ಪಿಎಫ್ಐ ಜತೆ ನಂಟು: ಆಂಧ್ರ ಪ್ರದೇಶ, ತೆಲಂಗಾಣದ ವಿವಿಧ ಸ್ಥಳಗಳಲ್ಲಿ ಎನ್ಐಎ ದಾಳಿ

ಕ್ರಿಮಿನಲ್ ಪಿತೂರಿ ನಡೆಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರನ್ನು ನೇಮಿಸಿಕೊಂಡಿದ್ದು, ಉಗ್ರ ಕೃತ್ಯಗಳನ್ನು ಎಸಗಲು ತರಬೇತಿ ನೀಡಲು ಶಿಬಿರಗಳನ್ನು ಆಯೋಜಿಸಿವೆ...

ಪಿಎಫ್ಐ ಜತೆ ನಂಟು: ಆಂಧ್ರ ಪ್ರದೇಶ, ತೆಲಂಗಾಣದ ವಿವಿಧ ಸ್ಥಳಗಳಲ್ಲಿ ಎನ್ಐಎ ದಾಳಿ
ಎನ್ಐಎ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 18, 2022 | 1:48 PM

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭಾನುವಾರ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಕ್ಕೆ (PFI) ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿತು. ಉಗ್ರಗಾಮಿ ಇಸ್ಲಾಮಿಕ್ ಸಂಘಟನೆಯಾದ ಪಿಎಫ್‌ಐ ಜತೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ (Telangana)ಆರು ಜಿಲ್ಲೆಗಳಲ್ಲಿ 38 ಸ್ಥಳಗಳು ಮತ್ತು ಆಂಧ್ರಪ್ರದೇಶದ (Andhra Pradesh) ಎರಡು ಜಿಲ್ಲೆಗಳಲ್ಲಿ ಎರಡು ಸ್ಥಳಗಳು ಸೇರಿದಂತೆ 40 ಸ್ಥಳಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿ ಶಾಹಿದ್ ಚೌಷ್ ಅಲಿಯಾಸ್ ಶಾಹಿದ್ ನಿವಾಸದಲ್ಲಿ ಸಂಸ್ಥೆ ಶೋಧ ನಡೆಸುತ್ತಿದೆ. ಶಾಹಿದ್‌ ವಿರುದ್ಧ 41(ಎ) ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPc) ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಭಯೋತ್ಪಾದನೆಯ ಮೂಲಗಳನ್ನು ಪತ್ತೆ ಹಚ್ಚುವುದಕ್ಕಾಗಿ ಈ ಶೋಧ ನಡೆಸಲಾಗುತ್ತಿದೆ. ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 13(1)(ಬಿ) ಅಡಿಯಲ್ಲಿ ತೆಲಂಗಾಣದ ನಿಜಾಮಾಬಾದ್ ಪೊಲೀಸ್ ಠಾಣೆಯು ಪಿಎಫ್‌ಐ ಸದಸ್ಯರ ವಿರುದ್ಧ ಈ ವರ್ಷ ಜುಲೈನಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಿಜಾಮಾಬಾದ್‌ನ ಉಸ್ಮಾನಿಯಾ ಮಸೀದಿ ಬಳಿಯ ಮನೆಯೊಂದರಲ್ಲಿ ನಡೆದ ಕೆಲವು ದೇಶವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಬ್ದುಲ್ ಖಾದರ್ ಮತ್ತು 26 ವ್ಯಕ್ತಿಗಳು ಮತ್ತು ಇತರರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಕ್ರಿಮಿನಲ್ ಪಿತೂರಿ ನಡೆಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರನ್ನು ನೇಮಿಸಿಕೊಂಡಿದ್ದು, ಉಗ್ರ ಕೃತ್ಯಗಳನ್ನು ಎಸಗಲು ತರಬೇತಿ ನೀಡಲು ಶಿಬಿರಗಳನ್ನು ಆಯೋಜಿಸಿವೆ. ಅವರು ಕಾನೂನುಬಾಹಿರ ಸಭೆ ಸಡೆಸಿ  ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದರು. ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಅಡ್ಡಿಪಡಿಸುವ ಚಟುವಟಿಕೆಗಳಲ್ಲಿ ಅವರು  ತೊಡಗಿಸಿಕೊಂಡಿದ್ದಾರೆ ಎಂದು ಎಫ್‌ಐಆರ್​​ನಲ್ಲಿ ಹೇಳಿದೆ.

ಮನೆಯಲ್ಲಿ ದಾಳಿ ನಡೆಸಿದಾಗ, ತೆಲಂಗಾಣ ಪೊಲೀಸರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹೆಸರಿನ ಒಂದು ಫ್ಲೆಕ್ಸ್, ಬಿದಿರಿನ ತುಂಡುಗಳು, ವೈಟ್‌ಬೋರ್ಡ್, ನಾನ್ ಚಾಕ್ಸ್, ಒಂದು ಪೋಡಿಯಂ, ನೋಟ್ ಬುಕ್‌ಗಳು, ಕೈಪಿಡಿಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಭಾರತ ಸರ್ಕಾರದ ವಿರುದ್ಧ ಹೋರಾಡಲಿರುವ ಸಂಚು ಇದಾಗಿದೆ ಎಂದು ಪೊಲೀಸರು ಹೇಳಿದ್ದಾರೆ.