ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: 51 ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್, 32 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 90 ಸದಸ್ಯರನ್ನು ಆಯ್ಕೆ ಮಾಡಲು 3 ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಚುನಾವಣೆ ನಡೆಯಲಿದೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: 51 ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್, 32 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ
ಕಾಂಗ್ರೆಸ್ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸುದ್ದಿಗೋಷ್ಠಿ
Follow us
ಸುಷ್ಮಾ ಚಕ್ರೆ
|

Updated on: Aug 26, 2024 | 9:42 PM

ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಒಪ್ಪಂದವನ್ನು ಅಂತಿಮಗೊಳಿಸಿದೆ. ಈ ಒಪ್ಪಂದದ ಪ್ರಕಾರ 90 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 32 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ನ್ಯಾಷನಲ್ ಕಾನ್ಫರೆನ್ಸ್ 51 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಭಯ ಪಕ್ಷಗಳು 5 ಸ್ಥಾನಗಳಲ್ಲಿ ಸೌಹಾರ್ದ ಸ್ಪರ್ಧೆಗೆ ಒಪ್ಪಿಕೊಂಡಿವೆ. ಅಲ್ಲಿ ಅವರು ಪರಸ್ಪರ ವಿರೋಧಿಸುವುದಿಲ್ಲ. ಹಾಗೇ, ಹರ್ಷ್ ದೇವ್ ಸಿಂಗ್ ನೇತೃತ್ವದ ಪ್ಯಾಂಥರ್ಸ್ ಪಾರ್ಟಿ ಮತ್ತು ಸಿಪಿಐ (ಎಂ) ತಮ್ಮ ಅಭ್ಯರ್ಥಿಗಳನ್ನು ತಲಾ ಒಂದೊಂದು ಸ್ಥಾನದಲ್ಲಿ ನಿಲ್ಲಿಸಲಿವೆ.

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಹಿರಿಯ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಮತ್ತು ಜಮ್ಮು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ವಿವರ ನೀಡಿದರು.

ಇದನ್ನೂ ಓದಿ: Assembly Elections: ಜಮ್ಮು ಕಾಶ್ಮೀರದಲ್ಲಿ ಸೆ. 18, ಹರಿಯಾಣದಲ್ಲಿ ಅಕ್ಟೋಬರ್ 1ಕ್ಕೆ​ ವಿಧಾನಸಭಾ ಚುನಾವಣೆ

ಇಂದು ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮಾತುಕತೆಗಳನ್ನು ಪೂರ್ಣಗೊಳಿಸಿದ ಮತ್ತು ಉತ್ತಮ ಸೌಹಾರ್ದಯುತ ವಾತಾವರಣದಲ್ಲಿ ಸಮನ್ವಯ ಸಾಧಿಸಿರುವುದರಿಂದ ಒಟ್ಟಾಗಿ ಚುನಾವಣೆ ಎದುರಿಸಲಿವೆ. “ನಾವು ಈ ಅಭಿಯಾನವನ್ನು ಪ್ರಾರಂಭಿಸಿದ್ದು ಬಹಳ ಸಂತೋಷದ ವಿಷಯವಾಗಿದೆ. ಇಲ್ಲಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ನಮ್ಮ ಪಕ್ಷಗಳು ಒಟ್ಟಾಗಿ ಹೋರಾಡುತ್ತೇವೆ. ದೇಶವನ್ನು ಕೋಮುವಾದಗೊಳಿಸಿ, ವಿಭಜಿಸಿ ಮತ್ತು ಒಡೆಯಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ” ಎಂದು ಹೇಳಿದರು.

ಬಿಜೆಪಿಯು ಜಮ್ಮು ಮತ್ತು ಕಾಶ್ಮೀರದ ಆತ್ಮವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಮುಖ್ಯ ಉದ್ದೇಶ ಕೇಂದ್ರಾಡಳಿತ ಪ್ರದೇಶದ ಆತ್ಮವನ್ನು ಉಳಿಸುವುದಾಗಿದೆ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಒಟ್ಟಾಗಿ ಸ್ಪರ್ಧಿಸುತ್ತಿವೆ. ಒಗ್ಗಟ್ಟಾಗಿ ಹೋರಾಡಿ ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: Jammu-Kashmir Elections: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ; ಬಿಜೆಪಿಯಿಂದ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ

5 ಸ್ಥಾನಗಳಲ್ಲಿ ಎನ್‌ಸಿ-ಕಾಂಗ್ರೆಸ್ ಸೌಹಾರ್ದ ಸ್ಪರ್ಧೆಯನ್ನು ಹೊಂದಿರುತ್ತದೆ. ಅವುಗಳೆಂದರೆ, ದೋಡಾ, ನಗ್ರೋಟಾ, ಬನಿಹಾಲ್, ಸೋಪೋರ್, ಭದೇರ್ವಾ.

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ:

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಈಗಾಗಲೇ ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 90 ಸದಸ್ಯರನ್ನು ಆಯ್ಕೆ ಮಾಡಲು 3 ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಚುನಾವಣೆಗಳು ನಡೆಯಲಿವೆ. ಅಕ್ಟೋಬರ್ 4ರಂದು ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ಇದು ಮೊದಲ ಚುನಾವಣೆಯಾಗಿದೆ. 2019ರಲ್ಲಿ ಇದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ