ದೆಹಲಿ: ಚಂಡಿಗಡದಲ್ಲಿ 1988ರಲ್ಲಿ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಬೇಕಾಗಿರುವ ನವಜೋತ್ ಸಿಂಗ್ ಸಿಧು (Navjot Singh Sidhu) ನ್ಯಾಯಾಲಯಕ್ಕೆ ಶರಣಾಗಲು ಒಂದು ವಾರ ಕಾಲಾವಕಾಶ ಬೇಕು ಎಂದು ಸುಪ್ರೀಂಕೋರ್ಟ್ಗೆ ವಿನಂತಿಸಿದ್ದಾರೆ. ಪಂಜಾಬ್ನ ಮಾಜಿ ಸಚಿವರೂ ಆಗಿರುವ ಸಿಧು ಹಿಂದೆ ಭಾರತ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದರು. 1988ರ ಡಿ.27ರಂದು ಪಾಟಿಯಾಲದಲ್ಲಿ ವೃದ್ಧರೊಬ್ಬರ ಮೇಲೆ ಸಿಧು ಹಲ್ಲೆ ನಡೆಸಿದ್ದರು. ಚಿಕಿತ್ಸೆ ಫಲಿಸದ ಕಾರಣ ವೃದ್ಧರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧುಗೆ ನಿನ್ನೆ (ಮೇ 19) ಸುಪ್ರೀಂಕೋರ್ಟ್ ನಿನ್ನೆ ಶಿಕ್ಷೆ ವಿಧಿಸಿತ್ತು.
34 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಶರಣಾಗಲು ಸಮಯಾವಕಾಶ ಕೋರಿದ ನವಜೋತ್ ಸಿಂಗ್ ಸಿಧುಗೆ ಈ ಬಗ್ಗೆ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದೆ. ಕೋರ್ಟ್ ಸೂಚನೆಯ ಮೇರೆಗೆ ಸಿಧು ಪರವಾಗಿ ಅರ್ಜಿ ಸಲ್ಲಿಸಿದ ವಕೀಲ ಅಭಿಷೇಕ್ ಮನುಸಿಂಘ್ವಿ, ನವಜೋತ್ ಸಿಂಗ್ ಸಿಧು ಶರಣಾಗುತ್ತಾರೆ. ಆರೋಗ್ಯ ಸಮಸ್ಯೆ ಇರುವುದರಿಂದ, ಪರಿಹಾರಕ್ಕಾಗಿ ಒಂದು ವಾರ ಕಾಲಾವಕಾಶ ಬೇಕು ಎಂದು ಕೋರಿದರು.
ನ್ಯಾಯಾಲಯದ ಎದುರು ಶರಣಾಗುವುದಾಗಿ ಸಿಧು ನಿನ್ನೆಯಷ್ಟೇ ಟ್ವೀಟ್ ಮಾಡಿದ್ದರು. ಪಂಜಾಬ್ನ ಪಾಟಿಯಾಲ ನ್ಯಾಯಾಲಯದಲ್ಲಿ ಸಿಧು ಶರಣಾಗಬಹುದು ಎಂದು ಇಂದು ಮುಂಜಾನೆ ಕೆಲ ಮಾಧ್ಯಗಳಲ್ಲಿ ವರದಿಗಳು ಪ್ರಕಟವಾಗಿದ್ದವು.
Will submit to the majesty of law ….
— Navjot Singh Sidhu (@sherryontopp) May 19, 2022
ತಾಜಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:47 am, Fri, 20 May 22