AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡಿನಲ್ಲಿ ಗುಡ್ಡ ಕುಸಿತ ದುರಂತಕ್ಕೆ ಮುನ್ನ ಬದಲಾಗಿತ್ತು ನದಿ ನೀರಿನ ಬಣ್ಣ; ಇದಾಗಿತ್ತೇ ಅಪಾಯದ ಸೂಚನೆ?

ಕೇರಳ ಕಂಡ ಅತಿದೊಡ್ಡ ಭೂಕುಸಿತಕ್ಕೆ ಮುನ್ನ ವಯನಾಡಿನಲ್ಲಿ ನದಿ ನೀರಿನ ಬಣ್ಣ ಬದಲಾಗಿತ್ತು.  ಪಂಚಾಯಿತ್ ಅಧಿಕಾರಿಗಳು ಹಲವರನ್ನು ಸ್ಥಳಾಂತರಿಸಿದ್ದರು. ಅಪಾಯದ ಎಚ್ಚರಿಕೆಯನ್ನೂ ನೀಡಲಾಗಿತ್ತು. ಆಗಲಿರುವ ಅನಾಹುತವನ್ನು ಊಹಿಸಲು ಸಾಧ್ಯವಾಗದೆ ಮಂಗಳವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಮುಂಡಕೈಯಲ್ಲಿ ಜನರು ಮಲಗಿದ್ದಾಗಲೇ ಮೊದಲ ಭೂಕುಸಿತ ಸಂಭವಿಸಿದೆ.

ವಯನಾಡಿನಲ್ಲಿ ಗುಡ್ಡ ಕುಸಿತ ದುರಂತಕ್ಕೆ ಮುನ್ನ ಬದಲಾಗಿತ್ತು ನದಿ ನೀರಿನ ಬಣ್ಣ; ಇದಾಗಿತ್ತೇ ಅಪಾಯದ ಸೂಚನೆ?
ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆ
ರಶ್ಮಿ ಕಲ್ಲಕಟ್ಟ
|

Updated on: Jul 30, 2024 | 8:49 PM

Share

ಕಲ್ಪೆಟ್ಟಾ ಜುಲೈ 30: ಕೇರಳದ ವಯನಾಡಿನಲ್ಲಿ (Wayanad landslide) ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 120 ದಾಟಿದೆ. ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಭೂಕುಸಿತದಿಂದ ಭಾರಿ ಹಾನಿಗೀಡಾದ ಚೂರಲ್​​ಮಲದಲ್ಲಿ (Chooralmala) ತಾತ್ಕಾಲಿಕ ಸೇತುವೆಯ ನಿರ್ಮಾಣ ಪೂರ್ಣಗೊಂಡಿದೆ. ಈ ಸೇತುವೆಯನ್ನು ಸೇನೆ ಮತ್ತು ಕೇರಳ ಅಗ್ನಿಶಾಮಕ ದಳ ಜಂಟಿಯಾಗಿ ನಿರ್ಮಿಸಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ಮುಂದುವರಿಯಲಿದೆ. ಇಂದು (ಮಂಗಳವಾರ) ಮಧ್ಯಾಹ್ನ, ಸೇನೆ ಮತ್ತು ಎನ್‌ಡಿಆರ್‌ಎಫ್ ಒಳಗೊಂಡ ಮಿಷನ್ ತಂಡವು ನದಿಯನ್ನು ದಾಟಿ ಮುಂಡಕೈ ತಲುಪಿತು. ಮುಂಡಕೈಯಲ್ಲಿ ದುರಂತ ಭೂಮಿಯಲ್ಲಿ ಸಿಲುಕಿದ್ದ ಸುಮಾರು 100 ಮಂದಿ ಪತ್ತೆಯಾಗಿದ್ದಾರೆ. ನದಿಯ ಮೇಲೆ ಹಗ್ಗ ಕಟ್ಟಿ ಅವರನ್ನು ಕಾಪಾಡುವ ಪ್ರಯತ್ನ ನಡೆಯುತ್ತಿದೆ.

ತಾತ್ಕಾಲಿಕ ಸೇತುವೆ ನಿರ್ಮಾಣದ ನಂತರ ರಕ್ಷಣಾ ಕಾರ್ಯಾಚರಣೆ ಚುರುಕುಗೊಳ್ಳುವ ನಿರೀಕ್ಷೆಯಿದೆ. ಕಣ್ಣೂರಿನ ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್ (ಡಿಎಸ್‌ಸಿ) ಕೇಂದ್ರದಿಂದ 200 ಸೈನಿಕರೊಂದಿಗೆ ಭಾರತೀಯ ಸೇನೆಯ ಎರಡು ವಿಭಾಗಗಳು ವಯನಾಡ್ ತಲುಪಿವೆ. ಸೇನಾ ಮೂಲಗಳ ಪ್ರಕಾರ, ಕಣ್ಣೂರಿನ ಮಿಲಿಟರಿ ಆಸ್ಪತ್ರೆಯ ವೈದ್ಯಕೀಯ ತಂಡ ಮತ್ತು ಕೋಝಿಕ್ಕೋಡ್‌ನಿಂದ ಟೆರಿಟೋರಿಯಲ್ ಆರ್ಮಿಯ ಪಡೆಗಳನ್ನು ವಯನಾಡ್‌ಗೆ ನಿಯೋಜಿಸಲಾಗಿದೆ.

ಬದಲಿತ್ತು  ನದಿ ನೀರಿನ ಬಣ್ಣ; ಅಪಾಯದ ಮುನ್ಸೂಚನೆ?

ಕೇರಳ ಕಂಡ ಅತಿದೊಡ್ಡ ಭೂಕುಸಿತಕ್ಕೆ ಮುನ್ನ ನದಿ ನೀರಿನ ಬಣ್ಣ ಬದಲಾಗಿತ್ತು.  ಪಂಚಾಯಿತ್ ಅಧಿಕಾರಿಗಳು ಹಲವರನ್ನು ಸ್ಥಳಾಂತರಿಸಿದ್ದರು. ಅಪಾಯದ ಎಚ್ಚರಿಕೆಯನ್ನೂ ನೀಡಲಾಗಿತ್ತು. ಆಗಲಿರುವ ಅನಾಹುತವನ್ನು ಊಹಿಸಲು ಸಾಧ್ಯವಾಗದೆ ಮಂಗಳವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಮುಂಡಕೈಯಲ್ಲಿ ಜನರು ಮಲಗಿದ್ದಾಗಲೇ ಮೊದಲ ಭೂಕುಸಿತ ಸಂಭವಿಸಿದೆ. ಘಟನೆಯ ವಿಚಾರ ತಿಳಿದು ಮೇಪ್ಪಾಡಿಯಿಂದ ಹಲವರು ಮುಂಡಕೈಗೆ ಬಂದಿದ್ದರು. ಚೂರಲ್‌ಮಲ ನಿವಾಸಿಗಳು ಇದ್ಯಾವುದೂ ಗೊತ್ತೇ ಆಗಲಿಲ್ಲ,

ಬೆಳಗಿನ ಜಾವ 4.10ರ ವೇಳೆಗೆ ಎರಡನೇ ಬಾರಿಗೆ ಭೂಕುಸಿತ ಸಂಭವಿಸಿದ್ದು, ಚೂರಲ್​​ಮಲದಲ್ಲಿ ಬಂದ ಕೆಸರು ಹಾಗೂ ಬೇರೆ ಬೇರೆ ಕಡೆ ಹರಿದ ನದಿ ನೀರು, ಜನರ ಜೀವ ಮತ್ತು ಮನೆಗಳನ್ನು ಬಲಿ ತೆಗೆದುಕೊಂಡಿತ್ತು. ಇಲ್ಲಿಂದ ಮೃತದೇಹಗಳು ಸುಮಾರು ಎರಡೂವರೆ ಕಿಲೋಮೀಟರ್ ಕೊಚ್ಚಿ ಹೋಗಿದೆ. ಮೇಪ್ಪಾಡಿ, ಮುಂಡಕೈ, ಚೂರಲ್‌ಮಲ ಸೇರಿದಂತೆ ಹಲವೆಡೆ ಗ್ರಾಮಗಳು ಸಂಪರ್ಕ ಕಡಿದುಕೊಂಡಿತ್ತು.

ಈ ಪ್ರದೇಶದಲ್ಲಿ ಹತ್ತು ಮನೆಗಳು ಮಾತ್ರ ಉಳಿದಿವೆ. ಸುಮಾರು 150 ಮನೆಗಳು ನಾಶವಾಗಿವೆ. ರಕ್ಷಣಾ ಕಾರ್ಯಕರ್ತರು ಅವಶೇಷಗಳನ್ನು ಸ್ಥಳಾಂತರಿಸಿ ಪರಿಶೀಲನೆ ನಡೆಸುತ್ತಿದ್ದು, ಕುಸಿದಿರುವ ಮನೆಗಳಲ್ಲಿ ಜನರಿರಬಹುದು ಎಂದು ಹುಡುಕಾಟ ನಡೆಸುತ್ತಿದ್ದಾರೆ. ಐದು ಸದಸ್ಯರಿದ್ದ ಎರಡು ಕುಟುಂಬಗಳ ಮನೆಗಳು ಸಂಪೂರ್ಣ ನಾಶವಾಗಿವೆ. ಆ ಹತ್ತು ಜನರಲ್ಲಿ ಒಬ್ಬರ ದೇಹ ಮಾತ್ರ ಪತ್ತೆಯಾಗಿದೆ.

ಇದನ್ನೂ ಓದಿ: ಕಳೆದ 10 ವರ್ಷಗಳಲ್ಲಿ ಕೇರಳವನ್ನು ನಡುಗಿಸಿದ ಗುಡ್ಡ ಕುಸಿತ ದುರಂತಗಳಿವು

ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರ ಕುಟುಂಬಗಳು ವಾಸಿಸುತ್ತಿದ್ದ ಮುಂಡಕೈ ಕೊಳೆಗೇರಿಗಳು ಕೊಚ್ಚಿಹೋಗಿವೆ. ಎಚ್ಚರಿಕೆಯನ್ನು ಅನುಸರಿಸಿ ಸುಮಾರು 50 ಜನರು ತಮ್ಮ ಹೆಂಡತಿ ಮತ್ತು ಮಕ್ಕಳೊಂದಿಗೆ ಈ ಗುಂಪನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ. ಉಳಿದವರ ಬಗ್ಗೆ ಯಾವುದೇ ಸೂಚನೆ ಇಲ್ಲ ಎಂದು ಮಲಯಾಳ ಮನೋರಮ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು