ಭೂಸ್ವಾಧೀನ ವಿಳಂಬದಿಂದ ತೆಲಂಗಾಣದಲ್ಲಿ ₹32,383 ಕೋಟಿ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಸ್ಥಗಿತಗೊಂಡಿವೆ: ಕೇಂದ್ರ ಸಚಿವ ಕಿಶನ್ ರೆಡ್ಡಿ

32,383 ಕೋಟಿ ರೂಪಾಯಿಗಳ ಯೋಜನೆಗಳು ನೆನೆಗುದಿಗೆ ಬಿದ್ದಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದ್ದು, ತೆಲಂಗಾಣ ರಾಜ್ಯ ಸರ್ಕಾರದ ನಿರಾಸಕ್ತಿಯಿಂದಾಗಿ ಅದು ಅಗತ್ಯವಾದ ಭೂಸ್ವಾಧೀನವನ್ನು ಮಾಡುತ್ತಿಲ್ಲ ಎಂದಿದ್ದಾರೆ

ಭೂಸ್ವಾಧೀನ ವಿಳಂಬದಿಂದ ತೆಲಂಗಾಣದಲ್ಲಿ ₹32,383 ಕೋಟಿ  ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಸ್ಥಗಿತಗೊಂಡಿವೆ: ಕೇಂದ್ರ ಸಚಿವ ಕಿಶನ್ ರೆಡ್ಡಿ
ಜಿ ಕಿಶನ್ ರೆಡ್ಡಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 18, 2023 | 10:38 AM

ತೆಲಂಗಾಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ (National Highway projects )ಭೂಮಿ ಮಂಜೂರು ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ (G Kishan Reddy) ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrasekhar Rao) ಅವರಿಗೆ ಪತ್ರ ಬರೆದಿದ್ದಾರೆ. 32,383 ಕೋಟಿ ರೂಪಾಯಿಗಳ ಯೋಜನೆಗಳು ನೆನೆಗುದಿಗೆ ಬಿದ್ದಿದೆ ಎಂದು ರೆಡ್ಡಿ ಹೇಳಿದ್ದು, ತೆಲಂಗಾಣ ರಾಜ್ಯ ಸರ್ಕಾರದ ನಿರಾಸಕ್ತಿಯಿಂದಾಗಿ ಅದು ಅಗತ್ಯವಾದ ಭೂಸ್ವಾಧೀನವನ್ನು ಮಾಡುತ್ತಿಲ್ಲ ಎಂದಿದ್ದಾರೆ. 750 ಕಿ.ಮೀ ಉದ್ದದ 11 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, ಇದಕ್ಕಾಗಿ ಅಂದಾಜು 4,332 ಹೆಕ್ಟೇರ್ ಭೂಮಿ ಅಗತ್ಯವಿದೆ, ಇವು ಸದ್ಯ ಸ್ಥಗಿತಗೊಂಡಿದೆ ಎಂದು ರೆಡ್ಡಿ ಹೇಳಿದ್ದಾರೆ. ಉಳಿದ ಭೂಮಿಯನ್ನು ಸಮಯಕ್ಕೆ ಒದಗಿಸಲು ಮತ್ತು ಯೋಜನೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಹಕರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಕೆಸಿಆರ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಚಿವರು ತೆಲುಗಿನಲ್ಲಿ ಟ್ವೀಟ್ ಮಾಡಿದ್ದಾರೆ.

13,163.18 ಕೋಟಿ ವೆಚ್ಚದ ಹೈದರಾಬಾದ್ ಪ್ರಾದೇಶಿಕ ವರ್ತುಲ ರಸ್ತೆಯ 158 ಕಿಲೋಮೀಟರ್ ಉತ್ತರ ಭಾಗದ ಯೋಜನೆ, ತೆಲಂಗಾಣ ರಾಜ್ಯದಲ್ಲಿ ಸರಿಸುಮಾರು 275 ಕಿಲೋಮೀಟರ್‌ಗಳನ್ನು ಹೊಂದಿರುವ ನಾಗ್‌ಪುರ ವಿಜಯವಾಡ ಕಾರಿಡಾರ್‌ನ NH163G ಕೂಡ ಸ್ಥಗಿತವಾಗಿದೆ ಎಂದು ರೆಡ್ಡಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು NH163 G ಯ ವಾರಂಗಲ್-ಖಮ್ಮಂ ವಿಭಾಗದ 108 ಕಿಲೋಮೀಟರ್ ವ್ಯಾಪ್ತಿಯ 4 ಲೇನಿಂಗ್ ವೆಚ್ಚ 3,397.01 ಕೋಟಿ, NH163 G ನ ಮಂಚೇರಿಯಲ್-ವಾರಂಗಲ್ ವಿಭಾಗದ 109 ಕಿಲೋಮೀಟರ್ ವ್ಯಾಪ್ತಿಯ 4 ಲೇನಿಂಗ್ ವೆಚ್ಚ 3,441 ಕೋಟಿ ಮತ್ತು ತೆಲಂಗಾಣ ರಾಜ್ಯದಲ್ಲಿ ಬರುವ ಖಮ್ಮಂ-ವಿಜಯವಾಡ ವಿಭಾಗದಲ್ಲಿ 4 ಲೇನಿಂಗ್‌ನ 61 ಕಿಲೋಮೀಟರ್‌ಗಳು ರೂ. 3,007 ಕೋಟಿ ಒಳಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:19 ಹೊಸ ಜಿಲ್ಲೆಗಳನ್ನು ಘೋಷಿಸಿದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್; ಇದು ರಾಜಕೀಯ ನಡೆ ಎಂದ ಬಿಜೆಪಿ

2014 ರಿಂದ ಹೆದ್ದಾರಿಗಳ ಅಭಿವೃದ್ಧಿ ಮತ್ತು ಅಧುನಿಕ ಅತ್ಯಾಧುನಿಕ ರಾಷ್ಟ್ರೀಯ ಹೆದ್ದಾರಿ ರಸ್ತೆ ಜಾಲವನ್ನು ನಿರ್ಮಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವನ್ನು ರೆಡ್ಡಿ ಹೊಗಳಿದ್ದಾರೆ.

ಸ್ವಾತಂತ್ರ್ಯದ ನಂತರ 2014 ರವರೆಗಿನ ಅವಧಿಯಲ್ಲಿ, ತೆಲಂಗಾಣ ಪ್ರದೇಶವು ಒಟ್ಟು 2,500 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂದಿತ್ತು. 2014 ರಿಂದ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಕಳೆದ ಎಂಟೂವರೆ ವರ್ಷಗಳಲ್ಲಿ ಇನ್ನೂ 2,500 ನಿರ್ಮಿಸಲಾಗಿದೆ ಎಂದು ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಗೆ ಪತ್ರದಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 18 March 23

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್