Navjot Singh Sidhu ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಸಿಧು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ
ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (PPCC) ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು (Navjot Singh Sidhu) ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಸಿಧು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.
Punjab Congress chief Navjot Singh Sidhu resigns pic.twitter.com/KbDbderXeo
— ANI (@ANI) September 28, 2021
“ಮನುಷ್ಯನ ಸ್ವಭಾವದ ಕುಸಿತವು ರಾಜಿ ಮೂಲೆಯಿಂದ ಹುಟ್ಟಿಕೊಂಡಿದೆ. ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದು ನವಜೋತ್ ಸಿಧು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ದೆಹಲಿ ಭೇಟಿಗೆ ಮುನ್ನ ಅವರ ಮುಂದಿನ ಕ್ರಮದ ಬಗ್ಗೆ ಊಹಾಪೋಹಗಳ ನಡುವೆಯೇ ಸಿಧು ರಾಜೀನಾಮೆ ನೀಡಿದ್ದಾರೆ. ಸೆಪ್ಟೆಂಬರ್ 18 ರಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆರಾಜೀನಾಮೆ ನೀಡಿದ ನಂತರ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮೊದಲ ರಾಜಧಾನಿಗೆ ಭೇಟಿ ಇದಾಗಲಿದೆ.
ಪಂಜಾಬ್ ಕಾಂಗ್ರೆಸ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು.
ಇದನ್ನೂ ಓದಿ: ಬಿಜೆಪಿ ಸೇರ್ತಾರಾ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್?; ಇಂದು ಅಮಿತ್ ಶಾ, ಜೆ.ಪಿ. ನಡ್ಡಾ ಭೇಟಿ ಸಾಧ್ಯತೆ
(Navjot Singh Sidhu resigns as the president of the Punjab Pradesh Congress Committee)
Published On - 3:12 pm, Tue, 28 September 21