Punjab Politics ಅಮರಿಂದರ್ ಸಿಂಗ್ ವಿರುದ್ಧ ಸಿಧು ಆಪ್ತರಾದ ಪರಗಟ್ ಸಿಂಗ್, ವಾರಿಂಗ್ ಟೀಕೆ

Capt Amarinder Singh ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್  ತಮ್ಮ ತಮ್ಮ ಏಳು ಪುಟಗಳ ರಾಜೀನಾಮೆ ಪತ್ರದಲ್ಲಿ ಗಾಂಧಿ ಕುಟುಂಬ, ಮಾಜಿ ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್, ಸಚಿವರು ಮತ್ತು ಶಾಸಕರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.

Punjab Politics ಅಮರಿಂದರ್ ಸಿಂಗ್ ವಿರುದ್ಧ ಸಿಧು ಆಪ್ತರಾದ ಪರಗಟ್ ಸಿಂಗ್, ವಾರಿಂಗ್ ಟೀಕೆ
ನವಜೋತ್ ಸಿಂಗ್ ಸಿಧು ಜತೆ ಪರಗಟ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 03, 2021 | 12:05 PM

ಚಂಡೀಗಢ: ಕ್ಯಾಪ್ಟನ್ ಅಮರಿಂದರ್ ಸಿಂಗ್ (Capt Amarinder Singh) ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಪಂಜಾಬ್ ಕ್ಯಾಬಿನೆಟ್ ಸಚಿವರಾದ ಪರಗಟ್ ಸಿಂಗ್ (Pargat Singh)  ಮತ್ತು ಅಮರಿಂದರ್ ಸಿಂಗ್ ರಾಜಾ ವಾರಿಂಗ್ (Amrinder Singh Raja) ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಹೊಸ ಪಕ್ಷ ಸ್ಥಾಪಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿಯನ್ನು ಬುಧವಾರ ಟೀಕಿಸಿದ್ದಾರೆ. ಪರಗಟ್ ಮತ್ತು ವಾರಿಂಗ್, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿದ್ದಾರೆ.  ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್  ತಮ್ಮ ತಮ್ಮ ಏಳು ಪುಟಗಳ ರಾಜೀನಾಮೆ ಪತ್ರದಲ್ಲಿ ಗಾಂಧಿ ಕುಟುಂಬ, ಮಾಜಿ ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್, ಸಚಿವರು ಮತ್ತು ಶಾಸಕರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಅವರು ತಮ್ಮ ಹೊಸ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಹೆಸರನ್ನು ಘೋಷಿಸಿದರು.

“ಏನು ವಿಪರ್ಯಾಸ ಅಮರಿಂದರ್ ಸಿಂಗ್ ಅವರ ಹೊಸ ಪಕ್ಷವು “ಪಂಜಾಬೀಸ್” ಅಥವಾ “ಲೋಕ” ಗಾಗಿ ಅಲ್ಲ ಮತ್ತು ಖಂಡಿತವಾಗಿಯೂ “ಕಾಂಗ್ರೆಸ್ ಅಲ್ಲ” ಎಂದು ಪರಗಟ್ ಟ್ವೀಟ್ ಮಾಡಿದ್ದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಧು ಮತ್ತು ಕಾಂಗ್ರೆಸ್ ಪಕ್ಷವನ್ನು ಟ್ಯಾಗ್ ಮಾಡಿದ್ದಾರೆ.

ರೈತ ವಿರೋಧಿ ಬಿಜೆಪಿಯೊಂದಿಗೆ ಸೀಟು ಹಂಚಿಕೆಗೆ ಕ್ಯಾಪ್ಟನ್ ಅಮರಿಂದರ್ ಅವರ ಯೋಜನೆಗಳ ಬಗ್ಗೆ ವಾರಿಂಗ್ ಟೀಕಾ ಪ್ರಹಾರ ಮಾಡಿದ್ದಾರೆ. “ಆತ್ಮೀಯ ಅಮರಿಂದರ್ ಸಾಹಬ್, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರಿಗೆ ನೀವು ಬರೆದ ಪತ್ರದಲ್ಲಿ ಕಾಂಗ್ರೆಸ್ ಪಂಜಾಬ್ ಮುಖ್ಯಸ್ಥ ಸರ್ದಾರ್ ಸಿಧು, ಪಾಕ್ ಸೇನಾ ಮುಖ್ಯಸ್ಥ ಮತ್ತು ಪಾಕ್ ಪಿಎಂ ಅವರನ್ನು ಆಲಂಗಿಸಿದ್ದು ನೀವು ಕಾಂಗ್ರೆಸ್ ಪಕ್ಷವನ್ನು ತೊರೆಯಲು ಕಾರಣ ಎಂದು ಉಲ್ಲೇಖಿಸಿದ್ದೀರಿ. ನೀವು ಈಗ ರೈತ ವಿರೋಧಿ ಬಿಜೆಪಿಯೊಂದಿಗೆ ‘ಸೀಟು ಹಂಚಿಕೆ’ ಮಾಡುತ್ತಿರುವಂತೆ ನೀವು ಹೊಸದಾಗಿ ಕಂಡುಕೊಂಡಿರುವ ಬಮ್‌ಚುಮ್‌ಗಳ ಕೆಲವು ಚಿತ್ರಗಳು ಇಲ್ಲಿವೆ” ಎಂದು ಅವರು ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಆಗಿನ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಜತೆಗಿನ ಹಳೆಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ಸೆಪ್ಟೆಂಬರ್ 18 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಸಿಂಗ್ ನಾಲ್ವರು ಕ್ಯಾಬಿನೆಟ್ ಮಂತ್ರಿಗಳು ಮತ್ತು ಹಲವಾರು ಪಕ್ಷದ ಶಾಸಕರು ಹೊರತಾಗಿಯೂ ಮತ್ತು ಪಂಜಾಬ್‌ನ ಬಹುತೇಕ ಎಲ್ಲಾ ಸಂಸತ್ ಸದಸ್ಯರ ಸರ್ವಾನುಮತದ ಸಲಹೆ ಕಡೆಗಣಿಸಿ ಪಾಕಿಸ್ತಾನದ ಸಹವರ್ತಿ ಸಿಧು ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು ಎಂದು ಸಿಂಗ್ ಬರೆದಿದ್ದಾರೆ.

“ನನ್ನನ್ನು ಮತ್ತು ನನ್ನ ಸರ್ಕಾರವನ್ನು ನಿಯಮಿತವಾಗಿ ನಿಂದಿಸುತ್ತಾರೆ ಎಂಬುದು ಸಿಧು ಅವರ ಖ್ಯಾತಿ. ನಾನು ಅವರ ತಂದೆಯ ವಯಸ್ಸಿನವನು. ಆದರೆ ಸಾರ್ವಜನಿಕವಾಗಿ ಮತ್ತು ಖಾಸಗಿಯಾಗಿ ನನ್ನ ವಿರುದ್ಧ ಕೆಟ್ಟ ಮತ್ತು ಅತ್ಯಂತ ಕೆಟ್ಟ ಭಾಷೆಯನ್ನು ಬಳಸುವುದನ್ನು ಅದು ತಡೆಯಲಿಲ್ಲ, ”ಎಂದು ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Captain Amarinder Singh ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

Published On - 12:05 pm, Wed, 3 November 21

ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ