Bharat Bandh on August 21: ಆಗಸ್ಟ್ 21ರಂದು ಭಾರತ್ ಬಂದ್; ಏನಿರುತ್ತದೆ, ಏನಿರುವುದಿಲ್ಲ?

ಸುಪ್ರೀಂಕೋರ್ಟ್‌ನ ತೀರ್ಪು ಎಸ್‌ಸಿ ಮತ್ತು ಎಸ್‌ಟಿ ಗುಂಪುಗಳೊಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿದ್ದು,"ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು" ಎಂದು ಹೇಳಿದೆ. ಈ ನಿರ್ಧಾರವು ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮೀಸಲಾತಿ ಕುರಿತ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು ಹಿಂಪಡೆಯುವಂತೆ ಒತ್ತಾಯಿಸುವುದು ಭಾರತ್ ಬಂದ್‌ನ ಮುಖ್ಯ ಉದ್ದೇಶ.

Bharat Bandh on August 21: ಆಗಸ್ಟ್ 21ರಂದು ಭಾರತ್ ಬಂದ್; ಏನಿರುತ್ತದೆ, ಏನಿರುವುದಿಲ್ಲ?
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Aug 20, 2024 | 1:01 PM

ದೆಹಲಿ ಆಗಸ್ಟ್ 20: ಎಸ್‌ಸಿ/ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂಕೋರ್ಟ್‌ನ (Supreme Court) ತೀರ್ಪಿನ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಿಸರ್ವೇಶನ್ ಬಚಾವೋ ಸಂಘರ್ಷ್ ಸಮಿತಿಯು ಆಗಸ್ಟ್ 21 ರಂದು ಅಂದರೆ ನಾಳೆ ಭಾರತ್ ಬಂದ್​​​ಗೆ (Bharat Bandh) ಕರೆ ನೀಡಿದೆ. ರಾಜಸ್ಥಾನದ ಎಸ್‌ಸಿ/ಎಸ್‌ಟಿ ಗುಂಪುಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಅಂದ ಹಾಗೆ ಕರ್ನಾಟಕದಲ್ಲಿ ಈ ಬಂದ್ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಯಾವುದೇ ಉದ್ವಿಗ್ನತೆಯನ್ನು ತಪ್ಪಿಸಲು ಎಲ್ಲಾ ಜಿಲ್ಲೆಗಳಾದ್ಯಂತ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು. ಭಾರತ್ ಬಂದ್‌ಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಎಸ್‌ಪಿಗಳಿಗೂ ಸೂಚನೆ ನೀಡಲಾಗಿದೆ ಎಂದು ಡಿಜಿಪಿ ಯುಆರ್ ಸಾಹೂ ಹೇಳಿದ್ದಾರೆ.

ಉತ್ತಮ ಸಹಕಾರಕ್ಕೆ ಅನುಕೂಲವಾಗುವಂತೆ ಬಂದ್‌ಗೆ ಕರೆ ನೀಡುವ ಗುಂಪುಗಳೊಂದಿಗೆ ಮತ್ತು ಮಾರುಕಟ್ಟೆ ಸಂಘಗಳೊಂದಿಗೆ ಸಭೆಗಳನ್ನು ಆಯೋಜಿಸಲು ನಾವು ನಮ್ಮ ಅಧಿಕಾರಿಗಳನ್ನು ಕೇಳಿದ್ದೇವೆ ”ಎಂದು ಡಿಜಿಪಿ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಭಾರತ್ ಬಂದ್​​ಗೆ ಕರೆ ನೀಡಿರುವುದೇಕೆ?

ಹಲವಾರು ವರದಿಗಳ ಪ್ರಕಾರ, ಸುಪ್ರೀಂಕೋರ್ಟ್‌ನ ತೀರ್ಪು ಎಸ್‌ಸಿ ಮತ್ತು ಎಸ್‌ಟಿ ಗುಂಪುಗಳೊಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿದ್ದು,”ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು” ಎಂದು ಹೇಳಿದೆ. ಈ ನಿರ್ಧಾರವು ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮೀಸಲಾತಿ ಕುರಿತ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು ಹಿಂಪಡೆಯುವಂತೆ ಒತ್ತಾಯಿಸುವುದು ಭಾರತ್ ಬಂದ್‌ನ ಮುಖ್ಯ ಉದ್ದೇಶವಾಗಿದೆ ಎಂದು ವರದಿಗಳು ತಿಳಿಸಿವೆ.

ಭಾರತ್ ಬಂದ್ 2024: ಭದ್ರತಾ ಕ್ರಮಗಳು ಏನೇನು?

ಬಂದ್ ವೇಳೆ ಹಿಂಸಾಚಾರದ ಸಾಧ್ಯತೆಯ ಹಿನ್ನೆಲೆಯಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಸಿದ್ಧತೆಗಾಗಿ ಸಭೆ ನಡೆಸಿದ್ದಾರೆ. ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ: ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚನೆಗೆ ಸುಪ್ರೀಂ ಸೂಚನೆ

ಪಶ್ಚಿಮ ಉತ್ತರ ಪ್ರದೇಶವನ್ನು ವಿಶೇಷವಾಗಿ ಸೂಕ್ಷ್ಮವೆಂದು ಪರಿಗಣಿಸಲಾಗಿದೆ. ಈ ಕಾರಣದಿಂದಾಗಿ ಇಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ವ್ಯಾಪಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.  ಅಂತಹ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ಕಚೇರಿಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುವುದಿಲ್ಲ, ಆಂಬ್ಯುಲೆನ್ಸ್‌ಗಳಂತಹ ತುರ್ತು ಸೇವೆಗಳು ಕಾರ್ಯನಿರ್ವಹಿಸಲಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ