National Herald Case: ನ್ಯಾಷನಲ್ ಹೆರಾಲ್ಡ್​ ಪ್ರಕರಣ; ಜೂ. 13ಕ್ಕೆ ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿಗೆ ಸಮನ್ಸ್​ ಜಾರಿ

| Updated By: ಸುಷ್ಮಾ ಚಕ್ರೆ

Updated on: Jun 03, 2022 | 1:15 PM

Rahul Gandhi: ಜೂನ್ 13ರಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಮತ್ತೊಮ್ಮೆ ಸಮನ್ಸ್​ ನೀಡಲಾಗಿದೆ.

National Herald Case: ನ್ಯಾಷನಲ್ ಹೆರಾಲ್ಡ್​ ಪ್ರಕರಣ; ಜೂ. 13ಕ್ಕೆ ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿಗೆ ಸಮನ್ಸ್​ ಜಾರಿ
ರಾಹುಲ್ ಗಾಂಧಿ
Follow us on

ನವದೆಹಲಿ: ನ್ಯಾಷನಲ್​ ಹೆರಾಲ್ಡ್​ (National Herald) ಪತ್ರಿಕೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮತ್ತೆ ಸಮನ್ಸ್ ನೀಡಿದ್ದಾರೆ. ಜೂನ್ 13ಕ್ಕೆ ವಿಚಾರಣೆಗೆ ಹಾಜರಾಗುವಂತೆ ರಾಹುಲ್​ ಗಾಂಧಿಗೆ (Rahul Gandhi) ಸಮನ್ಸ್ ಜಾರಿಗೊಳಿಸಲಾಗಿದೆ. ಈ ಹಿಂದೆ ಜೂನ್ 2ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದರೆ, ವಿದೇಶದಲ್ಲಿದ್ದ ಕಾರಣ ವಿಚಾರಣೆ ಮುಂದೂಡುವಂತೆ ರಾಹುಲ್ ಗಾಂಧಿ ಮನವಿ ಮಾಡಿದ್ದರು. ಹೀಗಾಗಿ ರಾಹುಲ್​ ಗಾಂಧಿಗೆ ಜಾರಿ ನಿರ್ದೇಶನಾಲಯದಿಂದ ಮತ್ತೆ ಸಮನ್ಸ್ ನೀಡಲಾಗಿದೆ.

ಜೂನ್ 13ರಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಮತ್ತೊಮ್ಮೆ ಸಮನ್ಸ್​ ನೀಡಲಾಗಿದೆ. ಈ ಹಿಂದೆ ಜೂನ್ 2ರಂದು ತನಿಖೆಗೆ ಹಾಜರಾಗಲು ರಾಹುಲ್ ಗಾಂಧಿಗೆ ನಿರ್ದೇಶಿಸಲಾಗಿತ್ತು. ಆದರೆ, ವಿದೇಶದಲ್ಲಿರುವುದರಿಂದ ವಿಚಾರಣೆಯ ದಿನಾಂಕವನ್ನು ಮುಂದೂಡುವಂತೆ ತನಿಖಾ ಸಂಸ್ಥೆಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದರು. ಜೂನ್ 5ರಂದು ರಾಹುಲ್ ಗಾಂಧಿ ಭಾರತಕ್ಕೆ ವಾಪಾಸ್ ಆಗಮಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Rahul Gandhi: ಇಡಿ ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ರಾಹುಲ್ ಗಾಂಧಿ, ಜೂನ್ 8ಕ್ಕೆ ಸೋನಿಯಾ ಗಾಂಧಿ ವಿಚಾರಣೆ

ಏತನ್ಮಧ್ಯೆ, ನಿನ್ನೆ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಜೂನ್ 8 ರಂದು ಕೇಂದ್ರ ದೆಹಲಿಯ ಕೇಂದ್ರ ಕಚೇರಿಯಲ್ಲಿ ಫೆಡರಲ್ ಏಜೆನ್ಸಿಯ ಮುಂದೆ ಪದಚ್ಯುತರಾಗುವ ನಿರೀಕ್ಷೆಯಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಪಕ್ಷದ ಪ್ರಚಾರದಲ್ಲಿ ಹಣಕಾಸು ಅಕ್ರಮಗಳ ಕುರಿತು ಇಡಿ ತನಿಖೆಗೆ ಈ ಪ್ರಕರಣವು ಸಂಬಂಧಿಸಿದೆ. ನ್ಯಾಷನಲ್ ಹೆರಾಲ್ಡ್​ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿದೆ. ಇಡಿ ಇತ್ತೀಚೆಗೆ ಕಾಂಗ್ರೆಸ್‌ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಕೂಡ ಈ ಪ್ರಕರಣದಲ್ಲಿ ಪ್ರಶ್ನಿಸಿತ್ತು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರೆ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಸೇರಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಶುರು ಮಾಡಿದ್ದರು. ದೇಶದ ಸ್ವಾತಂತ್ರ್ಯ ಚಳುವಳಿಗೆ ಬೆನ್ನೆಲುಬಾಗಿ ನಿಲ್ಲುವುದು ಈ ಪತ್ರಿಕೆಯ ಪ್ರಮುಖ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಟಿಸಿರುವ ಈ ಪತ್ರಿಕೆ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿ ಬದಲಾಗಿತ್ತು. ಕಾಂಗ್ರೆಸ್ ಪಕ್ಷದ ನಿಲುವು, ಅಭಿಪ್ರಾಯಗಳನ್ನು ಇದರಲ್ಲಿ ಪ್ರಕಟ ಮಾಡಲಾಗುತ್ತಿತ್ತು. 1938ರ ಸೆಪ್ಟೆಂಬರ್ 9ರಂದು ಲಕ್ನೋದಲ್ಲಿ ಇಂಗ್ಲೀಷ್ ಭಾಷೆಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಟಣೆ ಆರಂಭವಾಗಿತ್ತು. ಬಳಿಕ ಹಿಂದಿ ಭಾಷೆಯ ನವಜೀವನ್ ಮತ್ತು ಉರ್ದು ಭಾಷೆಯ ಕ್ವಾಮಿ ಆವಾಜ್ ಪತ್ರಿಕೆಯನ್ನೂ ಆರಂಭ ಮಾಡಿತ್ತು. ಈ ಮೂರೂ ಪತ್ರಿಕೆಗಳ ಒಡೆತನ ಎಜಿಎಲ್ ಹೆಸರಿನಲ್ಲಿತ್ತು.

ಇದನ್ನೂ ಓದಿ: Breaking: ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ​ ಪ್ರಕರಣ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್​​ ಖರ್ಗೆ ವಿಚಾರಣೆ ನಡೆಸಿದ ಇ.ಡಿ..

ನೆಹರು ಅವರು ಕಟ್ಟಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಕಂಪನಿಯು ಯಾವುದೇ ಒಬ್ಬ ವ್ಯಕ್ತಿಗೆ ಸೇರುವುದಿಲ್ಲ. 2010ರ ವೇಳೆಗ ಎಜಿಎಲ್ 1057 ಷೇರುದಾರರನ್ನು ಹೊಂದಿತ್ತು, ಆದರೆ, ತೀವ್ರ ನಷ್ಟದಲ್ಲಿದ್ದ ಈ ಕಂಪನಿಯ ಷೇರುಗಳನ್ನು 2011ರಲ್ಲಿ ಯಂಗ್ ಇಂಡಿಯಾ ಸಂಸ್ಥೆಗೆ ವರ್ಗಾವಣೆ ಮಾಡಲಾಗಿತ್ತು. ನೆಹರು ಪ್ರಧಾನಿಯಾಗಿದ್ದಾಗ ಎಜಿಎಲ್ ಗೆ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದುಬರುತ್ತಿತ್ತು. ಪ್ರಧಾನಿಯ ಅಧಿಕಾರ ಬಳಸಿಕೊಂಡು ದೇಶದ ವಿವಿದೆಡೆ ಭೂಮಿಯನ್ನೂ ಮಂಜೂರು ಮಾಡಿದ್ದರು. ಎಜಿಎಲ್ ಆರ್ಥಿಕ ಸಂಕಷ್ಟದಲ್ಲಿದ್ದರೂ, ಈ ಕಂಪನಿ ಹೊಂದಿದ್ದ ಆಸ್ತಿಯ ಮೌಲ್ಯ ಅಂದಾಜು 2 ರಿಂದ 5 ಸಾವಿರ ಕೋಟಿ ಎಂದು ಹೇಳಲಾಗಿದೆ. 2007ರ ಏಪ್ರಿಲ್ 1 ರಂದು ತಾತ್ಕಾಲಿಕವಾಗಿ ಈ ಪತ್ರಿಕೆಯ ಪ್ರಕಟಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ವಿಫಲ, ಜಾಹೀರಾತು ಆದಾಯದ ಕೊರತೆಯಿಂದಾಗಿ 2008ರಲ್ಲಿ ಎಜಿಎಲ್ ಅನ್ನು ಮುಚ್ಚಲಾಗಿತ್ತು. ಬಳಿಕ 2016ರ ಜನವರಿ 21 ರಿಂದ ಮತ್ತೊಮ್ಮೆ ಮುದ್ರಣ ಆರಂಭಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ