ಇಡಿ ಕಚೇರಿ ಒಳಗೆ ರಾಹುಲ್ ವಿಚಾರಣೆ, ಹೊರಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ( National Herald)ಪತ್ರಿಕೆಯ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ರಾಹುಲ್ ಗಾಂಧಿ (Rahul Gandhi) ಇಂದು ಮೂರನೇ ದಿನ ಇಡಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಇಡಿ ಕಚೇರಿ ಒಳಗೆ ರಾಹುಲ್ ವಿಚಾರಣೆ, ಹೊರಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ
Rahul GandhiImage Credit source: ANI
Follow us
TV9 Web
| Updated By: ನಯನಾ ರಾಜೀವ್

Updated on: Jun 15, 2022 | 1:13 PM

ನ್ಯಾಷನಲ್ ಹೆರಾಲ್ಡ್ ( National Herald)ಪತ್ರಿಕೆಯ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ರಾಹುಲ್ ಗಾಂಧಿ (Rahul Gandhi) ಇಂದು ಮೂರನೇ ದಿನ ಇಡಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಅತ್ತ ವಿಚಾರಣೆ ನಡೆಯುತ್ತಿದ್ದರೆ, ಇತ್ತ ಜಾರಿ ನಿರ್ದೇಶನಾಲಯ ಕಚೇರಿ ಎದುರು ಟಯರ್​ಗೆ ಬೆಂಕಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದುವರೆಗೆ 80 ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರ ನೀಡಿದ್ದಾರೆ, ಆದರೆ ಉತ್ತರ ನೀಡಿದ ಬಳಿಕ ಕೆಲ ಉತ್ತರಗಳ ತಿದ್ದುಪಡಿ ಮಾಡಲು ರಾಹುಲ್ ಗಾಂಧಿ ಮುಂದಾದರು ಎಂದು ಮೂಲಗಳು ತಿಳಿಸಿವೆ. ಬುಧವಾರ ಬೆಳಗ್ಗೆ 11.30ಗಂಟೆ ಸುಮಾರಿಗೆ ರಾಹುಲ್ ಗಾಂಧಿ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ಆಗಮಿಸಿದ್ದು ವಿಚಾರಣೆ ನಡೆಯುತ್ತಿದೆ.

ಭಾರತೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರು ಪಕ್ಷದ ಪ್ರಧಾನ ಕವಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬೂಟು ಕಾಲಿನಲ್ಲಿ ತಮ್ಮನ್ನು ಒದ್ದಿದ್ದರು ಎಂದು ಆರೋಪಿಸಿದ್ದಾರೆ. ಎಐಸಿಸಿ ಪ್ರಧಾನ ಕಚೇರಿಯೊಳಗೆ ತೆರಳಲು ಅವಕಾಶ ದೊರೆಯದ ಕಾರಣ ಕಾಂಗ್ರೆಸ್ ಸಂಸದರು ಮಹಾತ್ಮ ಗಾಂಧಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಹುಲ್ ಗಾಂಧಿ ಅವರ ವಿಚಾರಣೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈಗಲೂ ಗಂಟೆಗಟ್ಟಲೆ ವಿಚಾರಣೆ ನಡೆಸುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಾತನಾಡಿ, ನಾವು ಭಯೋತ್ಪಾದಕರಲ್ಲ, ನಮ್ಮ ನಿರ್ವಹಣೆಗೆ ಪೊಲೀಸರ ಅಗತ್ಯವೇನಿದೆ, ನಮ್ಮನ್ನು ಕಂಡರೆ ಭಯ ಏಕೆ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಹುಲ್ ಗಾಂಧಿಯನ್ನು ಕಾನೂನಿನ ಅಡಿ ಬಂಧನ ಮಾಡುತ್ತಾರೆ ಎಂದು ಹೇಳಬೇಕು. ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ ಯಾವ ಕೇಸ್​ನಲ್ಲಿ ವಿಚಾರಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಇಡಿಯವರಿಗೂ ಗೊತ್ತಿಲ್ಲ. ಅವರು 90 ಕೋಟಿ ರೂ. ಸಾಲವನ್ನು ನ್ಯಾಷನಲ್ ಹೆರಾಲ್ಡ್​ಗೆ ಕೊಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ, ಕೊಡಬಾರದು ಎಂಬ ನಿಯಮ ಎಲ್ಲಾದರೂ ಇದೆಯೇ ಎಂದು ಪ್ರಶ್ನಿಸಿದರು.

90 ಕೋಟಿಯಲ್ಲಿ 60 ಕೋಟಿ ಸಂಬಳ ಎಂದು ಕೊಟ್ಟಿದ್ದಾರೆ, ಇನ್ನುಳಿದ ಹಣವನ್ನು ಪ್ರಿಂಟಿಂಗ್ ವೆಚ್ಚ, ಇನ್​ಫ್ರಾಸ್ಟ್ರಕ್ಚರ್ ಸುಲುವಾಗಿ ಕೊಟ್ಟಿದ್ದಾರೆ. ರಾಹುಲ್ ಗಾಂಧಿಗೆ ಟಾರ್ಚರ್ ಕೊಡಬೇಕೆಂದೇ ಈ ವಿಚಾರಣೆ ನಡೆಸಲಾಗುತ್ತಿದೆ ಎಂದು ದೂರಿದರು.

ಎಲೆಕ್ಷನ್ ಬಂದಾಗ ರಾಬರ್ಟ್ ವಾದ್ರಾ , ಪ್ರಿಯಾಂಕಾ ಗಾಂಧಿ ವಾದ್ರಾ , ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆದು ವಿಚಾರಣೆ ಮಾಡುತ್ತಾರೆ ಎಂದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್