AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಷನಲ್ ಹೆರಾಲ್ಡ್​ ಪ್ರಕರಣ: ಸತತ 3ನೇ ದಿನ ಇಡಿ ವಿಚಾರಣೆ ಎದುರಿಸಲಿರುವ ರಾಹುಲ್ ಗಾಂಧಿ

ನ್ಯಾಷನಲ್ ಹೆರಾಲ್ಡ್​ ಪತ್ರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಸತತ 3ನೇ ದಿನವಾದ ಇಂದು ಮತ್ತೆ ಜಾರಿ ನಿರ್ದೇಶನಾಲಯದ(Enforcement Directorate)ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.

ನ್ಯಾಷನಲ್ ಹೆರಾಲ್ಡ್​ ಪ್ರಕರಣ: ಸತತ 3ನೇ ದಿನ ಇಡಿ ವಿಚಾರಣೆ ಎದುರಿಸಲಿರುವ ರಾಹುಲ್ ಗಾಂಧಿ
Rahul Gandhi
Follow us
TV9 Web
| Updated By: ನಯನಾ ರಾಜೀವ್

Updated on:Jun 15, 2022 | 10:35 AM

ನ್ಯಾಷನಲ್ ಹೆರಾಲ್ಡ್​ ಪತ್ರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಸತತ 3ನೇ ದಿನವಾದ ಇಂದು ಮತ್ತೆ ಜಾರಿ ನಿರ್ದೇಶನಾಲಯದ(Enforcement Directorate)ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪವನ್ನು ಎದುರಿಸುತ್ತಿದ್ದಾರೆ. ಸೋನಿಯಾಗಾಂಧಿಗೂ ಇಡಿ ಸಮನ್ಸ್ ನೀಡಿದ್ದು, ಕೊರೊನಾ ಕಾರಣದಿಂದಾಗಿ ಅವರು ವಿಚಾರಣೆಗೆ ಗೈರಾಗಿದ್ದಾರೆ.

ರಾಹುಲ್ ಗಾಂಧಿ ಜೂನ್ 13 ಹಾಗೂ 14ರಂದು ಎರಡೂ ದಿನ ವಿಚಾರಣೆಗೆ ಹಾಜರಾಗಿದ್ದರು, ಇನ್ನೂ ಪ್ರಶ್ನೆಗಳು ಪೂರ್ಣಗೊಳ್ಳದ ಕಾರಣ ಜೂನ್ 15ರಂದು ಕೂಡ ವಿಚಾರಣೆಯನ್ನು ಎದುರಿಸಬೇಕಿದೆ. ಕಳೆದ ಎರಡು ದಿನಗಳಿಂದ ಕಾಂಗ್ರೆಸ್ ಕಾರ್ಯಕರ್ತರು ದೇಶದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಹುಲ್ ಗಾಂಧಿ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ಎಐಸಿಸಿಗೆ ಆಗಮಿಸಿದರು. ಅಲ್ಲಿಂದ 11ಗಂಟೆಗೆ ಇಡಿ ಕಚೇರಿಗೆ ತೆರಳಿದರು. ರಾತ್ರಿ 11.40ರವರೆಗೂ ವಿಚಾರಣೆ ಎದುರಿಸಿದರು. ಮಧ್ಯಹ್ನ 2 ಗಂಟೆ ಭೋಜನ ವಿರಾಮ ತೆಗೆದುಕೊಂಡಿದ್ದರು. ಒಟ್ಟು 10 ಗಂಟೆಗಳಿಗಿಂತಲೂ ಹೆಚ್ಚು ಕಾಲ ರಾಹುಲ್ ಗಾಂಧಿ ವಿಚಾರಣೆ ಎದುರಿಸಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು ನಾಲ್ಕು ಗಂಟೆಗಳ ವಿಚಾರಣೆ ನಂತರ ಮಧ್ಯಾಹ್ನ 3.30 ರ ಸುಮಾರಿಗೆ ಸುಮಾರು ಒಂದು ಗಂಟೆ ವಿರಾಮ ತೆಗೆದುಕೊಂಡು ರಾಹುಲ್ ಮನೆಗೆ ತೆರಳಿದರು. ನಂತರ ಸಂಜೆ 4.30 ರ ಸುಮಾರಿಗೆ ಮತ್ತೆ ವಿಚಾರಣೆಗೆ ಬಂದಿದ್ದಾರೆ. ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿತ್ತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:34 am, Wed, 15 June 22

Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ