ದೆಹಲಿಯಲ್ಲಿ ತಂದೆ-ಮಗ ಚರಂಡಿಗೆ ಬಿದ್ದ ಪ್ರಕರಣ; ಮುಖ್ಯ ಕಾರ್ಯದರ್ಶಿ, ಪೊಲೀಸ್ ಆಯುಕ್ತರಿಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್

ಈ ದುರಂತ ಘಟನೆಗೆ ಕಾರಣರಾದ ಕರ್ತವ್ಯಲೋಪ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಒತ್ತಾಯಿಸಿದೆ.

ದೆಹಲಿಯಲ್ಲಿ ತಂದೆ-ಮಗ ಚರಂಡಿಗೆ ಬಿದ್ದ ಪ್ರಕರಣ; ಮುಖ್ಯ ಕಾರ್ಯದರ್ಶಿ, ಪೊಲೀಸ್ ಆಯುಕ್ತರಿಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 04, 2023 | 12:08 PM

ನವದೆಹಲಿ: 2 ದಿನಗಳ ಹಿಂದೆ ದೆಹಲಿಯ (Delhi) ರೋಹಿಣಿ ಸೆಕ್ಟರ್ -31ರಲ್ಲಿ ತಂದೆ ಮತ್ತು ಮಗ ತೆರೆದ ಚರಂಡಿಯಲ್ಲಿ ಬಿದ್ದಿದ್ದರು. ಈ ಬಗ್ಗೆ ಬಂದ ಮಾಧ್ಯಮದ ವರದಿಯನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ದೆಹಲಿಯ ಮುಖ್ಯ ಕಾರ್ಯದರ್ಶಿ, ದೆಹಲಿ ಪೊಲೀಸ್ ಕಮಿಷನರ್​​ಗೆ (Delhi Police Commissioner) ನೋಟಿಸ್ ಜಾರಿ ಮಾಡಿದೆ. ಚರಂಡಿಯಲ್ಲಿ ಬಿದ್ದ ತಂದೆಯನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ 8 ವರ್ಷದ ಮಗನ ದೇಹ ಇನ್ನೂ ಸಿಕ್ಕಿಲ್ಲ.

ಚರಂಡಿಗೆ ಚಪ್ಪಡಿ ಮುಚ್ಚದೆ ಹಾಗೇ ತೆರೆದಿಟ್ಟಿದ್ದರಿಂದ ಈ ಘಟನೆ ನಡೆದಿತ್ತು. ಮಾನವ ಹಕ್ಕುಗಳ ಆಯೋಗ ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದ್ದು, ಈ ಪ್ರಕರಣದ ಬಗ್ಗೆ ವಿವರವಾದ ವರದಿಯನ್ನು ಕೇಳಿದೆ. ರಕ್ಷಣಾ ಕಾರ್ಯಾಚರಣೆಯ ಪ್ರಸ್ತುತ ಸ್ಥಿತಿ, ಪೊಲೀಸರ ತನಿಖೆಯ ಸ್ಥಿತಿ, ರಕ್ಷಿಸಲ್ಪಟ್ಟ ತಂದೆಯ ವೈದ್ಯಕೀಯ ಚಿಕಿತ್ಸೆ ಮತ್ತು ಹಾನಿಗೊಳಗಾದ ಕುಟುಂಬಕ್ಕೆ ನೀಡಲಾದ ಪರಿಹಾರದ ಬಗ್ಗೆ ಮಾಹಿತಿ ಕೇಳಲಾಗಿದೆ.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಈ ದುರಂತ ಘಟನೆಗೆ ಕಾರಣರಾದ ಕರ್ತವ್ಯಲೋಪ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆಯೂ ಮಾಹಿತಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಒತ್ತಾಯಿಸಿದೆ. ಈ ಪ್ರದೇಶದಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳು ಮತ್ತು ಗ್ರಿಲ್‌ಗಳನ್ನು ಕದಿಯದಂತೆ ಮಾಡಲು ತೆಗೆದುಕೊಂಡ ಅಥವಾ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿಯನ್ನು ನೀಡಬೇಕೆಂದು ಮಾನವ ಹಕ್ಕುಗಳ ಆಯೋಗ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ