National Herald Case: ರಾಹುಲ್, ಸೋನಿಯಾ ಗಾಂಧಿಯ ಆತ್ಮವಿಶ್ವಾಸ ಕುಗ್ಗಿಸಲು ಇಡಿ ದಾಳಿ; ಮಲ್ಲಿಕಾರ್ಜುನ ಖರ್ಗೆ ಆರೋಪ
ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಆತ್ಮಸ್ಥೈರ್ಯ ಕುಗ್ಗಿಸಲು ಇಡಿ ದಾಳಿ ನಡೆಸಲಾಗಿದೆ. ರಾಹುಲ್ ಗಾಂಧಿಯ ಬಾಯಿ ಮುಚ್ಚಿಸಲು ಇಡಿ ದಾಳಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ನವದೆಹಲಿ: ಸ್ವಾತಂತ್ರ್ಯ ಬಂದ ನಂತರ ನ್ಯಾಷನಲ್ ಹೆರಾಲ್ಡ್ (National Herald Paper) ಪತ್ರಿಕೆ ಆರಂಭವಾಯಿತು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಇಂಗ್ಲಿಷ್, ಹಿಂದಿ, ಉರ್ದು ಭಾಷೆಗಳಲ್ಲಿ ಪತ್ರಿಕೆ ಆರಂಭಿಸಿದ್ದರು. 2008ರ ಬಳಿಕ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಪತ್ರಿಕೆಯನ್ನು ಮುಚ್ಚಲಾಯಿತು. 9 ವರ್ಷಗಳ ಬಳಿಕ ಇಡಿ ಈ ಬಗ್ಗೆ ದೂರು ದಾಖಲಿಸಿಕೊಂಡಿದೆ. ರಾಹುಲ್ ಗಾಂಧಿ (Rahul Gandhi), ಸೋನಿಯಾ ಗಾಂಧಿ (Sonia Gandhi) ಅವರ ಆತ್ಮಸ್ಥೈರ್ಯ ಕುಗ್ಗಿಸಲು ಇಡಿ ದಾಳಿ ನಡೆಸಲಾಗಿದೆ. ರಾಹುಲ್ ಗಾಂಧಿಯ ಬಾಯಿ ಮುಚ್ಚಿಸಲು ಇಡಿ ದಾಳಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ನೌಕರರ ಬಾಕಿ ಪಾವತಿಸಲು 90 ಕೋಟಿ ರೂ. ಸಾಲ ಮಾಡಲಾಗಿತ್ತು. ಜಾತ್ಯತೀತ ತತ್ವದ ಪ್ರಚಾರಕ್ಕಾಗಿ ಈ ಪತ್ರಿಕೆಯನ್ನು ರೂಪಿಸಲಾಗಿತ್ತು. ಅದೇ ಕಾರಣಕ್ಕೆ ಯಂಗ್ ಇಂಡಿಯಾ ಸಂಸ್ಥೆಗೆ ನೀಡಲಾಗಿದೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ. ಯಂಗ್ ಇಂಡಿಯಾ ಸಂಸ್ಥೆಯ ಬೈಲಾ ಪ್ರಕಾರ ಹಣ ತೆಗೆಯಲು ಸಾಧ್ಯವಿಲ್ಲ. ಸದಸ್ಯರು ಟಿಎ-ಡಿಎ ಕೂಡ ವಿತ್ಡ್ರಾ ಮಾಡಲು ಸಾಧ್ಯವಿಲ್ಲ. ಆದರೂ ಕೇಂದ್ರ ಸರ್ಕಾರ ದುರುದ್ದೇಶದಿಂದ ದೂರು ದಾಖಲಿಸಿಕೊಂಡಿದೆ ಎಂದು ಖರ್ಗೆ ಟೀಕಿಸಿದ್ದಾರೆ.
ಇದನ್ನೂ ಓದಿ: National Herald Case: ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ? ಈ ಕೇಸಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪಾತ್ರವೇನು?
ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಮುಂದಾಗಿದ್ದೆವು. ಆದರೆ, ಎಐಸಿಸಿ ಕಚೇರಿಗೆ ಬರುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿದ್ದಾರೆ. ಇಂತಹ ದಬ್ಬಾಳಿಕೆಗೆ ಕಾಂಗ್ರೆಸ್ಸಿಗರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಬಿಜೆಪಿಯವರಿಗೆ ಸತ್ಯಾಗ್ರಹ ಗೊತ್ತಿಲ್ಲ, ಚಳವಳಿ ಗೊತ್ತಿಲ್ಲ. ಬಿಜೆಪಿಯವರಿಗೆ ಪ್ರಚೋದನಕಾರಿ ಭಾಷಣ ಮಾಡುವುದು ಮಾತ್ರ ಗೊತ್ತು. ರಾಷ್ಟ್ರದ ಹಿತಕ್ಕಾಗಿ ಕಾಂಗ್ರೆಸ್ ಪತ್ರಿಕೆಗಳನ್ನು ಹುಟ್ಟುಹಾಕಿದೆ. ರಾಷ್ಟ್ರದ ಹಿತಕ್ಕಾಗಿ ಬಿಜೆಪಿ ಯಾವ ಪತ್ರಿಕೆಯನ್ನೂ ತೆರೆದಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ವೈಯಕ್ತಿಕ ಆಸ್ತಿಯಲ್ಲ ಎಂದು ನವದೆಹಲಿಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಧೈರ್ಯ ಕಡಿಮೆ ಮಾಡಲು ಈ ದಾಳಿ ನಡೆಸಲಾಗಿದೆ. ರಾಹುಲ್ ಗಾಂಧಿ ಹಣದುಬ್ಬರ, ನಿರುದ್ಯೋಗ ಮತ್ತಿತರ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಬಾಯಿ ಮುಚ್ಚಿಸಲು ಇಡಿ ದಾಳಿ ಮಾಡಲಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:17 pm, Tue, 14 June 22