AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಾತ್ಮಕ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಸಿಗಬೇಕೆಂದರೆ "500 ಕೋಟಿ" ರೂ. ಕೊಡಬೇಕು ಎಂದು ಹೇಳಿಕೆ ನೀಡಿದ ಬಳಿಕ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅವರು ಸ್ಪಷ್ಟೀಕರಣ ನೀಡಿದ್ದರೂ ಅದು ಕಾಂಗ್ರೆಸ್​​ಗೆ ಸಮಾಧಾನ ತರಲಿಲ್ಲ. 

ವಿವಾದಾತ್ಮಕ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
Navjot Kaur
ಸುಷ್ಮಾ ಚಕ್ರೆ
|

Updated on: Dec 08, 2025 | 8:13 PM

Share

ಚಂಡೀಗಢ, ಡಿಸೆಂಬರ್ 8: ಕ್ರಿಕೆಟಿಗ-ರಾಜಕಾರಣಿ, ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಪತ್ನಿ ನವಜೋತ್ ಕೌರ್ ಸಿಧು ಸಿಎಂ ಸ್ಥಾನಕ್ಕೆ “500 ಕೋಟಿ ರೂ.ಗಳ ಸೂಟ್‌ಕೇಸ್” ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಹೈಕಮಾಂಡ್​​ಗೆ ಮುಜುಗರ ತಂದಿದ್ದರು. ಅವರ ವಿವಾದಾತ್ಮಕ ಹೇಳಿಕೆಯ ಬಳಿಕ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತುಗೊಳಿಸಿದೆ.

“500 ಕೋಟಿ ರೂ. ಸೂಟ್‌ಕೇಸ್ ನೀಡುವವರು ಮುಖ್ಯಮಂತ್ರಿಯಾಗುತ್ತಾರೆ” ಎಂಬ ಅವರ ಹೇಳಿಕೆಯಿಂದ ನವಜೋತ್ ಕೌರ್ ಭಾರಿ ವಿವಾದಕ್ಕೀಡಾಗಿದ್ದರು. ಇದರಿಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆರೋಪಗಳನ್ನು ಮಾಡಿತ್ತು. ಆಮ್ ಆದ್ಮಿ ಪಕ್ಷ ಕೂಡ ಕಾಂಗ್ರೆಸ್ ವಿರುದ್ಧ ಈ ಹೇಳಿಕೆಯನ್ನು ದಾಳವಾಗಿಸಿಕೊಂಡಿತ್ತು.

ಇದನ್ನೂ ಓದಿ: ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಪತ್ನಿಯ ಸಿಎಂ ಸ್ಥಾನಕ್ಕೆ 500 ಕೋಟಿ ರೂ. ಹೇಳಿಕೆ; ಬಿಜೆಪಿ ಆಕ್ರೋಶ

ತನ್ನ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಕಾಂಗ್ರೆಸ್ ನಾಯಕಿಯೂ ಆಗಿರುವ ನವಜೋತ್ ಕೌರ್, “ನಮ್ಮ ಕಾಂಗ್ರೆಸ್ ಪಕ್ಷವು ನಮ್ಮಿಂದ ಎಂದಿಗೂ ಏನನ್ನೂ ಬೇಡಿಕೆ ಇಟ್ಟಿಲ್ಲ. ಬೇರೆ ಪಕ್ಷದಿಂದ ನಮಗೆ ಸಿಎಂ ಸ್ಥಾನದ ಆಮಿಷವಿದೆಯೇ ಎಂದು ಕೇಳಿದಾಗ ನಾನು ಸಿಎಂ ಹುದ್ದೆಗೆ ನೀಡಲು ನಮ್ಮಲ್ಲಿ 500 ಕೋಟಿ ರೂ. ಹಣವಿಲ್ಲ ಎಂದು ಹೇಳಿದ್ದೆ. ನಮ್ಮ ಪಕ್ಷದ ಬಗ್ಗೆ ನಾನು ಮಾತಾಡಿಲ್ಲ, ಬೇರೆ ಪಕ್ಷಕ್ಕೆ ಆ ಮಾತು ಹೇಳಿದ್ದೆ” ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ವಂದೇ ಮಾತರಂ ಕುರಿತ ನೆಹರು ಪತ್ರ ಓದಿದ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ತರಾಟೆ

ಸಾಮಾಜಿಕ ಮಾಧ್ಯಮದಲ್ಲಿ ಅವರು ಸ್ಪಷ್ಟೀಕರಣ ನೀಡಿದ್ದರೂ ಅದು ಕಾಂಗ್ರೆಸ್​​ಗೆ ಸಮಾಧಾನ ತರಲಿಲ್ಲ. ಅವರ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್​ ಮುಜುಗರಕ್ಕೀಡಾಗಿದ್ದರಿಂದ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್