೀತೆಗೆ ಅಗೌರವ ತೋರಿದ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಇರುವ ದೂರನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದಲ್ಲಿ ಮುಂಬೈನ ವಿಶೇಷ ನ್ಯಾಯಾಲಯವು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕೆಳ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ರದ್ದುಗೊಳಿಸಿತು ಮತ್ತು ಮರು ವಿಚಾರಣೆಗೆ ಆದೇಶಿಸಿತು. ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುತ್ತಿರುವಾಗ ಮಮತಾ ಬ್ಯಾನರ್ಜಿ ಸಭೆಯಿಂದ ಎದ್ದು ಹೋಗಿದ್ದರು ಅದರ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗಿತ್ತು.
ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ದೂರನ್ನು ರದ್ದುಗೊಳಿಸಬೇಕು ಎಂದು ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಧ್ಯೆ ಪ್ರವೇಶಿಸಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ. 2021ರ ಡಿಸೆಂಬರ್ನಲ್ಲಿ ಮಮತಾ ಬ್ಯಾನರ್ಜಿ ಮುಂಬೈಗೆ ಭೇಟಿ ನೀಡಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಆ ಸಮಾರಂಭದಲ್ಲಿ ರಾಷ್ಟ್ರಗೀತೆ ಹಾಡುವಾಗ ಅವರು ಎದ್ದುನಿಂತು ಗೌರವ ತೋರಿಸಲಿಲ್ಲ. ಈ ಮೂಲಕ ರಾಷ್ಟ್ರಗೀತೆಗೆ ಅವಮಾನಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟು ಈ ಸಮನ್ಸ್ ಜಾರಿ ಮಾಡಿರುವ ನ್ಯಾಯಾಲಯ (Mumbai Court), ಮಮತಾ ಬ್ಯಾನರ್ಜಿಯವರು ಒಬ್ಬರು ಮುಖ್ಯಮಂತ್ರಿ. ಅನುಮೋದನೆಯ ಅಗತ್ಯವಿಲ್ಲ ಮತ್ತು ಆರೋಪಿ ವಿರುದ್ಧ ಮುಂದಿನ ಪ್ರಕ್ರಿಯೆ ನಡೆಸಲು ಯಾವುದೇ ಅಡ್ಡಿಯೂ ಇಲ್ಲ ಎಂದು ಹೇಳಿತ್ತು.
ಮತ್ತಷ್ಟು ಓದಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮುಂಬೈ ಕೋರ್ಟ್ನಿಂದ ಸಮನ್ಸ್; ಮಾ.2ರಂದು ವಿಚಾರಣೆಗೆ ಹಾಜರಾಗಲು ಸೂಚನೆ
ಅಂದು ರಾಷ್ಟ್ರಗೀತೆ ಹಾಡುವಾಗ ಅವರು ಥಟ್ಟನೆ ನಿಲ್ಲಿಸಿ, ವೇದಿಕೆಯಿಂದ ನಿರ್ಗಮಿಸಿದ್ದು ಯೂಟ್ಯೂಬ್, ಡಿವಿಡಿಯಲ್ಲಿರುವ ವಿಡಿಯೋ ಕ್ಲಿಪ್ನಿಂದ ಸ್ಪಷ್ಟವಾಗಿದೆ. ಈ ವಿಡಿಯೋಗಳನ್ನು ದೂರುದಾರರು ನಮಗೆ ನೀಡಿದ್ದಾರೆ. ರಾಷ್ಟ್ರಗೀತೆಗೆ ಅವಮಾನ ಮಾಡುವುದು ರಾಷ್ಟ್ರೀಯ ಗೌರವ ಕಾಯ್ದೆ, 1971ರ ಸೆಕ್ಷನ್ 3ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ. ಅದನ್ನು ಮಮತಾ ಬ್ಯಾನರ್ಜಿ ಮಾಡಿರುವುದು ವಿಡಿಯೋದಲ್ಲಿ ಕಾಣುತ್ತದೆ ಎಂದು ಕೋರ್ಟ್ ಹೇಳಿದೆ. ಇನ್ನು ಯಾವುದೇ ಸಂದರ್ಭದಲ್ಲಿ ಯಾರಾದರೂ ರಾಷ್ಟ್ರಗೀತೆ ಹಾಡುತ್ತಿರಲಿ ಅಥವಾ ಇನ್ಯಾವುದೇ ಮೂಲದಿಂದ ಅದು ಪ್ರಸಾರವಾಗುತ್ತಿರಲಿ, ಆ ಸಮಯದಲ್ಲಿ ಅದನ್ನು ಕೇಳುತ್ತಿರುವವರು ಎದ್ದುನಿಲ್ಲಬೇಕು ಎಂದು 2015ರಲ್ಲಿ ಗೃಹ ಇಲಾಖೆ ಆದೇಶ ಹೊರಡಿಸಿತ್ತು. ಅದನ್ನು ಮಮತಾ ಬ್ಯಾನರ್ಜಿ ಉಲ್ಲಂಘಿಸಿದ್ದಾರೆ ಎಂದು ವಿವೇಕಾನಂದ ಗುಪ್ತಾ ಆರೋಪಿಸಿದ್ದರು.
ಬ್ಯಾನರ್ಜಿ ಅವರು ತಮ್ಮ ಅರ್ಜಿಯಲ್ಲಿ, ಸೆಷನ್ಸ್ ನ್ಯಾಯಾಲಯವು ಸಮನ್ಸ್ ಅನ್ನು ರದ್ದುಗೊಳಿಸುವ ಮತ್ತು ಪ್ರಕರಣವನ್ನು ರವಾನಿಸುವ ಬದಲು ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ದೂರನ್ನು ರದ್ದುಗೊಳಿಸಬೇಕು ಎಂದು ಕೇಳಿದ್ದರು. ನ್ಯಾಯಮೂರ್ತಿ ಬೋರ್ಕರ್, ಸೆಷನ್ಸ್ ನ್ಯಾಯಾಲಯದ ಆದೇಶದಲ್ಲಿ ಕಾನೂನಿಗೆ ವಿರುದ್ಧವಾದ ಕ್ರಮವಿದೆ. ಆದ್ದರಿಂದ, ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಮುಂಬೈನ ಕಫ್ ಪರೇಡ್‌ನಲ್ಲಿರುವ ಯಶವಂತರಾವ್ ಚವಾಣ್ ಸಭಾಂಗಣದಲ್ಲಿನ ಸಾರ್ವಜನಿಕ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿ ಅವರು ಕುಳಿತೇ ರಾಷ್ಟ್ರಗೀತೆ ಹಾಡಲು ಪ್ರಾರಂಭಿಸಿದರು ಮತ್ತು ನಂತರ ಎದ್ದು ನಿಂತರು. ಅಲ್ಲದೆ, ಎರಡು ಸಾಲುಗಳನ್ನು ಹಾಡಿ, ಮಧ್ಯೆಯೇ ಅಲ್ಲಿಂದ ನಿರ್ಗಮಿಸಿದರು ಎಂದು ಆರೋಪಿಸಿ ವಿವೇಕಾನಂದ ಗುಪ್ತಾ ಎಂಬುವವರು ಸಲ್ಲಿಸಿದ್ದ ದೂರಿನ ಮೇರೆಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 2022ರ ಮಾರ್ಚ್ನಲ್ಲಿ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿತು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ವಿಶೇಷ ನ್ಯಾಯಾಲಯದ ಮುಂದೆ ಸಮನ್ಸ್ ಅನ್ನು ಪ್ರಶ್ನಿಸಿದ್ದರು.
ಜನವರಿಯಲ್ಲಿ, ವಿಶೇಷ ನ್ಯಾಯಾಧೀಶ ಆರ್.ಎನ್. ರೋಕಡೆ ಅವರು, ಕಾರ್ಯವಿಧಾನದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದರು ಮತ್ತು ದೂರನ್ನು ಹೊಸದಾಗಿ ಪರಿಗಣಿಸಲು ಮ್ಯಾಜಿಸ್ಟ್ರೇಟ್‌ಗೆ ತಿಳಿಸಿದರು.
ನಂತರ ಹೈಕೋರ್ಟ್ ಮೊರೆ ಹೋದ ಬ್ಯಾನರ್ಜಿ, ಈ ಆದೇಶವನ್ನು ಪ್ರಶ್ನಿಸಿ ಸಮನ್ಸ್ ಅನ್ನು ಹೊಸದಾಗಿ ಪರಿಗಣಿಸಲು ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶಿಸುವ ಬದಲು ಸಂಪೂರ್ಣ ಅದನ್ನು ರದ್ದುಗೊಳಿಸಬೇಕು ಎಂದು ಪ್ರತಿಪಾದಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ