AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sidhu: ಪ್ರಪಂಚದಲ್ಲೇ ಅತಿದೊಡ್ಡ ಸುಳ್ಳು ಅಂದ್ರೆ ರೈತರ ಆದಾಯ ಡಬಲ್ ಮಾಡ್ತೀನಿ ಅನ್ನೋದು: ನವಜೋತ್ ಸಿಂಗ್ ಸಿಧು

Lie of MSP and Doubling Farmers Income: ಮಾಜಿ ಕ್ರಿಕೆಟಿಗ ಹಾಗು ಕಾಂಗ್ರೆಸ್ ಮುಖಂಡ ನವಜ್ಯೋತ್ ಸಿಂಗ್ ಸಿಧು ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರದ ಮಾತನ್ನು ಹಸಿ ಸುಳ್ಳು ಎಂದು ಬಣ್ಣಿಸಿದ್ದಾರೆ. ಎಂಎಸ್​ಪಿ ಹೆಚ್ಚಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರೆ ಅದು ಈ ಪ್ರಪಂಚದ ಹಸಿ ಸುಳ್ಳು ಎಂದು ಸಿಧು ಲೇವಡಿ ಮಾಡಿದ್ದಾರೆ. ಸರ್ಕಾರ 40 ರೂ ಎಂಎಸ್​ಪಿ ಹೆಚ್ಚಿಸಿ, ರೈತರಿಂದ 400 ರೂ ಕಸಿದುಕೊಳ್ಳುತ್ತದೆ ಎಂದು ಬೆಲೆ ಏರಿಕೆ ಬಿಸಿ ಬಗ್ಗೆ ಸಿಧು ಟೀಕಿಸಿದ್ದಾರೆ.

Sidhu: ಪ್ರಪಂಚದಲ್ಲೇ ಅತಿದೊಡ್ಡ ಸುಳ್ಳು ಅಂದ್ರೆ ರೈತರ ಆದಾಯ ಡಬಲ್ ಮಾಡ್ತೀನಿ ಅನ್ನೋದು: ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 18, 2024 | 5:06 PM

Share

ನವದೆಹಲಿ, ಫೆಬ್ರುವರಿ 18: ಬಿಜೆಪಿ ಸೇರಬಹುದು ಎಂಬ ವದಂತಿಗಳ ಮಧ್ಯೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು (Navjot Singh Sidhu) ರೈತರ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತಿವಿದಿದ್ದಾರೆ. ರೈತರ ಪ್ರತಿಭಟನೆ (Farmers Protest) ನಡುವೆ ಇಂದು ಭಾನುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಧು, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎನ್ನುವುದು ಹಸಿ ಸುಳ್ಳು ಎಂದು ಟೀಕಿಸಿದ್ದಾರೆ. ‘ರೈತರಿಗೆ ಎಂಎಸ್​ಪಿ ಮತ್ತು ಆದಾಯವನ್ನು ಎರಡು ಪಟ್ಟು ಹೆಚ್ಚಿಸುತ್ತೇವೆ ಎನ್ನುತ್ತಾರೆ. ಈ ಪ್ರಪಂಚದಲ್ಲಿ ಇದಕ್ಕಿಂತ ದೊಡ್ಡ ಸುಳ್ಳು ಇದೆಯೇ?’ ಎಂದು ಕಾಂಗ್ರೆಸ್​ನ ಪಂಜಾಬ್ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಸಿಧು ಲೇವಡಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್​ಡಿಎ ಸರ್ಕಾರದ ವಿರುದ್ಧ ಸಿಧು ಈ ಮೂಲಕ ಟೀಕಾ ಪ್ರಹಾರ ಮಾಡಿದ್ದಾರೆ. ನರೇಂದ್ರ ಮೋದಿ ಈ ಹಿಂದೆ ರೈತರ ಆದಾಯ ದ್ವಿಗುಣಗೊಳಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು. ಹಾಗೆಯೇ, ಕೆಲ ಬೆಳೆಗಳಿಗೆ ಯುಪಿಎ ಅವಧಿಯಲ್ಲಿ ಇದ್ದುದಕ್ಕಿಂತಲೂ ಎಂಎಸ್​ಪಿ ಈಗ ಎರಡು ಪಟ್ಟು ಹೆಚ್ಚಾಗಿದೆ ಎಂದು ಕೆಲ ಬಿಜೆಪಿ ನಾಯಕರು ಹೇಳಿದ್ದುಂಟು. ಈ ಹಿನ್ನೆಲೆಯಲ್ಲಿ ನವಜ್ಯೋತ್ ಸಿಂಗ್ ಸಿಧು ಈ ಅಭಿಪ್ರಾಯಗಳನ್ನು ಹಸಿ ಸುಳ್ಳು ಎಂದು ಬಣ್ಣಿಸಿದ್ದು, ‘ಸರ್ಕಾರ ಎಂಎಸ್​ಪಿಯನ್ನು 40 ರೂ ಹೆಚ್ಚಿಸಿ, ರೈತರಿಂದ 400 ರೂ ಕಸಿದುಕೊಳ್ಳುತ್ತಿದೆ,’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಇದೇ ಮೋದಿ ಗ್ಯಾರಂಟಿ ಎಂದ ಪ್ರಧಾನಿ

‘ಈ ಸರ್ಕಾರ ರಚನೆ ಆದಾಗಿನಿಂದ ಸಾಸಿವೆ ಎಣ್ಣೆ ಬೆಲೆ ಎರಡು ಪಟ್ಟು ಹೆಚ್ಚಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆಗಳೂ ಹೆಚ್ಚಾಗಿವೆ. ಬಡವರಿಗೆ ಪ್ರತಿಯೊಂದು ವಸ್ತುವೂ ದುಬಾರಿಯಾಗಿ ಹೋಗಿದೆ. ಅಗತ್ಯ ವಸ್ತುಗಳನ್ನು ಖರೀದಿಸುವುದೂ ಈಗ ಕಷ್ಟಕರವಾಗಿದೆ.

ನವಜೋತ್ ಸಿಧು ನೀಡಿದ ಹೇಳಿಕೆ

‘ಡೀಸೆಲ್ ಬೆಲೆ 2013ರಲ್ಲಿ ಲೀಟರ್​ಗೆ 38 ರೂ ಇದ್ದದ್ದು ಈಗ ಎರಡಕ್ಕೂ ಹೆಚ್ಚು ಪಟ್ಟು ಹೆಚ್ಚಾಗಿದೆ. ಇದೆಲ್ಲದರಿಂದ ಕೃಷಿ ಉತ್ಪಾದನೆಗೆ ಆಗುವ ವೆಚ್ಚ ಬಹಳ ಹೆಚ್ಚಾಗಿದೆ. ರೈತರಿಗೆ ಎಂಎಸ್​ಪಿ ಹೆಚ್ಚಾಗಿರುವುದು ಮಾತ್ರ 40 ರೂ ಅಷ್ಟೇ. ಸರ್ಕಾರ ರೈತರಿಗೆ 40 ರೂ ಕೊಟ್ಟು, 400 ರೂ ಕಸಿದುಕೊಳ್ಳುತ್ತೆ,’ ಎಂದು ಸಿಧು ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗ್ತಾರೆ, ದೇಶದಿಂದ ಭಯೋತ್ಪಾದನೆ, ನಕ್ಸಲಿಸಂ ಸಂಪೂರ್ಣವಾಗಿ ನಿರ್ಮೂಲನೆ ಮಾಡ್ತಾರೆ: ಅಮಿತ್ ಶಾ

ರೈತರು ನಡೆಸುತ್ತಿರುವ ದಿಲ್ಲಿ ಚಲೋ ಪ್ರತಿಭಟನೆಗೆ ಇಂದು ಆರನೇ ದಿನ. ರೈತರ ಮುಖಂಡರೊಂದಿಗೆ ಸರ್ಕಾರ ಈವರೆಗೆ ಮೂರು ಬಾರಿ ನಡೆಸಿರುವ ಮಾತುಕತೆ ಫಲಪ್ರದವಾಗಿಲ್ಲ. ಇಂದು ಭಾನುವಾರ ಸಂಜೆ 6 ಗಂಟೆಯ ನಂತರ ನಾಲ್ಕನೇ ಸುತ್ತಿನ ಮಾತುಕತೆ ಆಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Sun, 18 February 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!