ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ED ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ರಾಹುಲ್​​ ಗಾಂಧಿ

| Updated By: ವಿವೇಕ ಬಿರಾದಾರ

Updated on: Jun 13, 2022 | 2:55 PM

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜೂನ್​ 13) ರಂದು ED ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ರಾಹುಲ್​​ ಗಾಂಧಿ ಯವರನ್ನು ಮೂವರು ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ED ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ರಾಹುಲ್​​ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Follow us on

ನವದೆಹಲಿ: ನ್ಯಾಷನಲ್ ಹೆರಾಲ್ಡ್ (National Herald) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜೂನ್​ 13) ರಂದು ED ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ರಾಹುಲ್​​ ಗಾಂಧಿ (Rahul Gandhi) ಯವರನ್ನು ಮೂವರು ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್ ಕಂಪನಿಯನ್ನು ‌ಯಂಗ್ ಇಂಡಿಯಾ ಖರೀದಿಸಿದ್ದ ಬಗ್ಗೆ ಇಡಿ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ರಾಹುಲ್​ ಗಾಂಧಿ ಅವರು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತಿದ್ದಂತೆ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್​​ ಸಂಸದರನ್ನು ದಾರಿ ತಪ್ಪಿಸಿ ದೆಹಲಿಯ ಮಂದಿರ್ ಮಾರ್ಗ್ ಪೊಲೀಸರು ಬಂಧಿಸಿದ್ದಾರೆ. ಸಂಸದರಾದ ಎಲ್.ಹನುಮಂತಯ್ಯ, ರಜಿನಿ ಪಾಟೀಲ್ ಅಖಿಲೇಶ್ ಪ್ರಸಾದ್ ಸಿಂಗ್, ತಿರುನವುಕ್ಕರಸು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್​ ಸಂಸದರನ್ನು ಬಂಧಿಸಿದ ಪೊಲೀಸರು ಸಂಸದರನ್ನು ಕಾಂಗ್ರೆಸ್ ಕಚೇರಿಗೆ ಕರೆದೊಯ್ಯುತ್ತೇವೆಂದು ಹೇಳಿ ದೆಹಲಿಯ ಮಂದಿರ್ ಮಾರ್ಗ್ ಠಾಣೆಗೆ ಕರೆತಂದಿದ್ದಾರೆ. ದೆಹಲಿಯ ಪೊಲೀಸರ ವಶದಲ್ಲಿರುವ ಕಾಂಗ್ರೆಸ್​​ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ತುಘಲಕ್ ಸ್ಟೇಷನ್ ನಲ್ಲಿ ವೇಣುಗೋಪಾಲ, ಸುರ್ಜೇವಾಲ, ಶ್ರೀನಿವಾಸ್,ಡಿ.ಕೆ‌ ಸುರೇಶ್ ರನ್ನು ಭೇಟಿಯಾಗಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರು ದುರ್ವರ್ತನೆ ತೋರಿದ್ದಾರೆ ಪೊಲೀಸರ ವರ್ತನೆಯಿಂದ ನನಗೆ ನೋವಾಗಿದೆ ಎಂದು ಕಾಮಗ್ರೆಸ್​​ ನಾಯಕ ಅಧೀರ್​ ರಂಜನ್​ ಚೌಧರಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ: ಇಡಿ ವಿಚಾರಣೆಗೆ ಇಂದು ರಾಹುಲ್ ಗಾಂಧಿ ಹಾಜರು, ಕಾಂಗ್ರೆಸ್​ ಪ್ರತಿಭಟನೆಗೆ ದೆಹಲಿ ಪೊಲೀಸರಿಂದ ಅನುಮತಿ ನಿರಾಕರಣೆ

ಕಾಂಗ್ರೆಸ್​ ಪ್ರತಿಭಟನೆಗೆ ಕಾರಣ ಏನು?

ನ್ಯಾಷನಲ್ ಹೆರಾಲ್ಡ್​ ಹಣಕಾಸು ಅವ್ಯವಹಾರ ಪ್ರಕರಣಕ್ಕೆ (National herald case) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ (Rahul Gandhi) ಸೋಮವಾರ ಜಾರಿ ನಿರ್ದೇಶನಾಲಯದ (Enforcement Directorate – ED) ಎದುರು ಹಾಜರಾಗಿದ್ದಾರೆ. ಕೇಂದ್ರ ಸರ್ಕಾರವು ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್​ ಸೋಮವಾರ (ಜೂನ್ 13) ಮೆಗಾ ಸತ್ಯಾಗ್ರಹ ಪ್ರತಿಭಟನೆ ನಡೆಸುತ್ತಿದೆ. ಆದರೆ ದೆಹಲಿ ಪೊಲೀಸರು ಸತ್ಯಾಗ್ರಹಕ್ಕೆ ಅನುಮತಿ ನಿರಾಕರಿಸಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಿಂದ ಇಡಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಲು ಕಾಂಗ್ರೆಸ್ ಉದ್ದೇಶಿಸಿತ್ತು. ಇಡಿ ಕಚೇರಿಯ ಎದುರು ದೊಡ್ಡ ಸಂಖ್ಯೆಯಲ್ಲಿ ಪೊಲೀಸರು ನೆರೆದಿರುವ ವಿಡಿಯೊ ತುಣುಕನ್ನು ಎಎನ್​ಐ ಸುದ್ದಿಸಂಸ್ಥೆ ಪ್ರಕಟಿಸಿದೆ.

ಈ ಪ್ರತಿಭಟನೆಯ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಬಲಪ್ರದರ್ಶನಕ್ಕೆ (Congress Protest) ಮುಂದಾಗಿದೆ. ಆದರೆ ರಾಷ್ಟ್ರ ರಾಜಧಾನಿಯಲ್ಲಿ ಕೋಮು ಗಲಭೆಯ ಆತಂಕ, ಅತಿಗಣ್ಯವ್ಯಕ್ತಿಗಳ ಸಂಚಾರ ಇರುವುದರಿಂದ ಪ್ರತಿಭಟನೆಗೆ ಅವಕಾಶ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ‘ಪ್ರತಿಭಟನೆಗೆ ಅನುಮತಿ ನೀಡಲು ಆಗುವುದಿಲ್ಲ’ ಎಂದು ದೆಹಲಿ ಡಿಸಿಪಿ ಅಮೃತಾ ಗುಗುಲೋತ್ ಹೇಳಿದರು.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ