AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ದೇಶವಾದ ಕಾಶ್ಮೀರ ಭಾರತಕ್ಕೂ ಸೇರಿದ್ದಲ್ಲ; ವಿವಾದಕ್ಕೆ ಕಾರಣವಾಯ್ತು ಕಾಂಗ್ರೆಸ್ ನಾಯಕನ ಹೇಳಿಕೆ

ಕಾಶ್ಮೀರ ಪ್ರತ್ಯೇಕ ದೇಶ. ಭಾರತ ಹಾಗೂ ಪಾಕಿಸ್ತಾನಗಳೆರಡೂ ಅಕ್ರಮವಾಗಿ ಕಾಶ್ಮೀರದ ಭಾಗವನ್ನು ಆಕ್ರಮಿಸಿಕೊಂಡಿವೆ. ಕಾಶ್ಮೀರ ಕೇವಲ ಕಾಶ್ಮೀರಿಗರಿಗೆ ಸೇರಿದ ದೇಶವಾಗಿದೆ ಎಂದು ನವಜೋತ್ ಸಿಂಗ್ ಸಿಧು ಸಲಹೆಗಾರ ಮಲ್ವಿಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಪ್ರತ್ಯೇಕ ದೇಶವಾದ ಕಾಶ್ಮೀರ ಭಾರತಕ್ಕೂ ಸೇರಿದ್ದಲ್ಲ; ವಿವಾದಕ್ಕೆ ಕಾರಣವಾಯ್ತು ಕಾಂಗ್ರೆಸ್ ನಾಯಕನ ಹೇಳಿಕೆ
ನವಜೋತ್ ಸಿಂಗ್ ಸಿಧು- ಮಲ್ವಿಂದರ್ ಸಿಂಗ್
TV9 Web
| Edited By: |

Updated on:Aug 19, 2021 | 6:37 PM

Share

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿ 2 ವರ್ಷಗಳೇ ಕಳೆದಿವೆ. ಈ ನಡುವೆ ಪಂಜಾಬ್​ನ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರಾದ ಮಲ್ವಿಂದರ್ ಸಿಂಗ್ ಮಾಲಿ ಕಾಶ್ಮೀರ ಪ್ರತ್ಯೇಕ ದೇಶವಾಗಿದ್ದು, ಪಾಕಿಸ್ತಾನ ಹಾಗೂ ಭಾರತ ಎರಡೂ ದೇಶಗಳು ಕಾಶ್ಮೀರವನ್ನು ಅಕ್ರಮವಾಗಿ ಆವರಿಸಿಕೊಂಡಿವೆ ಎನ್ನುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಲ್ವಿಂದರ್ ಸಿಂಗ್ ಮಾಲಿ, ಕಾಶ್ಮೀರ ಯಾವುದೇ ದೇಶಕ್ಕೂ ಸೇರಿದ್ದಲ್ಲ. ಅದೊಂದು ಪ್ರತ್ಯೇಕ ದೇಶ. ಭಾರತ ಹಾಗೂ ಪಾಕಿಸ್ತಾನಗಳೆರಡೂ ಅಕ್ರಮವಾಗಿ ಕಾಶ್ಮೀರದ ಭಾಗವನ್ನು ಆಕ್ರಮಿಸಿಕೊಂಡಿವೆ. ಕಾಶ್ಮೀರ ಕೇವಲ ಅಲ್ಲಿ ವಾಸಿಸುತ್ತಿರುವ ಕಾಶ್ಮೀರಿಗರಿಗೆ ಸೇರಿದ ದೇಶವಾಗಿದೆ. ಅದರ ಮೇಲೆ ಭಾರತಕ್ಕಾಗಲಿ, ಪಾಕಿಸ್ತಾನಕ್ಕಾಗಲಿ ಹಕ್ಕು ಇಲ್ಲ ಎಂದಿದ್ದಾರೆ.

ಈ ಟ್ವೀಟ್​ಗೆ ಭಾರತದ ಬಹುತೇಕ ಪಕ್ಷಗಳ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಪಕ್ಷ ಸೇರಿದಂತೆ ಅನೇಕ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲ್ವಿಂದರ್ ಸಿಂಗ್ ಅವರ ಟ್ವೀಟ್ ಬಗ್ಗೆ ಶಿರೋಮಣಿ ಅಕಾಲಿ ದಳದ ನಾಯಕ ಬಿಕ್ರಂ ಮಜಿತಿಯ ಪ್ರತಿಕ್ರಿಯೆ ನೀಡಿದ್ದು, ಇದರಿಂದ ಕಾಶ್ಮೀರವನ್ನು ಉಳಿಸಿಕೊಳ್ಳಬೇಕೆಂದು ತಮ್ಮ ಪ್ರಾಣತ್ಯಾಗ ಮಾಡಿರುವ ಭಾರತದ ನೂರಾರು ಯೋಧರಿಗೆ ಅವಮಾನ ಮಾಡಿದಂತಾಗಿದೆ ಎಂದಿದ್ದಾರೆ.

ಮಲ್ವಿಂದರ್ ಸಿಂಗ್ ಪ್ರತ್ಯೇಕ ದೇಶವಾಗಿದ್ದು, ಕಾಶ್ಮೀರಿಗರಿಗೆ ಮಾತ್ರ ಸೇರಿದ್ದಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾದಂತೆ ಭಾರತ ಕೂಡ ಅಕ್ರಮವಾಗಿ ಕಾಶ್ಮೀರವನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಿದ್ದಾರೆ. ಇದು ಭಾರತದ ಹುತಾತ್ಮ ಯೋಧರಿಗೆ ಮಾಡಿರುವ ಅವಮಾನ ಎಂದು ನಿಮಗೆ ಅನಿಸುವುದಿಲ್ಲವೇ? ಎಂದು ರಾಹುಲ್ ಗಾಂಧಿ ಅವರಿಗೆ ವಿಕ್ರಂ ಪ್ರಶ್ನಿಸಿದ್ದಾರೆ.

ಒಂದುವೇಳೆ ಮಲ್ವಿಂದರ್ ಸಿಂಗ್ ಹೇಳಿದ್ದರಲ್ಲಿ ಯಾವ ತಪ್ಪೂ ಇಲ್ಲ ಎಂದು ರಾಹುಲ್ ಗಾಂಧಿ ಸಮರ್ಥನೆ ಮಾಡಿಕೊಂಡರೆ ಅವರ ನಿಜವಾದ ಮುಖ ಬಯಲಾದಂತಾಗುತ್ತದೆ. ಒಂದುವೇಳೆ ಅವರು ಹುತಾತ್ಮರ ಪ್ರಾಣತ್ಯಾಗಕ್ಕೆ ಬೆಲೆ ಕೊಡುವುದಾದರೆ ಕಾಂಗ್ರೆಸ್​ನಿಂದ ಮಲ್ವಿಂದರ್ ಸಿಂಗ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು. ಇದುವರೆಗೂ ಯಾವ ಕ್ರಮ ತೆಗೆದುಕೊಂಡಿದ್ದಾರೆ? ಇದು ಏನನ್ನು ಸೂಚಿಸುತ್ತದೆ? ಎಂದು ಬಿಕ್ರಂ ವಾದಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪಂಜಾಬ್​ನಲ್ಲಿ ಪಾಕಿಸ್ತಾನ ಶಾಂತಿ ಕದಡುತ್ತಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದರೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮಾತ್ರ ಪಾಕಿಸ್ತಾನದ ಸೇನೆಯ ಮುಖ್ಯಸ್ಥ ಖಾಮರ್ ಜಾವೇದ್ ಬಾಜ್ವಾ ಅವರನ್ನು ತಬ್ಬಿಕೊಂಡು ಫೋಟೋ ತೆಗೆಸಿಕೊಳ್ಳುತ್ತಾರೆ. ಇದು ಯಾವ ಸಂದೇಶವನ್ನು ರವಾನಿಸುತ್ತದೆ? ಎಂದು ವಿಪಕ್ಷಗಳು ಅಸಮಾಧಾನ ಹೊರಹಾಕಿವೆ.

ಇದನ್ನೂ ಓದಿ: ಅಫ್ಘಾನಿಸ್ತಾನದ 4 ಕಮಾಂಡರ್​ಗಳನ್ನು ಜನರೆದುರೇ ನೇಣಿಗೇರಿಸಿದ ತಾಲಿಬಾನ್; ಇದೇನಾ ಶಾಂತಿ ಸ್ಥಾಪನೆ?

ನರಕವಾಗಿದೆ ಅಫ್ಘಾನಿಸ್ತಾನ; ಆಟವಾಡುವ ಮಕ್ಕಳೂ ಇಲ್ಲಿ ತಾಲಿಬಾನ್ ಉಗ್ರರ ಲೈಂಗಿಕ ಕ್ರಿಯೆಗೆ ಮೀಸಲು!

(Navjot Singh Sidhu advisor says Kashmir is separate country India is Illegal Occupant sparks controversy)

Published On - 3:52 pm, Thu, 19 August 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ