AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 KANNADA NEWS LIVE: ರಾಜ್ಯಸಭಾ ಚುನಾವಣಾ ದಿನಾಂಕ ಘೋಷಣೆ, ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು

TV9 KANNADA NEWS LIVE: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ.ಹಾಸ್ಟೆಲ್ ಮಾಲೀಕನ ಮಗ ಮದ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ಪ್ರಸ್ತುತ ಭಾರತೀಯ ಚಿತ್ರರಂಗವು ಹೆಚ್ಚುತ್ತಿರುವ ನಿರ್ಮಾಣ ವೆಚ್ಚ ಹಾಗೂ ವ್ಯಾಪಾರ ಒಪ್ಪಂದಗಳ ಕೊರತೆಯಿಂದಾಗಿ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಮಧ್ಯಾಹ್ನದವರೆಗಿನ ಟಾಪ್ ಸುದ್ದಿಗಳ ಗುಚ್ಚ ಇಲ್ಲಿದೆ.

TV9 KANNADA NEWS LIVE: ರಾಜ್ಯಸಭಾ ಚುನಾವಣಾ ದಿನಾಂಕ ಘೋಷಣೆ, ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು
ರಾಜ್ಯಸಭೆ-ಸಿನಿಮಾ
ನಯನಾ ರಾಜೀವ್
|

Updated on:May 22, 2026 | 2:02 PM

Share

ನವದೆಹಲಿ, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ(Rajya Sabha Election) ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ.

ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಜೂನ್ 1 ರಂದು ಹೊರಡಿಸಲಾಗುವುದು. ಜೂನ್ 1 ರಿಂದ 8 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಜೂನ್ 9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಜೂನ್ 11 ರವರೆಗೆ ಸಮಯವಿರುತ್ತದೆ. ರಾಜ್ಯದಲ್ಲಿ ಜೂನ್ 18 ರಂದು ಮತದಾನ ನಡೆಯಲಿದೆ. ಅಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ.

ಮಧ್ಯಾಹ್ನದವರೆಗಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು ವಿದೇಶಿ ಏಜೆಂಟ್‌ಗಳಿಗೆ ಎಲೆಕ್ಟ್ರಾನಿಕ್ ರೂಪದಲ್ಲಿ ಕಳುಹಿಸುತ್ತಿದ್ದ. ಈ ಕೆಲಸಕ್ಕಾಗಿ ದುಬೈನಲ್ಲಿರುವ ಅಪರಿಚಿತ ವ್ಯಕ್ತಿಯಿಂದ ಈತನಿಗೆ ನಿರ್ದೇಶನಗಳು ಬರುತ್ತಿದ್ದವು ಮತ್ತು ಅದಕ್ಕಾಗಿ 40,000 ರೂ. ಹಣವನ್ನೂ ನೀಡಲಾಗಿತ್ತು. ಸದ್ಯ ಪೊಲೀಸರು ಈತನಿಂದ ಕ್ಯಾಮೆರಾ ಮತ್ತು ವೈಫೈ ರೂಟರ್ ವಶಪಡಿಸಿಕೊಂಡಿದ್ದು, ಜಾಲದಲ್ಲಿದ್ದ ಉಳಿದ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​

ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ ಹಾಸ್ಟೆಲ್ ಮಾಲೀಕನ ಮಗ ಮದ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ಶಿವಕುಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ಅಮೇಥಿ ಮೂಲದ ಇಬ್ಬರು ವಿದ್ಯಾರ್ಥಿನಿಯರ ಕೋಣೆಗೆ ಹಾಸ್ಟೆಲ್ ಮಾಲೀಕನ ಮಗ ಶುಭಂ ದ್ವಿವೇದಿ ಎಂಬಾತ ನುಗ್ಗಿದ್ದಾನೆ. 18 ರಂದು ಮಧ್ಯರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಆರೋಪಿ, ವಿದ್ಯಾರ್ಥಿನಿಯರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ, ಅವರ ಕೂದಲನ್ನು ಹಿಡಿದು ಎಳೆದಾಡಿ ವಿಕೃತ ಅಟ್ಟಹಾಸ ಮೆರೆದಿದ್ದಾನೆ. ಈ ಭೀಕರ ದೃಶ್ಯದ 30 ಸೆಕೆಂಡುಗಳ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕಳೆದ 10 ದಿನಗಳಿಂದ ಆರೋಪಿ ತಮಗೆ ಫೋನ್ ಹಾಗೂ ಸಂದೇಶಗಳ ಮೂಲಕ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ, ನಡೆದಿದ್ದೇನು?

ಮೊಬೈಲ್​ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮನೆಬಿಟ್ಟು ಹೋದ ಮೂವರು ಮಕ್ಕಳು ಮೊಬೈಲ್​(Mobile)ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮೂವರು ಅಪ್ರಾಪ್ತ ಮಕ್ಕಳು ಮನೆ ಬಿಟ್ಟು ಹೋಗಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. ಫ್ರೀ ಫೈರ್ ಗೇಮ್ ದಿನವಿಡೀ ಆಡುತ್ತಿದ್ದರು, ಇದಕ್ಕೆ ಕೋಪಗೊಂಡ ತಂದೆ ಗೇಮ್ ಆಡಬೇಡಿ ಎಂದು ಮೊಬೈಲ್ ಕಿತ್ತಿಟ್ಟುಕೊಂಡಿದ್ದರು. ಮೂವರು ಮನೆಯಿಂದ 15,000 ರೂ. ತೆಗೆದುಕೊಂಡು ಹೋಗಿದ್ದಾರೆಂದು ಆರೋಪಿಸಲಾಗಿದೆ. ಅವರು ಮುಂಬೈ ರೈಲು ಹತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಪೊಲೀಸರ ಪ್ರಕಾರ ಕಾಣೆಯಾದ ಮಕ್ಕಳ ವಯಸ್ಸು 14, 11 ಮತ್ತು 9 ವರ್ಷ, ಅವರಲ್ಲಿ ಒಬ್ಬ ಬಾಲಕಿ ಕೂಡ ಇದ್ದಾಳೆ. ಮೇ 19ರ ಬೆಳಗಿನ ಜಾವ ಕುಟುಂಬದವರೆಲ್ಲಾ ಮಲಗಿರುವಾಗ ಅವರು ಮನೆಯಿಂದ ಓಡಿ ಹೋಗಿದ್ದಾರೆ.

ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ ಪ್ರಸ್ತುತ ಭಾರತೀಯ ಚಿತ್ರರಂಗವು ಹೆಚ್ಚುತ್ತಿರುವ ನಿರ್ಮಾಣ ವೆಚ್ಚ ಹಾಗೂ ವ್ಯಾಪಾರ ಒಪ್ಪಂದಗಳ ಕೊರತೆಯಿಂದಾಗಿ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಸಿನಿಮಾಗಳು ಬಿಡುಗಡೆಗೆ ಮುನ್ನವೇ ಹೂಡಿಕೆಯನ್ನು ಮರಳಿ ಪಡೆಯುವುದು ನಿರ್ಮಾಪಕರಿಗೆ ಸವಾಲಾಗಿ ಪರಿಣಮಿಸಿದೆ. ಚಿತ್ರದ ಸ್ಟಾರ್ ನಟರು ಅಥವಾ ಬಜೆಟ್ ಎಷ್ಟು ದೊಡ್ಡದಾಗಿದ್ದರೂ, ಬಿಡುಗಡೆಯಾಗುವ ಟೀಸರ್ ಮತ್ತು ಟ್ರೈಲರ್‌ಗಳು ಪ್ರೇಕ್ಷಕರನ್ನು ಸೆಳೆಯಲು ವಿಫಲವಾದರೆ, ಒಟಿಟಿ ಹಾಗೂ ಥಿಯೇಟ್ರಿಕಲ್ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಮಾರಾಟ ಮಾಡುವುದು ಕಷ್ಟಸಾಧ್ಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ: ಕುದುರುತ್ತಿಲ್ಲ ಡೀಲ್

ಮಗಳಿಗೆ ಮಾತು ಕೊಟ್ಟಿದ್ದ ತಂದೆ, ಆ ತಂದೆಯ ಮಾತು ಈಡೇರಿಸಿದ ಚಿರಂಜೀವಿ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಅಭಿಮಾನಿಗಳ ನಟ. ಇತರೆ ಸ್ಟಾರ್ ನಟರುಗಳಂತೆ ಜನರೊಟ್ಟಿಗೆ ಹೆಚ್ಚು ಅಂತರ ಕಾಯ್ದುಕೊಳ್ಳುವುದಿಲ್ಲ. ಚಿರಂಜೀವಿಯನ್ನು ನೋಡಲು ಕೆಲವರು ಪಾದಯಾತ್ರೆ ಮಾಡುತ್ತಾ, ಕೆಲವರು ನೂರಾರು ಕಿ.ಮೀ ಸೈಕಲ್ ತುಳಿಯುತ್ತ ಬರುತ್ತಾರೆ ಎಲ್ಲರನ್ನೂ ಪ್ರೀತಿಯಿಂದ ಎದುರುಗೊಂಡು ಮನೆಯಲ್ಲಿ ಊಟ ಮಾಡಿಸಿ ಕಳಿಸುತ್ತಾರೆ ನಟ. ಇದೀಗ ತಂದೆಯೊಬ್ಬ ತಮ್ಮ ಮಗಳಿಗೆ ಕೊಟ್ಟಿದ್ದ ಮಾತನ್ನು ಈಡೇರಿಸಲು ಮೆಗಾಸ್ಟಾರ್ ಚಿರಂಜೀವಿ ನೆರವಾಗಿದ್ದಾರೆ. ತೆಲಂಗಾಣದ ಎಮ್ ರುಶಿ, ಇತ್ತೀಚೆಗೆ ಫಲಿತಾಂಶ ಪ್ರಕಟವಾದ TEGAPCET ಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಸಂಪಾದಿಸಿದ್ದಾರೆ. ರುಶಿ, ಮೆಗಾಸ್ಟಾರ್ ಚಿರಂಜೀವಿ ಅವರ ಅಪ್ಪಟ ಅಭಿಮಾನಿ. ಪರೀಕ್ಷೆಗೂ ಮುನ್ನ ಅವರ ರುಶಿ ಅವರ ತಂದೆ ಮಗಳಿಗೆ ಮಾತು ಕೊಟ್ಟಿದ್ದರಂತೆ, ‘ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದರೆ ಚಿರಂಜೀವಿ ಅವರನ್ನು ಭೇಟಿ ಮಾಡಿಸುತ್ತೇನೆ’ ಎಂದು. ಆದರಂತೆ ಚೆನ್ನಾಗಿ ಓದಿದ ರುಶಿ, ತೆಲಂಗಾಣ ರಾಜ್ಯ ಎಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ ಸಿಇಟಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕು ಗಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:00 pm, Fri, 22 May 26

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More