AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಾತ್ಮಕ ಹೇಳಿಕೆಗಳಿಂದ ಟೀಕೆಗೀಡಾಗಿದ್ದ ನವಜೋತ್ ಸಿಂಗ್ ಸಲಹೆಗಾರ ಮಲ್ವಿಂದರ್ ಸಿಂಗ್ ರಾಜೀನಾಮೆ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಲಹೆಗಾರನ ಸ್ಥಾನಕ್ಕೆ ಮಲ್ವಿಂದರ್ ಸಿಂಗ್ ಮಾಲಿ ರಾಜೀನಾಮೆ ನೀಡಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಂದ ಟೀಕೆಗೀಡಾಗಿದ್ದ ನವಜೋತ್ ಸಿಂಗ್ ಸಲಹೆಗಾರ ಮಲ್ವಿಂದರ್ ಸಿಂಗ್ ರಾಜೀನಾಮೆ
ನವಜೋತ್ ಸಿಂಗ್ ಸಿಧು- ಮಲ್ವಿಂದರ್ ಸಿಂಗ್
TV9 Web
| Edited By: |

Updated on: Aug 27, 2021 | 2:57 PM

Share

ನವದೆಹಲಿ: ಕಾಶ್ಮೀರ ಪ್ರತ್ಯೇಕ ದೇಶವಾಗಿದ್ದು, ಪಾಕಿಸ್ತಾನ ಹಾಗೂ ಭಾರತ ಎರಡೂ ದೇಶಗಳು ಕಾಶ್ಮೀರವನ್ನು ಅಕ್ರಮವಾಗಿ ಆವರಿಸಿಕೊಂಡಿವೆ ಎನ್ನುವ ಮೂಲಕ ಪಂಜಾಬ್​ನ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರಾದ ಮಲ್ವಿಂದರ್ ಸಿಂಗ್ ಮಾಲಿ ವಿವಾದಕ್ಕೀಡಾಗಿದ್ದರು. ಬಳಿಕ ತಲೆಬುರುಡೆ ಇರುವ ಗನ್ ಅನ್ನು ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಗನ್ ಹಿಡಿದುಕೊಂಡು ನಿಂತಿರುವ ಫೋಟೋವನ್ನು ಕೂಡ ಪೋಸ್ಟ್ ಮಾಡಿ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮಲ್ವಿಂದರ್ ಸಿಂಗ್ ಅವರನ್ನು ವಜಾ ಮಾಡಬೇಕೆಂಬ ಒತ್ತಾಯಗಳು ಕೇಳಿಬಂದಿದ್ದವು. ಈ ನಡುವೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಲಹೆಗಾರನ ಸ್ಥಾನಕ್ಕೆ ಮಲ್ವಿಂದರ್ ಸಿಂಗ್ ಮಾಲಿ ರಾಜೀನಾಮೆ ನೀಡಿದ್ದಾರೆ.

ಕಳೆದ ವಾರ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದ ಮಲ್ವಿಂದರ್ ಸಿಂಗ್, ಕಾಶ್ಮೀರ ಯಾವುದೇ ದೇಶಕ್ಕೂ ಸೇರಿದ್ದಲ್ಲ. ಅದೊಂದು ಪ್ರತ್ಯೇಕ ದೇಶ. ಭಾರತ ಹಾಗೂ ಪಾಕಿಸ್ತಾನಗಳೆರಡೂ ಅಕ್ರಮವಾಗಿ ಕಾಶ್ಮೀರದ ಭಾಗವನ್ನು ಆಕ್ರಮಿಸಿಕೊಂಡಿವೆ. ಕಾಶ್ಮೀರ ಕೇವಲ ಅಲ್ಲಿ ವಾಸಿಸುತ್ತಿರುವ ಕಾಶ್ಮೀರಿಗರಿಗೆ ಸೇರಿದ ದೇಶವಾಗಿದೆ. ಅದರ ಮೇಲೆ ಭಾರತಕ್ಕಾಗಲಿ, ಪಾಕಿಸ್ತಾನಕ್ಕಾಗಲಿ ಹಕ್ಕು ಇಲ್ಲ ಎಂದಿದ್ದರು.

ಈ ಟ್ವೀಟ್​ಗೆ ಭಾರತದ ಬಹುತೇಕ ಪಕ್ಷಗಳ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಪಕ್ಷ ಸೇರಿದಂತೆ ಅನೇಕ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಮಲ್ವಿಂದರ್ ಸಿಂಗ್ ಅವರ ಟ್ವೀಟ್ ಬಗ್ಗೆ ಶಿರೋಮಣಿ ಅಕಾಲಿ ದಳದ ನಾಯಕ ಬಿಕ್ರಂ ಮಜಿತಿಯ ಪ್ರತಿಕ್ರಿಯೆ ನೀಡಿದ್ದು, ಇದರಿಂದ ಕಾಶ್ಮೀರವನ್ನು ಉಳಿಸಿಕೊಳ್ಳಬೇಕೆಂದು ತಮ್ಮ ಪ್ರಾಣತ್ಯಾಗ ಮಾಡಿರುವ ಭಾರತದ ನೂರಾರು ಯೋಧರಿಗೆ ಅವಮಾನ ಮಾಡಿದಂತಾಗಿದೆ ಎಂದಿದ್ದರು.

ಮಲ್ವಿಂದರ್ ಸಿಂಗ್ ಪ್ರತ್ಯೇಕ ದೇಶವಾಗಿದ್ದು, ಕಾಶ್ಮೀರಿಗರಿಗೆ ಮಾತ್ರ ಸೇರಿದ್ದಾಗಿದೆ ಎಂದು ಹೇಳಿದ್ದರು. ಪಾಕಿಸ್ತಾದಂತೆ ಭಾರತ ಕೂಡ ಅಕ್ರಮವಾಗಿ ಕಾಶ್ಮೀರವನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಿದ್ದರು. ಇದು ಭಾರತದ ಹುತಾತ್ಮ ಯೋಧರಿಗೆ ಮಾಡಿರುವ ಅವಮಾನ ಎಂದು ನಿಮಗೆ ಅನಿಸುವುದಿಲ್ಲವೇ? ಎಂದು ರಾಹುಲ್ ಗಾಂಧಿ ಅವರಿಗೆ ವಿಕ್ರಂ ಪ್ರಶ್ನಿಸಿದ್ದರು. ಒಂದುವೇಳೆ ಮಲ್ವಿಂದರ್ ಸಿಂಗ್ ಹೇಳಿದ್ದರಲ್ಲಿ ಯಾವ ತಪ್ಪೂ ಇಲ್ಲ ಎಂದು ರಾಹುಲ್ ಗಾಂಧಿ ಸಮರ್ಥನೆ ಮಾಡಿಕೊಂಡರೆ ಅವರ ನಿಜವಾದ ಮುಖ ಬಯಲಾದಂತಾಗುತ್ತದೆ. ಒಂದುವೇಳೆ ಅವರು ಹುತಾತ್ಮರ ಪ್ರಾಣತ್ಯಾಗಕ್ಕೆ ಬೆಲೆ ಕೊಡುವುದಾದರೆ ಕಾಂಗ್ರೆಸ್​ನಿಂದ ಮಲ್ವಿಂದರ್ ಸಿಂಗ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು. ಇದುವರೆಗೂ ಯಾವ ಕ್ರಮ ತೆಗೆದುಕೊಂಡಿದ್ದಾರೆ? ಇದು ಏನನ್ನು ಸೂಚಿಸುತ್ತದೆ? ಎಂದು ಬಿಕ್ರಂ ವಾದಿಸಿದ್ದರು.

ಅದರ ಬೆನ್ನಲ್ಲೇ ಮಲ್ವಿಂದರ್ ಸಿಂಗ್ ಅವರನ್ನು ವಜಾಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಮಲ್ವಿಂದರ್ ಸಿಂಗ್ ಅವರ ಇತ್ತೀಚಿನ ಪೋಸ್ಟ್‌ಗಳಿಗೆ ಕ್ಯಾಪ್ಟನ್‌ ಅಮರೀಂದರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯ ಮತ್ತು ದೇಶದ ಶಾಂತಿ ಮತ್ತು ಸ್ಥಿರತೆಗೆ ಅಪಾಯಕಾರಿಯಾದ ಭೀಕರ ಮತ್ತು ಕೆಟ್ಟ ರೀತಿಯ ಟೀಕೆಗಳನ್ನು ಬಳಸದಂತೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಸಿಎಂ ಅಮರೀಂದರ್ ಸಿಂಗ್ ಬಳಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ; ನವಜೋತ್ ಸಿಂಗ್ ಸಿಧು ಬಣದಿಂದ ಸ್ಪಷ್ಟ ಸಂದೇಶ

ಅಮರೀಂದರ್ ಸಿಂಗ್​ ನೇತೃತ್ವದಲ್ಲೇ 2022ರ ಪಂಜಾಬ್ ಚುನಾವಣೆ; ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಸ್ಪಷ್ಟನೆ

(Navjot Singh Sidhu Adviser Malvinder Singh Mali Quits After Congress Ultimatum Over Remark)

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ