ಮುಂಬೈನಲ್ಲಿ ಉಗ್ರ ದಾಳಿ ನಡೆಸುವುದಾಗಿ ಎನ್ಐಎಗೆ ಬೆದರಿಕೆ ಇಮೇಲ್; ವಿವಿಧ ನಗರಗಳಲ್ಲಿ ಕಟ್ಟೆಚ್ಚರ
ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತಾನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಈತ ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಹೇಳಿರುವುದಾಗಿ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ.
ಮುಂಬೈ: ಮುಂಬೈನಲ್ಲಿ (Mumbai) ಭಯೋತ್ಪಾದಕ ದಾಳಿ (Terror Attack) ನಡೆಸುವುದಾಗಿ ಬೆದರಿಕೆಯೊಡ್ಡಿ ತಾಲಿಬಾನಿ ಸದಸ್ಯ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA)ಮೇಲ್ ಬಂದಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ. ಮೂಲಗಳ ಪ್ರಕಾರ, ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತಾನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಈತ ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಹೇಳಿರುವುದಾಗಿ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ. ಬೆದರಿಕೆ ಮೇಲ್ ಬಂದ ನಂತರ, ಮುಂಬೈ ಪೊಲೀಸರೊಂದಿಗೆ ಎನ್‌ಐಎ ಜಂಟಿ ತನಿಖೆಯನ್ನು ಪ್ರಾರಂಭಿಸಿದೆ.
ಜನವರಿಯಲ್ಲಿ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಮಂಗಳವಾರ ಬೆದರಿಕೆ ಕರೆ ಬಂದಿತ್ತು, ಅದರಲ್ಲಿ ಅಪರಿಚಿತನೊಬ್ಬ ಶಾಲೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಮುಂಬೈ ಪೊಲೀಸರ ಪ್ರಕಾರ, ಶಾಲೆಯ ಸ್ಥಿರ ದೂರವಾಣಿಗೆ ಸಂಜೆ 4:30 ಕ್ಕೆ ಕರೆ ಬಂದಿದೆ. ಕರೆ ಮಾಡಿದವ ಶಾಲೆಯಲ್ಲಿ ಟೈಮ್ ಬಾಂಬ್ ಇಟ್ಟಿರುವುದಾಗಿ ಹೇಳಿಕೊಂಡಿದ್ದಾನೆ.
ಇದನ್ನೂ ಓದಿ: ಬಾಲ್ಯವಿವಾಹ ತಡೆ, ಅಸ್ಸಾಂನಾದ್ಯಂತ 1,800 ಮಂದಿ ಬಂಧನ; ಹಿಮಂತ ಬಿಸ್ವಾ ಶರ್ಮಾ
ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಗರದ ವಿವಿಧೆಡೆ ಬಾಂಬ್‌ಗಳನ್ನು ಇರಿಸಿರುವುದಾಗಿ ಇದೇ ರೀತಿಯ ಕರೆ ಬಂದಿತ್ತು. ಮುಂಬೈ ಪೊಲೀಸರಿಗೆ ‘ಅನುಮಾನಾಸ್ಪದ’ ಕರೆ ಬಂದಿದ್ದು, ನಗರದಾದ್ಯಂತ ಹಲವು ಪ್ರಮುಖ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ಹೇಳಿದ್ದ.
ಪೊಲೀಸರ ಪ್ರಕಾರ, ಇನ್ಫಿನಿಟಿ ಮಾಲ್ ಅಂಧೇರಿ, ಪಿವಿಆರ್ ಮಾಲ್ ಜುಹು ಮತ್ತು ಸಹಾರಾ ಹೋಟೆಲ್ ಏರ್‌ಪೋರ್ಟ್‌ನಲ್ಲಿ ಮೂರು ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಕರೆ ಬಂದಿತ್ತು. ಮುಂಬೈ ಪೊಲೀಸರು ಉದ್ದೇಶಿತ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಅಪರಿಚಿತ ಕರೆ ಮಾಡಿದವರನ್ನು ಪತ್ತೆ ಮಾಡುವ ಪ್ರಯತ್ನ ನಡೆಯುತ್ತಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ