Vani Jayaram death: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ಗಾಯಕಿ ವಾಣಿ ಜಯರಾಮ್ ನಿಧನ

Vani Jayaram: ಹಿರಿಯ ಖ್ಯಾತ ಗಾಯಕಿ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ವಾಣಿ ಜಯರಾಮ್  ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ 78 ವಯಸ್ಸಿನ ವಾಣಿ ಜಯರಾಮ್ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

Vani Jayaram death: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ಗಾಯಕಿ ವಾಣಿ ಜಯರಾಮ್ ನಿಧನ
Vani Jairam
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 04, 2023 | 4:03 PM

ಹಿರಿಯ ಖ್ಯಾತ ಗಾಯಕಿ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ವಾಣಿ ಜಯರಾಮ್  ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ 78 ವಯಸ್ಸಿನ ವಾಣಿ ಜಯರಾಮ್ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ ಭಾರತ ಸರ್ಕಾರವು 2023ರ ಗಣರಾಜ್ಯೋತ್ಸವದ ಮೊದಲು ಪದ್ಮಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಿತು. ಇದೀಗ ಅವರ ಹಠಾತ್ ನಿಧನ ಸುದ್ದಿ ದೇಶಾದ್ಯಂತ ಎಲ್ಲರಿಗೂ ಆಶ್ಚರ್ಯ ಮತ್ತು ಅಘಾತವನ್ನು ಉಂಟು ಮಾಡಿದೆ. ತಮ್ಮ ಸಂಗೀತ ಲೋಕದಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಸಾವಿನ ಬಗ್ಗೆ ಹಾಗೂ ಅಂತಿಮ ಸಂಸ್ಕಾರದ ಕುರಿತು ಯಾವುದೇ ಹೆಚ್ಚಿನ ಮಾಹಿತಿ ಬಂದಿಲ್ಲ.

ವಾಣಿ ಜಯರಾಮ್ ಅವರು ಚೆನ್ನೈನ ನುಂಗಂಬಾಕ್ಕಂನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು. ಅವರ ಸಾವಿಗೆ ಕಾರಣ ಇನ್ನೂ ತಿಳಿದಿಲ್ಲ. ಅವರ ಪತಿ ಜಯರಾಮ್ 2018ರಲ್ಲಿ ಸಾವನ್ನಪ್ಪಿದರು. ಕಲಿವಾಣಿಯಾಗಿ ಜನಿಸಿದ ವಾಣಿ ಜಯರಾಮ್ ಅವರ ಕುಟುಂಬವು ಕೂಡ ಸಂಗೀತ ಲೋಕಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ. ಇವರ ತಂದೆ ದುರೈಸಾಮಿ ಅಯ್ಯಂಗಾರ್ ತಾಯಿ ಪದ್ಮಾವತಿ. ಅವರು 1971 ರಲ್ಲಿ ಹಿನ್ನೆಲೆ ಗಾಯಕಿಯಾಗಿ ಐದು ದಶಕಗಳ ಕಾಲ ಹಾಡಿದರು. 19 ಭಾಷೆಗಳಲ್ಲಿ ಹಾಡಿದ್ದಾರೆ ಮತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು,  ರಾಜ್ಯ ಸರ್ಕಾರದ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ನಂತರ ವಾಣಿ ಜಯರಾಮ್ ಸಂಗೀತ ಪಯಣಕ್ಕೆ ದೊಡ್ಡ ಬ್ರೇಕ್ ನೀಡಿದ್ದರು, ಅವರು ಎಂಎಸ್ ವಿಶ್ವನಾಥನ್, ಕೆವಿ ಮಹದೇವನ್, ಚಕ್ರವರ್ತಿ, ಇಳಯರಾಜ, ಮತ್ತು ಸತ್ಯಂ ಸೇರಿದಂತೆ ಅನೇಕ ಪ್ರಸಿದ್ಧ ಸಂಯೋಜಕರೊಂದಿಗೆ ಕೆಲಸ ಮಾಡಿದ್ದಾರೆ.

Published On - 3:02 pm, Sat, 4 February 23

ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ