AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Herald Case: ರಾಹುಲ್ ಗಾಂಧಿಗೆ ಸಮನ್ಸ್: ಕಾಂಗ್ರೆಸ್ ಪ್ರತಿಭಟನೆ, ಹಲವು ಮಂದಿ ಪೊಲೀಸ್ ವಶಕ್ಕೆ

ನ್ಯಾಷನಲ್ ಹೆರಾಲ್ಡ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು ಈ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

National Herald Case: ರಾಹುಲ್ ಗಾಂಧಿಗೆ ಸಮನ್ಸ್: ಕಾಂಗ್ರೆಸ್ ಪ್ರತಿಭಟನೆ, ಹಲವು ಮಂದಿ ಪೊಲೀಸ್ ವಶಕ್ಕೆ
Rahul Gandhi
TV9 Web
| Updated By: Digi Tech Desk|

Updated on:Jun 13, 2022 | 11:12 AM

Share

ನವದೆಹಲಿ: ನ್ಯಾಷನಲ್ ಹೆರಾಲ್ಡ್ (National Herald Case)​ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ  (Sonia Gandhi) ಹಾಗೂ ರಾಹುಲ್ ಗಾಂಧಿ (Rahul Gandhi) ವಿರುದ್ಧ ಜಾರಿ ನಿರ್ದೇಶನಾಲಯ (Enforcement Directordate) ಸಮನ್ಸ್ ಜಾರಿ ಮಾಡಿದ್ದು ಈ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ  (Congress Protest) ಆರಂಭಿಸಿದ್ದಾರೆ. ಪ್ರತಿಭಟನೆ ಕಾವು ಹೆಚ್ಚಾದಂತೆ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ಶುರುಮಾಡಿದ್ದಾರೆ.

ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surjewala) ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರಿಂದ ಕಾಂಗ್ರೆಸ್​ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಾಗಿಲ್ಲ, ಈಗ ಬಿಜೆಪಿಯು ಅಂಥದ್ದೇ ಕೆಲಸವನ್ನು ಮಾಡುತ್ತಿದೆ ಆದರೆ ಯಾವುದಕ್ಕೂ ನಾವು ಕುಗ್ಗುವುದಿಲ್ಲ, ಯಾರ ಬೆದರಿಕೆಗೂ ಹೆದರುವುದಿಲ್ಲ, ರಾಹುಲ್ ನೇತೃತ್ವದಲ್ಲಿ ಸತ್ಯ ಕಾ ಸಂಗ್ರಾಮ್ (Satya Ka Sangram) ಮುಂದುವರೆಯಲಿದೆ ಎಂದು ಹೇಳಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ಮೊದಲು ಜೂ. 8ರಂದು ಹಾಗೂ ಅವರ ಪುತ್ರ ಸಂಸದ ರಾಹುಲ್ ಗಾಂಧಿಗೆ ಜೂ. 13ರಂದು ಫೆಡರಲ್ ಏಜೆನ್ಸಿಯ ಎದುರು ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಇಡಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.

ದೆಹಲಿ ವ್ಯಾಪ್ತಿಯಲ್ಲಿ ರ‍್ಯಾಲಿಗೆ ಅನುಮತಿ ನೀಡಲಾಗುವುದಿಲ್ಲ, ನಾವು ಕೋಮು ಪರಿಸ್ಥಿತಿ ಹಾಗೀ ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ನಿರ್ವಹಿಸಬೇಕಿದೆ ಎಂದು ಉಪ ಪೊಲೀಸ್ ಆಯುಕ್ತ ಅಮೃತ ಗುಗುಲೋತ್ ಮಾಹಿತಿ ನೀಡಿದ್ದಾರೆ.

ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ ನ್ಯಾಷನಲ್ ಹೆರಾಲ್ಡ್ ಪ್ರಕರಣವು ಜವಾಹರಲಾಲ್ ನೆಹರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕುರಿತಾಗಿದೆ. 1938 ನೆಹರೂ ಅವರು ನ್ಯಾಷನಲ್ ಹೆರಾಲ್ಡ್​ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಸ್ಥಾಪನೆ ಮಾಡಿದರು. ಅಲ್ಲಿಂದ ನ್ಯಾಷನಲ್ ಹೆರಾಲ್ಡ್ ಜರ್ನಿ ಶುರುವಾಗಿತ್ತು. ನ್ಯಾಷನಲ್ ಹೆರಾಲ್ಡ್ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ 5,000 ಸ್ವಾತಂತ್ರ್ಯ ಹೋರಾಟಗಾರರನ್ನು ತನ್ನ ಷೇರುದಾರರನ್ನಾಗಿ ಮಾಡಿತು.

ಮಾತೃ ಸಂಸ್ಥೆಯು ಸಾಲದಲ್ಲಿದ್ದ ಕಾರಣ 2008ರಲ್ಲಿ ಪತ್ರಿಕೆಯನ್ನು ಮುಚ್ಚಲಾಯಿತು. ಬಳಿಕ 2016ರಿಂದ ಮ್ತತೊಮ್ಮೆ ಮುದ್ರಣ ಪ್ರಾರಂಭಿಸಿತು. ಈ ಹಿಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ 90.25 ಕೋಟಿ ಬಡ್ಡಿ ರಹಿತ ಸಾಲವನ್ನು ತೆಗೆದುಕೊಂಡಿತ್ತು. ಪ್ರಸ್ತುತ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:42 am, Mon, 13 June 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!