AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಿ ಮುಂಬೈನ ರೆಸ್ಟೋರೆಂಟ್​ನಲ್ಲಿ ಭಾರಿ ಸ್ಫೋಟ, 100 ಮೀಟರ್ ದೂರದ ಆಸ್ಪತ್ರೆ ಕಿಟಕಿಗಳು ಪುಡಿಪುಡಿ, ಇಬ್ಬರಿಗೆ ಗಂಭೀರ ಗಾಯ

ನವಿ ಮುಂಬೈನ ಸಾನ್ಪಾಡಾ ಸೆಕ್ಟರ್-1ರಲ್ಲಿರುವ ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಭೀಕರ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸುತ್ತಮುತ್ತಲಿನ ಕಟ್ಟಡಗಳು ಮತ್ತು ಆಸ್ಪತ್ರೆಯ ಕಿಟಕಿಗಳು ಹಾನಿಗೊಳಗಾಗಿವೆ. ಮುಂಜಾನೆ ಸಂಭವಿಸಿದ ಈ ದುರಂತಕ್ಕೆ ಗ್ಯಾಸ್ ಸೋರಿಕೆಯೇ ಕಾರಣ ಎಂದು ಶಂಕಿಸಲಾಗಿದೆ. ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ತನಿಖೆ ನಡೆಸುತ್ತಿದ್ದು, ರೆಸ್ಟೋರೆಂಟ್‌ನ ಸುರಕ್ಷತಾ ನಿಯಮಗಳು ಮತ್ತು ಪರವಾನಗಿಗಳನ್ನು ಪರಿಶೀಲಿಸಲಾಗುತ್ತಿದೆ.

ನವಿ ಮುಂಬೈನ ರೆಸ್ಟೋರೆಂಟ್​ನಲ್ಲಿ ಭಾರಿ ಸ್ಫೋಟ, 100 ಮೀಟರ್ ದೂರದ ಆಸ್ಪತ್ರೆ ಕಿಟಕಿಗಳು ಪುಡಿಪುಡಿ, ಇಬ್ಬರಿಗೆ ಗಂಭೀರ ಗಾಯ
ಸ್ಫೋಟImage Credit source: ANI
ನಯನಾ ರಾಜೀವ್
|

Updated on: Sep 15, 2026 | 3:19 PM

Share

ಮುಂಬೈ, ಸೆಪ್ಟೆಂಬರ್ 15: ನವಿ ಮುಂಬೈನ ಸಾನ್ಪಾಡಾ ಸೆಕ್ಟರ್-1 ರಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸುತ್ತಮುತ್ತಲಿನ ಹಲವು ಮಳಿಗೆಗಳು ಧ್ವಂಸಗೊಂಡಿವೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸಮೀಪದ 5-6 ಅಂಗಡಿಗಳ ಶಟರ್‌ಗಳು ಕಿತ್ತುಬಂದಿದ್ದು, ರಸ್ತೆ ಹಾಗೂ ಫ್ಲೈಓವರ್ ಆಚೆಗಿದ್ದ ಸುಮಾರು 100 ಮೀಟರ್ ದೂರದ ಸೂರಜ್ ಆಸ್ಪತ್ರೆಯ ಗಾಜುಗಳು ಒಡೆದುಹೋಗಿವೆ. ಮೇಲ್ನೋಟಕ್ಕೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳ: ಸಾನ್ಪಾಡಾ ಸೆಕ್ಟರ್-1 ರ ಪ್ರತೀಕ್ಷಾ ಕಟ್ಟಡದಲ್ಲಿರುವ ‘ಸಾಗರ್ ಫ್ಯಾಮಿಲಿ ರೆಸ್ಟೋರೆಂಟ್’ ಒಳಗೆ ಈ ಸ್ಫೋಟ ಸಂಭವಿಸಿದೆ. ಮುಂಜಾನೆ ವಾರ್ನಿಂಗ್ ಇಲ್ಲದೆ ಸಂಭವಿಸಿದ ಈ ಸ್ಫೋಟದ ಸದ್ದು ಬರೋಬ್ಬರಿ ಒಂದು ಕಿಲೋಮೀಟರ್ ದೂರದವರೆಗೂ ಕೇಳಿಸಿದ್ದು, ಮುಂಜಾನೆಯ ವಾಯುವಿಹಾರಕ್ಕೆ ತೆರಳಿದ್ದ ಸಾರ್ವಜನಿಕರು ಆತಂಕದಿಂದ ಬೆಚ್ಚಿಬಿದ್ದಿದ್ದಾರೆ.

ಇಬ್ಬರ ಸ್ಥಿತಿ ಗಂಭೀರ: ರೆಸ್ಟೋರೆಂಟ್ ಒಳಗೆ ತಂಗಿದ್ದ ಇಬ್ಬರು ವ್ಯಕ್ತಿಗಳು ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ತದ ಮಡುವಿನಲ್ಲಿದ್ದ ಅವರನ್ನು ತಕ್ಷಣವೇ ವಾಶಿಯಲ್ಲಿರುವ ನವಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (NMMC) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಅದೃಷ್ಟವಶಾತ್ ಸ್ಫೋಟದ ನಂತರ ಸ್ಥಳದಲ್ಲಿ ಯಾವುದೇ ಬೆಂಕಿ ಹೊತ್ತಿಕೊಳ್ಳದ ಕಾರಣ ಭಾರೀ ಅಗ್ನಿ ದುರಂತ ತಪ್ಪಿದೆ.

ಮತ್ತಷ್ಟು ಓದಿ: ದೆಹಲಿಯ ಓಖ್ಲಾದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ವಿಧಿವಿಜ್ಞಾನ ತಂಡದಿಂದ ಪರಿಶೀಲನೆ: ಮಾಹಿತಿ ತಿಳಿಯುತ್ತಿದ್ದಂತೆ ಹತ್ತಿರದ ಠಾಣೆಯ ಪೊಲೀಸರು, ಬಾಂಬ್ ಪತ್ತೆ ಹಾಗೂ ವಿಧಿವಿಜ್ಞಾನ (Forensic) ತಜ್ಞರು ಸ್ಥಳಕ್ಕೆ ದೌಡಾಯಿಸಿ ಅವಶೇಷಗಳು ಮತ್ತು ಮಾದರಿಗಳನ್ನು ಸಂಗ್ರಹಿಸಿದ್ದಾರೆ. ರಾತ್ರಿ ವೇಳೆ ಗ್ಯಾಸ್ ಸಿಲಿಂಡರ್ ವಾಲ್ವ್‌ನಿಂದ ಅನಿಲ ಸೋರಿಕೆಯಾಗಿ ಇಡೀ ಕೊಠಡಿಯಲ್ಲಿ ತುಂಬಿಕೊಂಡಿತ್ತೇ ಅಥವಾ ಮುಂಜಾನೆ ಲೈಟ್ ಸ್ವಿಚ್ ಹಾಕಿದಾಗ ಸ್ಪಾರ್ಕ್ ಉಂಟಾಗಿ ಬ್ಲಾಸ್ಟ್ ಸಂಭವಿಸಿತೇ ಎಂಬ ಕೋನದಲ್ಲಿ ತನಿಖೆ ನಡೆಸಲಾಗುತ್ತಿದೆ.

ವಿಡಿಯೋ

ಸುರಕ್ಷತಾ ನಿಯಮಗಳ ಪರಿಶೀಲನೆ: ವಸತಿ ಕಟ್ಟಡದ ಕೆಳಭಾಗದಲ್ಲಿ ವಾಣಿಜ್ಯ ಸಿಲಿಂಡರ್‌ಗಳನ್ನು ಬಳಸುವಾಗ ಕಡ್ಡಾಯವಾಗಿ ಪಾಲಿಸಬೇಕಾದ ಸುರಕ್ಷತಾ ಕ್ರಮಗಳು ಮತ್ತು ಅಗ್ನಿಶಾಮಕ ಪರವಾನಗಿಯನ್ನು ರೆಸ್ಟೋರೆಂಟ್ ಹೊಂದಿತ್ತೇ ಎಂಬುದನ್ನು ಪಾಲಿಕೆ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ